ಬ್ರೇಕಿಂಗ್ ನ್ಯೂಸ್
08-01-24 10:35 pm Udupi Correspondent ಕರಾವಳಿ
ಉಡುಪಿ, ಜ.8: ಉಡುಪಿಯ ಅಷ್ಟ ಮಠಗಳ ಪರ್ಯಾಯ ಮಹೋತ್ಸವಕ್ಕೆ ತಡೆ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಪರ್ಯಾಯ ಪೀಠವನ್ನು ಈ ಸಲ ಪುತ್ತಿಗೆ ಶ್ರೀಗಳು ನಿರ್ವಹಿಸಲಿದ್ದು ಸಮುದ್ರೋಲ್ಲಂಘನೆ ಮಾಡಿ ವಿದೇಶಕ್ಕೆ ಪ್ರಯಾಣಿಸಿ ಸಂಪ್ರದಾಯ ಉಲ್ಲಂಘಿಸಿದ್ದಾರೆಂದು ಅವರಿಗೆ ಪರ್ಯಾಯ ನೀಡದಂತೆ ಕೋರಿ ಗುರುರಾಜ ಜೀವನರಾವ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ಕುರಿತು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರಿದ್ದ ಪೀಠ ವಿದೇಶದಲ್ಲಿ ಜ್ಞಾನ ಪ್ರಸಾರ ಮಾಡಿದರೆ ತಪ್ಪೇನು ಎಂದು ಪ್ರಶ್ನಿಸಿದೆ.
ರಾಷ್ಟ್ರಕವಿ ಕುವೆಂಪು ಅವರ ಕವಿತೆ ‘ಓ ನನ್ನ ಚೇತನ, ಆಗು ನೀ ಅನಿಕೇತನ’ ಕವಿತೆ ಉಲ್ಲೇಖಿಸಿದ ನ್ಯಾಯಪೀಠ, ಮನೆ ಕಟ್ಟಿ ಕೂರುವುದಕ್ಕಿಂತ ಹೊರಗೆ ಓಡಾಡುವುದು ಲೇಸು. ಧಾರ್ಮಿಕ ಆಚರಣೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿ, ಅರ್ಜಿಯನ್ನು ವಜಾಗೊಳಿಸಿದೆ. 2008ರಲ್ಲಿ ಕೂಡ ಪುತ್ತಿಗೆ ಶ್ರೀಗಳ ಪರ್ಯಾಯ ಪೀಠಾರೋಹಣಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದೇ ಜನವರಿ ಹದಿನೆಂಟರಂದು ಪುತ್ತಿಗೆ ಶ್ರೀಗಳು ಪರ್ಯಾಯ ಪೀಠ ಏರಲಿದ್ದಾರೆ.
ಧರ್ಮ ಎನ್ನುವುದು ದೇಶಾತೀತ, ಗಡಿಗಳ ಭೇದ ಇಲ್ಲ..
ಹೈಕೋರ್ಟ್ ಆದೇಶದ ಬಗ್ಗೆ ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಪ್ರತಿಕ್ರಿಯಿಸಿದ್ದು ಇವೆಲ್ಲ ಶ್ರೀಕೃಷ್ಣ ಮುಖ್ಯಪ್ರಾಣ ದೇವರ ಅನುಗ್ರಹ. ಕೃಷ್ಣನ ಅನುಗ್ರಹ ಇದ್ದರೆ ಎಲ್ಲವೂ ಒಳ್ಳೆಯದಾಗುತ್ತದೆ. ನ್ಯಾಯಮೂರ್ತಿಗಳು ಒಳ್ಳೆಯ ವಿಚಾರವನ್ನೇ ಹೇಳಿದ್ದಾರೆ. ನಾವು ಯಾವುದೇ ದೈಶಿಕ ವಿಚಾರಕ್ಕೆ ಒಳಪಟ್ಟವರಲ್ಲ. ಆಧ್ಯಾತ್ಮಿಕ ವಿಚಾರ ಗಡಿ ದಾಟಿ ಇರಬೇಕು. ದೈಶಿಕ ನಿರ್ಬಂಧಕ್ಕೆ ಧಾರ್ಮಿಕ ವಿಚಾರ ಒಳಗಾಗಬಾರದು.
ಯಾವುದೇ ಬ್ಯಾರಿಕೇಡ್ ಇರಬಾರದು, ಒಳ್ಳೆಯ ವಿಚಾರ ಎಲ್ಲಾ ಕಡೆ ಪಸರಿಸಬೇಕು. ಸದ್ವಿಚಾರಗಳು ಪ್ರಪಂಚದಲ್ಲಿ ವ್ಯಾಪ್ತವಾಗಬೇಕು. ಆಧ್ಯಾತ್ಮಿಕ ವಿಚಾರ ವಿಶ್ವವ್ಯಾಪಿ ಆಗಬೇಕು. ಧಾರ್ಮಿಕ ವಿಚಾರದಲ್ಲಿ ಮಧ್ಯ ಪ್ರವೇಶ ಮಾಡಲ್ಲ ಎಂದಿರುವುದು ಒಳ್ಳೆಯ ವಿಚಾರ. ಧಾರ್ಮಿಕ ವಿಚಾರ ಧಾರ್ಮಿಕ ವ್ಯಕ್ತಿಗಳಿಗೆ ಸಂಬಂಧಪಟ್ಟದ್ದು. ನ್ಯಾಯಾಲಯಗಳು ಹಸ್ತಕ್ಷೇಪ ಮಾಡುವುದು ಸರಿಯಲ್ಲ. ಧರ್ಮ ಎನ್ನುವುದು ದೇಶಾತೀತ, ಪ್ರಪಂಚದಾದ್ಯಂತ ಹಿಂದುಗಳಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.
The Karnataka High Court has dismissed a public interest litigation (PIL) seeking a stay on the alternative mahotsava of Ashta Mutts in Udupi. Gururaja Jeevan Rao had filed a public interest litigation (PIL) seeking not to give him an alternative as he had violated the tradition by travelling abroad in violation of the sea.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm