ಬ್ರೇಕಿಂಗ್ ನ್ಯೂಸ್
05-01-24 02:45 pm Udupi Correspondent ಕರಾವಳಿ
ಉಡುಪಿ, ಜ.5: ಗೋವಾದ ಕಾಕೋಡದಲ್ಲಿರುವ ಮಹಾದೇವ ದೇವಾಲಯದ ಆವರಣದಲ್ಲಿ ಹತ್ತನೇ ಶತಮಾನದ ಕನ್ನಡ ಮತ್ತು ಸಂಸ್ಕೃತ ಲಿಪಿಯುಳ್ಳ ಶಾಸನ ಪತ್ತೆಯಾಗಿದೆ. ಅಲ್ಲಿದ್ದ ಅಪ್ರಕಟಿತ ಕನ್ನಡ ಶಾಸನವನ್ನು ಗೋವಾದ ಪರಿಸರ ಹೋರಾಟಗಾರ ಡಾ.ರಾಜೇಂದ್ರ ಕೇರ್ಕರ್ ಗುರುತಿಸಿ ಗಮನಕ್ಕೆ ತಂದಿದ್ದಾರೆ ಎಂದು ಶಿರ್ವ ಕಾಲೇಜಿನ ಪ್ರಾಚೀನ ಇತಿಹಾಸ ಮತ್ತು ಪುರಾತತ್ತ್ವ ಶಾಸ್ತ್ರ ವಿಭಾಗದ ನಿವೃತ್ತ ಸಹ ಪ್ರಾಧ್ಯಾಪಕ ಪ್ರೊ.ಟಿ.ಮುರುಗೇಶಿ ತಿಳಿಸಿದ್ದಾರೆ.
ಆಯತಾಕಾರದ ಶಿಲೆಯ ಮೇಲೆ ಕನ್ನಡ ಲಿಪಿ ಹಾಗೂ ಸಂಸ್ಕೃತ ಬಾಷೆಯ ದೇವನಾಗರಿ ಲಿಪಿಯಲ್ಲಿ ಬರೆಯಲಾದ ದ್ವಿಭಾಷಾ ಶಾಸನವಾಗಿದೆ. ಶಾಸನ ಸ್ವಸ್ತಿಶ್ರೀ ಎಂಬ ಮಂಗಲವಾಚಕ ಪದದೊಂದಿಗೆ ಆರಂಭವಾಗಿದೆ. ಗೋವಾದಲ್ಲಿನ ಒಂದು ಮಂಡಲದ ಆಳ್ವಿಕೆಯನ್ನು ನಡೆಸುತ್ತಿದ್ದ, ತಳಾರ ನೇವಯ್ಯ ಎಂಬವನು ತನ್ನ ಮಗ ಗುಂಡಯ್ಯನ ಶೌರ್ಯ, ಸಾಹಸವನ್ನು ದುಃಖದಿಂದ ಕೊಂಡಾಡುತ್ತಾ, ತನ್ನ ಆಸೆಯನ್ನು ಈಡೇರಿಸುವ ಪ್ರತಿಜ್ಞೆ ಮಾಡಿ, ಬಂದರು ನಗರ ಗೋಪುರವನ್ನು (ಈಗಿನ ಗೋವಾ) ವಶಪಡಿಸಿ, ತನ್ನ ತಂದೆಯ ಆಸೆಯನ್ನು ಈಡೇರಿಸಿ ವೀರಮರಣ ಹೊಂದಿದ ಎಂಬುದನ್ನು ಈ ಶಾಸನ ವಿವರಿಸುತ್ತದೆ.
ಮೃತ ಗುಂಡಯ್ಯನ ವೀರಸ್ಮಾರಕವಾಗಿ ನೇವಯ್ಯ ಈ ವೀರಶಾಸನವನ್ನು ಕಾಕೋಡದ ಮಹಾದೇವಾಲಯದ ಆವರಣದಲ್ಲಿ ನಿಲ್ಲಿಸಿದ ಸಂಗತಿಯನ್ನು ಶಾಸನದಲ್ಲಿ ದಾಖಲಿಸಲಾಗಿದೆ. ಶಾಸನವನ್ನು 10ನೇ ಶತಮಾನದ ಲಿಪಿಯಲ್ಲಿ ಬರೆಯಲಾಗಿದೆ. ಶಾಸನದಲ್ಲಿ ಯಾವುದೇ ರಾಜಮನೆತನ ಹಾಗೂ ಕಾಲದ ಉಲ್ಲೇಖ ಕಂಡುಬರುವುದಿಲ್ಲ. ಕರ್ನಾಟಕದ ಕದಂಬರು, ಕಲ್ಯಾಣ ಚಾಲುಕ್ಯ ಚಕ್ರವರ್ತಿ ಎರಡನೇ ತೈಲಪನಿಗೆ ರಾಷ್ಟ್ರಕೂಟರನ್ನು ಪದಚ್ಯುತಗೊಳಿಸುವಲ್ಲಿ ನೆರವಾಗಿದ್ದರು. ಆದ್ದರಿಂದ ಕಲ್ಯಾಣ ಚಾಲುಕ್ಯ ಚಕ್ರವರ್ತಿ ಎರಡನೇ ತೈಲಪನು ಕದಂಬ ರಾಜಮನೆತನದ ಶಾಸ್ತದೇವನನ್ನು ಗೋವಾದ ಮಹಾಮಂಡಲೇಶ್ವರನೆಂದು ನೇಮಿಸಿದ್ದನು.
ಗೋವಾದ ಶಿಲಾಹಾರರಿಂದ ಚಂದಾವರವನ್ನು ವಶಪಡಿಸಿಕೊಂಡ ಕದಂಬ ಶಾಸ್ತದೇವನು ಕ್ರಿ.ಶ. 960ರಲ್ಲಿ ಗೋವಾದ ಚಂದಾವರವನ್ನು ರಾಜಧಾನಿ ಮಾಡಿಕೊಂಡು, ಗೋವಾದಲ್ಲಿ ಸ್ವತಂತ್ರ ಕದಂಬ ರಾಜಮನೆತನದ ಆಳ್ವಿಕೆಯನ್ನು ಆರಂಭಿಸಿದ್ದ. ನಂತರ ಬಂದರು ನಗರ ಗೋಪುರ ಪಟ್ಟಣವನ್ನು ವಶಪಡಿಸಿಕೊಂಡು ಸಂಪೂರ್ಣ ದಕ್ಷಿಣ ಗೋವಾದ ಮೇಲೆ ತನ್ನ ಅಧಿಪತ್ಯ ಸ್ಥಾಪಿಸಿದ್ದ. ಶಾಸನದಲ್ಲಿ ಗೋಪುರಪಟ್ಟಣವನ್ನು ಗೆದ್ದ ಗುಂಡಯ್ಯನ ಸಾಹಸವನ್ನು ನೆನೆಯಲಾಗಿದೆ. ಮೃತ ಗುಂಡಯ್ಯನ ತಂದೆಯನ್ನು ತಳಾರ ನೇವಯ್ಯನೆಂದು ವರ್ಣಿಸಲಾಗಿದೆ. ತಳಾರ ಎಂದರೆ ಸೇವಕ ಎಂಬ ಅರ್ಥವಿದೆ. ಆದ್ದರಿಂದ ಶಾಸನೋಕ್ತ ತಳಾರ ನೇವಯ್ಯನು ಗೋವಾ ಕದಂಬರ ಸಾಮಂತನಾಗಿ ಒಂದು ಮಂಡಲದ ಅಧಿಪತಿಯಾಗಿ ಆಳ್ವಿಕೆ ನಡೆಸುತ್ತಿದ್ದ ಎಂದೂ, ಕದಂಬ ಶಾಸ್ತದೇವನ ಗೋಪುರಪಟ್ಟಣದ ಮೇಲಿನ ದಾಳಿಯಲ್ಲಿ ನೇವಯ್ಯನ ಆಸೆಯಂತೆ ಆತನ ಮಗ ಗುಂಡಯ್ಯ ಭಾಗವಹಿಸಿ ಗೋಪುರಪಟ್ಟಣವನ್ನು ಗೆದ್ದು ವೀರಮರಣ ಹೊಂದಿದ ಎಂದು ಭಾವಿಸಬಹುದಾಗಿದೆ.
ಗೋವಾ ಕದಂಬರ ಆಳ್ವಿಕೆಯ ಆರಂಭಿಕ ಕಾಲದ ಲಿಪಿ ಲಕ್ಷಣವನ್ನು ಶಾಸನದ ಲಿಪಿಗಳು ಹೋಲುವುದರಿಂದ ಶಾಸನದ ಕಾಲವನ್ನು ಕ್ರಿ.ಶ.10ನೇ ಶತಮಾನದ ಶಾಸನವೆಂದು ನಿರ್ಧರಿಸಬಹುದಾಗಿದೆ ಎಂದು ಪ್ರೊ.ಮುರುಗೇಶಿ ತಿಳಿಸಿದ್ದಾರೆ.
ಡಾ.ರಾಜೇಂದ್ರ ಕೇರ್ಕರ್ ಅವರು ಈ ಅಪರೂಪದ ಶಾಸನವನ್ನು ತಮ್ಮ ಗಮನಕ್ಕೆ ತಂದು ಸಂಶೋಧನೆಗೆ ಸಹಕರಿಸಿದ್ದಾರೆ ಎಂದಿರುವ ಪ್ರೊ.ಟಿ. ಮುರುಗೇಶಿ, ಶಾಸನದ ಪಠ್ಯವನ್ನು ಸಿದ್ಧಪಡಿಸುವಲ್ಲಿ, ಸಂಶೋಧಿಸುವಲ್ಲಿ ಹಾಗೂ ಅರ್ಥೈಸುವಲ್ಲಿ ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಶಾಸನಶಾಸ್ತ್ರ ವಿಭಾಗದ ನಿರ್ದೇಕರಾದ ಡಾ. ಮುನಿರತ್ನ ರೆಡ್ಡಿ, ಡಾ. ನಾಗರಾಜಪ್ಪ ಮತ್ತು ಆರ್ಕೆ ಮಣಿಪಾಲ್ ಇವರ ಸಹಕಾರವನ್ನು ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
A rare inscription written in Kannada and Sanskrit languages was in the premises Mahadeva temple at Cacoda in Southern Goaby by Dr Rajendra Kerkar, a dedicated environmentalist of Goa. Prof T Murugeshi, associate professor in ancient history and archaeologist from Udupi informed that the epigraph is engraved in Kannada and Nagari characters of 10th century AD, and belongs to the Kadambas of Goa.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm