Sullia Banner, Ayodhya: ಸುಳ್ಯದಲ್ಲಿ ರಾಮ ಮಂದಿರ ಬ್ಯಾನರ್ ಹರಿದ ಪ್ರಕರಣ ; ಮಾನಸಿಕ ಅಸ್ವಸ್ಥ ವ್ಯಕ್ತಿಯ ಕೃತ್ಯ, ಗೊಂದಲಕ್ಕೆ ತೆರೆ

07-01-24 04:52 pm       Mangalore Correspondent   ಕರಾವಳಿ

ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.

ಪುತ್ತೂರು, ಜ.7: ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿ ಅಯೋಧ್ಯೆ ಶ್ರೀರಾಮ ಮಂದಿರದ ಲೋಕಾರ್ಪಣೆ ಕುರಿತಾಗಿ ಹಾಕಲಾಗಿದ್ದ ಬ್ಯಾನರ್ ಹರಿದ ಪ್ರಕರಣವನ್ನು ಸುಳ್ಯ ಪೊಲೀಸರು ಭೇದಿಸಿದ್ದು, ಮಧ್ಯರಾತ್ರಿ ಮಾನಸಿಕ ಅಸ್ವಸ್ಥ ವ್ಯಕ್ತಿ ಎಸಗಿರುವ ಕೃತ್ಯ ಎಂದು ತನಿಖೆಯಲ್ಲಿ ತಿಳಿದುಬಂದಿರುತ್ತದೆ.

ಜ.5ರಂದು ರಾತ್ರಿ ವೇಳೆ ಬ್ಯಾನರನ್ನು ಹರಿದು ಹಾಕಿದ ಬಗ್ಗೆ ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರು ಸುಳ್ಯ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದರು. ಶ್ರೀರಾಮ ಮಂದಿರದ ಬ್ಯಾನರ್ ಹರಿದ ಬಗ್ಗೆ ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕೆಂದು ಆಗ್ರಹ ಮಾಡಿತ್ತು.

ಪೊಲೀಸರು ಸುಳ್ಯ ಪೇಟೆಯ ಆಸುಪಾಸಿನಲ್ಲಿ 40 ಕಡೆಯ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಜ.5ರಂದು ಮಧ್ಯರಾತ್ರಿ ಮಾನಸಿಕ ಅಸ್ವಸ್ಥನಂತೆ ಕಂಡುಬರುವ ವಯಸ್ಸಾದ ವ್ಯಕ್ತಿಯೊಬ್ಬ ಆ ಬ್ಯಾನರನ್ನು ಹರಿದು ಸುಳ್ಯ ಪೇಟೆಯಲ್ಲಿ ಸುತ್ತಾಡಿರುವುದು ಕಂಡುಬಂದಿದೆ. ಸುಳ್ಯದ ವಿವೇಕಾನಂದ ಸರ್ಕಲ್ ಬಳಿ ಹರಿದ ಬ್ಯಾನರ್ ತುಂಡನ್ನು ಇಟ್ಟು ರಾಮನ ಜಪ ಮಾಡಿರುವುದನ್ನು ಸಾರ್ವಜನಿಕರು ನೋಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ.

ಹರಿದ ಬ್ಯಾನರ್ ತುಂಡನ್ನು ಪರಿಶೀಲಿಸಿದಾಗ ಶ್ರೀರಾಮನ ಫೋಟೊಗೆ ಯಾವುದೇ ಹಾನಿ ಮಾಡಿರುವುದು ಕಂಡುಬಂದಿಲ್ಲ. ಹರಿದ ಬ್ಯಾನರ್ ತುಂಡನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ಬಗ್ಗೆ ತನಿಖೆ ಮುಂದುವರಿಸಿದ್ದಾರೆ. ಯಾರೋ ಕಿಡಿಗೇಡಿಗಳು ಕೋಮು ದ್ವೇಷ ಹರಡಿಸುವುದಕ್ಕಾಗಿ ಇಂತಹ ಕೃತ್ಯ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿತ್ತು. ಆದರೆ ತನಿಖೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಎನ್ನುವುದು ತಿಳಿಯುತ್ತಲೇ ವಾತಾವರಣ ತಿಳಿಯಾಗಿದೆ.

Sullia banner of Sri Ram torn sparks outrage, BJP leaders demand action. A banner featuring the image of deity Sri Ram, displayed near the private bus stand in the city to commemorate the Sullia temple fair, the inauguration of the Ram Mandir in Ayodhya, and the silver jubilee of the BMS autorickshaw drivers’ union, was vandalized by miscreants.