ಬ್ರೇಕಿಂಗ್ ನ್ಯೂಸ್
16-01-24 05:55 pm Mangalore Correspondent ಕರಾವಳಿ
ಉಳ್ಳಾಲ, ಜ.16: ಕಮೀಷನರ್ ಕಚೇರಿಗೆ ಬರುವ ಮರಳು ಮಾಫಿಯಾಗಳಿಗೆ ಬ್ಲ್ಯಾಕ್ ಟೀ ನೀಡಿ ಉಪಚರಿಸುವ ಪೊಲೀಸ್ ಆಯುಕ್ತರು ಕೋಮುವಾದಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ನ್ಯಾಯಯುತವಾಗಿ ಪ್ರತಿಭಟಿಸುವವರ ಮೇಲೆ ಪ್ರಕರಣ ದಾಖಲಿಸಿದ್ದು ಖಂಡನೀಯ. ದುಡಿಯುವ ವರ್ಗದವರೊಂದಿಗಿರುವ ಸಂಘಟನೆಯ ಶಕ್ತಿ ಏನೆಂದು ನಿಮಗೆ ಇಂದು ಸ್ಯಾಂಪಲ್ ತೋರಿಸಿರುವುದಾಗಿ ಡಿವೈಎಫ್ ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.
ಶ್ರೀರಂಗ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಸ್ಲಿಂ ಮಹಿಳೆಯರನ್ನ ನಿಂದಿಸಿ, ಅವಹೇಳನಕಾರಿ ಮಾತನಾಡಿದ್ದ ಕಲ್ಲಡ್ಕ ಪ್ರಭಾಕರ ಭಟ್ ಬಂಧಿಸುವಂತೆ ಒತ್ತಾಯಿಸಿ ತೊಕ್ಕೊಟ್ಟಿನಲ್ಲಿ ಧರಣಿ ನಡೆಸಿದ್ದ ಡಿವೈಎಫ್ಐ ಮುಖಂಡರ ವಿರುದ್ಧ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಉಳ್ಳಾಲ ತಾಲೂಕು ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳವಾರ ನಡೆದ ಉಳ್ಳಾಲ ಠಾಣೆಗೆ ಮುತ್ತಿಗೆ ಪ್ರತಿಭಟನಾ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದರು.
ಪೊಲೀಸರ ಕಾನೂನು ವಿರೋಧಿ ನೀತಿ ವಿರೋಧಿಸಿ ಹೋರಾಟ ಮಾಡಲು ನಮಗೆ ಹಕ್ಕಿದೆ. ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ. ಇಲ್ಲಿ ಎಲ್ಲಾ ವ್ಯವಸ್ಥೆ ಇರುವಾಗ ಅಸಂವಿಧಾನಿಕವಾಗಿ ಅವಹೇಳನಕಾರಿಯಾಗಿ ಮಾತನಾಡಿರುವ ಪ್ರಭಾಕರ ಭಟ್ ರನ್ನು ಬಂಧಿಸುವಂತೆ ಒತ್ತಾಯಿಸಿ ಧರಣಿ ನಡೆಸಲು ಅನುಮತಿ ನೀಡಲು ಪೊಲೀಸರು ಹಿಂದೇಟು ಹಾಕಿದ್ದಾರೆ. ನ್ಯಾಯಯುತವಾಗಿ ಪ್ರತಿಭಟನೆ ನಡೆಸಿದ ಡಿವೈಎಫ್ಐ ಮುಖಂಡರ ವಿರುದ್ಧ ಪ್ರಕರಣ ಕೂಡ ಉಳ್ಳಾಲ ಪೊಲೀಸರು ದಾಖಲಿಸಿದ್ದಾರೆ. ಈ ಕಾರಣದಿಂದ ದೊಡ್ಡ ಸಂಖ್ಯೆಯಲ್ಲಿ ಇಂದು ಠಾಣೆ ಮುಂದೆ ಕೂರಿದ್ದೇವೆ. ಇಂದು ಕೂಡ ಪ್ರಕರಣ ದಾಖಲಿಸುವುದಾದರೆ ಪ್ರತಿಭಟನಾಕಾರರ ಹೆಸರು ನಾವೇ ಕೊಡುತ್ತೇವೆ. ನಿಮ್ಮ ಎಫ್ಐಆರ್ ಗೆ ನಾವು ಎದೆಗುಂದುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಅನಂತ್ ಕುಮಾರ್ ಹೆಗ್ಡೆ ಮುಖ್ಯಮಂತ್ರಿ ವಿರುದ್ಧ ಮಾತನಾಡಿದರು ಎಂಬ ಕಾರಣಕ್ಕೆ ಅವರ ವಿರುದ್ಧ ಸುಮೊಟೋ ಕೇಸು ಹಾಕಿದರು. ಆದರೆ ಸಂವಿಧಾನ ವಿರೋಧಿ ಹೇಳಿಕೆ ನೀಡುವ ಪ್ರಭಾಕರ್ ಭಟ್ ವಿರುದ್ಧ ಯಾಕೆ ಪ್ರಕರಣ ದಾಖಲಿಸುವುದಿಲ್ಲ? ಅವರೇನು ಸಂವಿಧಾನಕ್ಕಿಂತ ದೊಡ್ಡವರಾ? ಪಂಚಾಯತ್ ಸದಸ್ಯ ಕೂಡಾ ಅಲ್ಲದ ಅವರ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದರು. ಕಾನೂನು ವಿಚಾರದಲ್ಲಿ ಪೊಲೀಸರು ಸರ್ವಾಧಿಕಾರ ಧೋರಣೆ ಅನುಸರಿಸುತ್ತಿದ್ದಾರೆ. ಪ್ರಭಾಕರ್ ಭಟ್ ವಿರುದ್ಧ ಮಾತನಾಡಬಾರದು, ಅವರ ಹೇಳಿಕೆ ಖಂಡಿಸಬಾರದು, ಅವರ ಅವಹೇಳನಕಾರಿಯಾಗಿ ಮಾತು ಖಂಡಿಸಿ ಪ್ರತಿಭಟನೆ ಮಾಡಬಾರದು ಎನ್ನುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.
ಡಿವೈಎಫ್ಐ ಮುಖಂಡರ ವಿರುದ್ಧ ಪ್ರಕರಣ ದಾಖಲು ಮಾಡಿರುವುದನ್ನು ಖಂಡಿಸಿ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಮಾಸ್ತಿಕಟ್ಟೆಯಿಂದ ಉಳ್ಳಾಲ ಪೊಲೀಸ್ ಠಾಣೆ ವರೆಗೆ ಪ್ರತಿಭಟನಾ ಜಾಥಾ ನಡೆಸಿದರು. ಈ ಸಂದರ್ಭದಲ್ಲಿ ಠಾಣೆಯ ಗೇಟ್ ಬಂದ್ ಮಾಡಿ ಪೊಲೀಸರು ಅವರನ್ನು ತಡೆದರು. ಪ್ರತಿಭಟನಾ ನಿರತರು ಠಾಣೆಯ ಮುಂದೆ ಜಮಾಯಿಸಿ ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ಸಿಪಿಐಎಂ ಮುಖಂಡ ಸುನಿಲ್ ಕುಮಾರ್ ಬಜಾಲ್, ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಕಾರ್ಯದರ್ಶಿ ಸಂತೋಷ್ ಬಜಾಲ್, ಉಳ್ಳಾಲ ತಾಲೂಕು ಅಧ್ಯಕ್ಷ ರಝಾಕ್ ಮೊಂಟೆಪದವು ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Dyfi tries to gherao Ullal Police sation in Mangalore, Slams Mangalore Police Commissioner Anupam Agarwal. Says Commissioner gives black tea to illegal sand miniers but will arrest those who talk about Kalladka bhat.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 03:51 pm
Mangaluru Correspondent
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
Forensic Expert Dr Mahabala Shetty, Dharmasth...
01-08-25 10:02 pm
02-08-25 04:43 pm
Mangaluru Correspondent
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm