ಬ್ರೇಕಿಂಗ್ ನ್ಯೂಸ್
03-01-24 09:36 pm Mangalore Correspondent ಕರಾವಳಿ
ಮಂಗಳೂರು, ಜ.3: ಹುಬ್ಬಳ್ಳಿಯಲ್ಲಿ 31 ವರ್ಷ ಹಳೆಯ ಪ್ರಕರಣದಲ್ಲಿ ಹಿಂದು ಸಂಘಟನೆ ಕಾರ್ಯಕರ್ತನನ್ನು ಬಂಧಿಸಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಮಂಗಳೂರಿನಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನಾ ಧರಣಿ ನಡೆಯಿತು.
ಪ್ರತಿಭಟನೆಯಲ್ಲಿ ಮಾತನಾಡಿದ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಕಾಂಗ್ರೆಸಿನವರಿಗೆ ರಾಮ ಮಂದಿರ ನಿರ್ಮಾಣ ಆಗಲೇಬಾರದು ಎಂಬ ಭಾವನೆಯಿದೆ. ಹಾಗಾಗಿ 31 ವರ್ಷಗಳ ಹಿಂದಿನ ಪ್ರಕರಣದಲ್ಲಿ ಆರೋಪಿಯಾದವರನ್ನು ಬಂಧಿಸಿ. ರಾಮನ ಮಂದಿರ ಸಹಿಸಲಾರದೆ ಸಿದ್ದರಾಮಯ್ಯ ಸಮಾಜದಲ್ಲಿ ದ್ವೇಷ ಬಿತ್ತುವ ಕೆಲಸ ಮಾಡುತ್ತಿದ್ದಾರೆ.
ಹಿಂದೆ ಸಿದ್ದರಾಮಯ್ಯ ಅವರೇ ಪಿಎಫ್ಐ ಕಾರ್ಯಕರ್ತರ ಪ್ರಕರಣ ರದ್ದುಪಡಿಸಿ ಜೈಲಿನಿಂದ ಅವರನ್ನು ಹೊರಗೆ ಬಿಡಿಸಿದ್ದರು. ಉನ್ನತ ಪೊಲೀಸ್ ಅಧಿಕಾರಿಗಳು ರಿಲೀಸ್ ಮಾಡಬೇಡಿ ಎಂದಿದ್ದರೂ ಸಿದ್ದರಾಮಯ್ಯ ರಿಲೀಸ್ ಮಾಡಿದ್ದರು. ಅಯೋಧ್ಯೆಯಲ್ಲಿ ದೇಶದ ಜನ ಹೆಮ್ಮೆ ಪಡುವ ರೀತಿ ರಾಮನ ಮಂದಿರ ಆಗುತ್ತಿದ್ದರೆ, ಇತ್ತ ಕಾಂಗ್ರೆಸಿಗರು ವಿಷ ಕಾರುತ್ತಿದ್ದಾರೆ. 1992ರ ಗಲಭೆ ಪ್ರಕರಣ ಹೊರತೆಗೆದು ಆರೋಪಿಗಳನ್ನು ಬಂಧಸಲು ಆರಂಭಿಸಿದ್ದಾರೆ. ಬಿಕೆ ಹರಿಪ್ರಸಾದ್ ಹಿರಿಯ ನಾಯಕರಾಗಿದ್ದು ದೇಶದಲ್ಲಿ ಗೋಧ್ರಾ ಮಾದರಿ ಹತ್ಯಾಕಾಂಡ ಆಗುತ್ತೆ ಎಂದಿದ್ದಾರೆ. ಆಮೂಲಕ ಕಾಂಗ್ರೆಸ್ ಒಳಗೊಳಗೆ ಮಾಡಿಸುತ್ತಿರುವ ಸಂಚನ್ನು ಹೊರಗೆ ಹೇಳಿದ್ದಾರೆ. ಇದೆಲ್ಲ ನೋಡಿದರೆ, ದೇಶದಲ್ಲಿ ರಾಮನ ಮಂದಿರ ಉದ್ಘಾಟನೆ ಸಂದರ್ಭದಲ್ಲೇ ಮತ್ತೆ ಗಲಭೆ ಎಬ್ಬಿಸಲು ಸಂಚು ನಡೆಸಿರುವಂತೆ ತೋರುತ್ತಿದೆ ಎಂದರು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಬಿಜೆಪಿ ರಾಜ್ಯ ಕಾರ್ಯದರ್ಶಿ ಬೃಜೇಶ್ ಚೌಟ, ಕಸ್ತೂರಿ ಪಂಜ, ಹರಿಕೃಷ್ಣ ಬಂಟ್ವಾಳ, ಜಗದೀಶ ಶೇಣವ ಮೊದಲಾದವರು ಪಾಲ್ಗೊಂಡಿದ್ದರು.
Congress is trying to create only riots in the name of Ram Mandir slams MLA Bharath Shetty.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm