ಬ್ರೇಕಿಂಗ್ ನ್ಯೂಸ್
29-12-23 04:25 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಸಮುದ್ರದಲ್ಲಿ ನೀರಾಟಕ್ಕಿಳಿದ ಮೂವರು ಯುವಕರನ್ನ ರಕ್ಕಸ ಅಲೆಗಳು ಕೊಚ್ಚಿಕೊಂಡು ಹೋದ ಘಟನೆ ಉಳ್ಳಾಲದಲ್ಲಿ ನಡೆದಿದ್ದು, ಓರ್ವ ಯುವಕ ಮೃತಪಟ್ಟರೆ, ಮತ್ತೋರ್ವ ಸಮುದ್ರ ಪಾಲಾಗಿದ್ದು , ಇನ್ನೋರ್ವನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.
ಚಿಕ್ಕಮಗಳೂರು ನಿವಾಸಿ ಸಲ್ಮಾನ್(19) ಮೃತಪಟ್ಟ ಯುವಕನಾಗಿದ್ದು , ಆತನ ಸಂಬಂಧಿ ಬಶೀರ್(23) ನೀರು ಪಾಲಾಗಿದ್ದಾನೆ. ಮತ್ತೋರ್ವ ಯುವಕ ಸೈಫ್ ಆಲಿ(27) ಆಸ್ಪತ್ರೆಯಲ್ಲಿ ಚೇತರಿಸಿದ್ದಾನೆ.
ಸಾವಿನ ದವಡೆಯಿಂದ ಪಾರಾದ ಯುವಕ ಸೈಫ್ ಅಲಿ
ಚಿಕ್ಕಮಗಳೂರು ಮೂಲದ ಬಶೀರ್, ಸಲ್ಮಾನ್ ಮತ್ತು ಸೈಫ್ ಅಲಿ ಎಂಬವರು ತಮ್ಮ ಕುಟುಂಬಸ್ಥರೊಂದಿಗೆ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿದ್ದರು. ಇಂದು ಮಧ್ಯಾಹ್ನದ ವೇಳೆ ಉಳ್ಳಾಲ ಕಡಲ ಕಿನಾರೆಗೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಬಶೀರ್, ಸಲ್ಮಾನ್, ಸೈಫ್ ಆಲಿ ನೀರಾಟಕ್ಕಿಳಿದಿದ್ದು ಸಮುದ್ರದ ರಕ್ಕಸ ಅಲೆಗಳು ಮೂವರನ್ನೂ ಎಳೆದೊಯ್ದಿದೆ.
ತಕ್ಷಣ ಸ್ಥಳೀಯ ಈಜುಗಾರರು ಸಲ್ಮಾನ್ ಮತ್ತು ಸೈಫ್ ಅಲಿಯನ್ನ ಎಳೆದು ದಡಕ್ಕೆ ಹಾಕಿದ್ದಾರೆ. ಸಲ್ಮಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಸೈಫ್ ಅಲಿ ಪ್ರಾಣಾಪಾಯದಿಂದ ಪಾರಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಶೀರ್ ನೀರು ಪಾಲಾಗಿದ್ದು ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದವರು ಆತನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಘಟನೆ ವೇಳೆ ನೀರುಪಾಲಾಗಿರುವ ಬಶೀರ್ ಅವರ ತುಂಬು ಗರ್ಭಿಣಿ ಪತ್ನಿ ಮತ್ತು ಇತರ ಇಬ್ಬರು ಮಹಿಳೆಯರು ಇದ್ದರೆಂದು ಸ್ಥಳೀಯರು ತಿಳಿಸಿದ್ದಾರೆ.
Two drowned at Beach in Ullal at Mangalore, two dead, one saved. The two have said to come from Chikmagaluru.They had come to visit ullal dargah
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 03:19 pm
Mangalore Correspondent
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
Dharmasthala, Lakshmish Tolpadi, Mangalore: ಧ...
16-09-25 07:48 pm
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
17-09-25 02:46 pm
Udupi Correspondent
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm