ಬ್ರೇಕಿಂಗ್ ನ್ಯೂಸ್
20-11-20 05:13 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 20: ಮರಾಠ ಅಭಿವೃದ್ಧಿ ನಿಗಮದ ಬಗ್ಗೆ ಟೀಕಿಸಿ ಕ್ರೈಸ್ತರನ್ನು ಬೀದಿಗಿಳಿಸುತ್ತೇವೆ ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜಾಗೆ ಬಿಜೆಪಿಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿಸೋಜ ತಿರುಗೇಟು ನೀಡಿದ್ದಾರೆ. ರಾಜ್ಯದಲ್ಲಿ ಬಿಎಸ್ ಯಡಿಯೂರಪ್ಪರ ಆಡಳಿತವನ್ನು ಸಹಿಸಲಾಗದೆ ಕಾಂಗ್ರೆಸಿನವರು ಕ್ರಿಶ್ಚಿಯನ್ನರನ್ನು ಎತ್ತಿಕಟ್ಟುವ ಕೆಲಸಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಜೋಯ್ಲಸ್ ಡಿಸೋಜ, 2011-12ರ ಬಜೆಟ್ ನಲ್ಲಿ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ಯಡಿಯೂರಪ್ಪ ಸರಕಾರ ಕ್ರೈಸ್ತ ಸಮುದಾಯದ ಅಭಿವೃದ್ಧಿಗೆ 50 ಕೋಟಿ ರೂಪಾಯಿ ಅನುದಾನ ಮೀಸಲಿಟ್ಟಿದ್ದರು. ಈ ಬಾರಿ 2020-21ರ ಸಾಲಿನ ಬಜೆಟ್ ನಲ್ಲಿ ಯಡಿಯೂರಪ್ಪ , ಕ್ರೈಸ್ತರ ಅಭಿವೃದ್ಧಿಗಾಗಿ 50 ಕೋಟಿ ರೂಪಾಯಿ ಮೀಸಲಿಡುವ ಮೂಲಕ ಕ್ರಿಶ್ಚಿಯನ್ನರಿಗೆ ಅತಿ ಹೆಚ್ಚು ಅನುದಾನ ಕೊಟ್ಟ ಸಿಎಂ ಎಂಬ ಹೆಗ್ಗಳಿಕೆ ಗಳಿಸಿದ್ದಾರೆ.


ಮತ ಬ್ಯಾಂಕ್ ರಾಜಕೀಯಕ್ಕಾಗಿ ಕ್ರೈಸ್ತ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹರಿಸುವ ಕಾಂಗ್ರೆಸಿನ ಐವನ್ ಡಿಸೋಜ, ವಿಧಾನ ಪರಿಷತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರದೇ ಸರಕಾರ ಇತ್ತು. ಅಂದಿನ ಸಿಎಂ ಸಿದ್ಧರಾಮಯ್ಯರ ಜೊತೆ ಬಾಲಂಗೋಚಿಯಂತೆ ತಿರುಗುತ್ತಿದ್ದ ಇವರಿಗೆ ಆಗ ಕ್ರೈಸ್ತ ಸಮುದಾಯದ ಬಗ್ಗೆ ನೆನಪಾಗಲಿಲ್ಲ. ಕೇವಲ ಪ್ರಚಾರಕ್ಕಾಗಿ ಭಾಷಣ ಮಾಡುವ ಇವರಿಂದ ಕ್ರೈಸ್ತರ ಅಭಿವೃದ್ಧಿ ಸಾಧ್ಯವಿಲ್ಲವೆಂದು ಜನರೇ ಕಾಂಗ್ರೆಸನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ. ಕ್ರೈಸ್ತ ಸಮುದಾಯಕ್ಕೆ ಕಾಂಗ್ರೆಸ್ ನೀಡಿರುವ ಕೊಡುಗೆ ಏನೆಂದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.
ಇತ್ತೀಚಿನ ಚುನಾವಣೆಗಳಲ್ಲಿ ಕ್ರೈಸ್ತ ಸಮುದಾಯ ಬಿಜೆಪಿಗೆ ಬೆಂಬಲಿಸುತ್ತಿರುವುದನ್ನು ತಿಳಿದ ಕಾಂಗ್ರೆಸ್ ಪಕ್ಷ, ಹತಾಶೆಗೊಂಡು ಶಾಂತಿಯಿಂದ ಬದುಕುತ್ತಿರುವ ಜನರನ್ನು ಎತ್ತಿಕಟ್ಟುತ್ತಿದೆ. ಸುಳ್ಳು ಹೇಳಿಕೆಗಳನ್ನು ನಾಯಕರು ಸಮಾಜವನ್ನು ಅಶಾಂತಿಗೆ ತಳ್ಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಈ ಬುದ್ಧಿಯನ್ನು ಜನ ಅರ್ಥ ಮಾಡಿಕೊಂಡಿದ್ದು, ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಜೋಯ್ಲಸ್ ಡಿಸೋಜ ತಿರುಗೇಟು ನೀಡಿದ್ದಾರೆ.
Ivan D'Souza of the Congress party, who sheds crocodile tears in order to garner votes of Christian community did not remember the Christian community of the state nor did not do any better to the Christian community slammed Joylus Dsouza president of Christian Development Committee.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm