ಬ್ರೇಕಿಂಗ್ ನ್ಯೂಸ್
03-01-24 09:48 pm Mangalore Correspondent ಕರಾವಳಿ
ಮಂಗಳೂರು, ಜ.3: ಶ್ರೀರಾಮ ಜನ್ಮಭೂಮಿ ಆಂದೋಲನ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳ ನೆಪದಲ್ಲಿ ರಾಮನ ಭಕ್ತರನ್ನು ಬಂಧಿಸಿ ಹಿಂಸಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. 70-80 ವಯಸ್ಸಿನವರನ್ನು ಈಗ ಬಂಧಿಸಿ ಜೈಲಿಗಟ್ಟುವ ಅಗತ್ಯವೇನು ಎಂದು ವಿಶ್ವ ಹಿಂದು ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪ್ರಶ್ನಿಸಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಹಳೆ ಕೇಸುಗಳಿಗೆ ಜೀವ ಕೊಡುತ್ತಿದೆ. 30-35 ವರ್ಷಗಳಷ್ಟು ಹಳೆಯ ಪ್ರಕರಣಗಳು, ಅದರಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಇದ್ದವರು 70 ರಿಂದ 80 ವರ್ಷದೊಳಗಿದ್ದಾರೆ. ಅಂಥವರನ್ನು ವಾರೆಂಟ್ ಇದೆಯೆಂದು ಹೇಳಿ ಪ್ರಕರಣವನ್ನು ಮರುತನಿಖೆ ನಡೆಸುತ್ತಿದ್ದು ಆಮೂಲಕ ರಾಮಭಕ್ತರನ್ನು ಹಿಂಸಿಸುತ್ತಿದ್ದಾರೆ.

ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾಗಿದ್ದ ಪ್ರಕರಣಗಳಲ್ಲಿ ಹೆಚ್ಚಿನವು ಬೋಗಸ್ ಆಗಿದ್ದರಿಂದ ಹಿಂದಿನ ಕೆಲವು ಸರ್ಕಾರಗಳು ಅವುಗಳನ್ನು ರದ್ದುಗೊಳಿಸಿದ್ದವು. ಇಂದು, ಆ ಕೇಸನ್ನು ಮರುತನಿಖೆ ನಡೆಸಲು ಆದೇಶಿಸಿ ಬದುಕುಳಿದ ಆ ಕಾರ್ಯಕರ್ತರನ್ನು ಮತ್ತೆ ಬಂಧಿಸುತ್ತಿರುವುದು ಖಂಡನೀಯ. ಈ ಎಲ್ಲ ಕಾರ್ಯಕರ್ತರನ್ನು ಬಂಧಿಸುವ ಮೂಲಕ ಕಾಂಗ್ರೆಸ್ ಸರ್ಕಾರ ರಾಮ ವಿರೋಧಿ ಧೋರಣೆಯನ್ನು ತೋರಿಸುತ್ತಿದೆ.
ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಮತ್ತು ಯಾವುದೇ ಕಾರಣಕ್ಕೂ ರಾಮಭಕ್ತರನ್ನು ಬಂಧಿಸಬಾರದು ಎಂದು ಆಗ್ರಹಿಸುತ್ತೇನೆ. ಮರು ತನಿಖೆ ಹೆಸರಿನಲ್ಲಿ ರಾಮ ಭಕ್ತರನ್ನು ಬಂಧಿಸಿದರೆ ಇದಕ್ಕೆ ಕರ್ನಾಟಕ ಜನತೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪುವೆಲ್ ಪತ್ರಿಕಾ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Srikanath Poojari arrest, Vishwa Hindu parishad in Mangalore say Ram Bhakts have been targeted.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm