ಬ್ರೇಕಿಂಗ್ ನ್ಯೂಸ್
16-01-24 10:39 pm Mangalore Correspondent ಕರಾವಳಿ
ಮಂಗಳೂರು, ಜ.16: ಕುಕ್ಕರ್ ಬಾಂಬ್ ಪ್ರಕರಣದಲ್ಲಿ ಸಂತ್ರಸ್ತರಾಗಿದ್ದ ಆಟೋ ಚಾಲಕ ಪುರುಷೋತ್ತಮ ಪೂಜಾರಿ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರೂಪಾಯಿ ನೀಡಲಾಗಿದೆ. ಜ.1ರಂದು ಸಿಎಂ ಪರಿಹಾರ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಖಾತೆಗೆ ಎರಡು ಲಕ್ಷ ರೂ. ಬಿಡುಗಡೆ ಮಾಡಲಾಗಿತ್ತು. ಪರಿಹಾರ ಮೊತ್ತದ ಚೆಕ್ಕನ್ನು ಮಾಜಿ ಎಂಎಲ್ಸಿ ಐವಾನ್ ಡಿಸೋಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುರುಷೋತ್ತಮ ಪೂಜಾರಿಗೆ ನೀಡಲಾಗಿದೆ.
ಆದರೆ ಈ ಕುರಿತು ರಾಜ್ಯ ಸರಕಾರದ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಸಿಎಂ ಜಂಟಿ ಕಾರ್ಯದರ್ಶಿ ಪಿ.. ಗೋಪಾಲ್ ಹೊರಡಿಸಿದ್ದ ಆದೇಶ ಪತ್ರದಲ್ಲಿ ಕುಕ್ಕರ್ ಬಾಂಬ್ ಪ್ರಕರಣವನ್ನು ಯಾವುದೋ ಮಾಮೂಲಿ ಘಟನೆ ಎನ್ನುವಂತೆ ಉಲ್ಲೇಖಿಸಿದ್ದಾರೆ. ಆದೇಶ ಪತ್ರದಲ್ಲಿ ಪುರುಷೋತ್ತಮ ಪೂಜಾರಿ ಮಂಗಳೂರಿನಲ್ಲಿ ಆಟೋ ಚಾಲಕರಾಗಿ ಜೀವನ ನಡೆಸುತ್ತಿದ್ದು, ಒಮ್ಮೆ ಆಟೋದಲ್ಲಿ ಪ್ರಯಾಣಿಕರೊಬ್ಬರು ಹಿಡಿದುಕೊಂಡಿದ್ದ ಕುಕ್ಕರ್ ಸಿಡಿದು ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದಲ್ಲದೆ, ಸದರಿಯವರು ತೀವ್ರ ಸುಟ್ಟ ಗಾಯಕ್ಕೆ ಒಳಗಾಗಿದ್ದರು ಎಂದು ಉಲ್ಲೇಖ ಮಾಡಲಾಗಿದೆ.


ಪುರುಷೋತ್ತಮ ಪೂಜಾರಿ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಐವಾನ್ ಡಿಸೋಜ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಎರಡು ಲಕ್ಷ ಪರಿಹಾರ ನೀಡುವಂತೆ ಆದೇಶ ಮಾಡಿದ್ದಾಗಿ ಹೇಳಿರುವುದಲ್ಲದೆ, ಈ ಮೊತ್ತವನ್ನು ಜ.1ರಂದು ಜಿಲ್ಲಾಧಿಕಾರಿ ಖಾತೆಗೆ ಬಿಡುಗಡೆ ಮಾಡಿದ್ದಾಗಿ ಪರಿಹಾರ ನಿಧಿ ವಿಭಾಗದ ಅಧಿಕಾರಿ ಆದೇಶ ಪತ್ರದಲ್ಲಿ ತಿಳಿಸಿದ್ದರು. ಕುಕ್ಕರ್ ನಲ್ಲಿ ಬಾಂಬ್ ಹಿಡಿದುಕೊಂಡು ಬಂದಿದ್ದ ಮೊಹಮ್ಮದ್ ಶಾರೀಕ್ ಭಯೋತ್ಪಾದಕ ಕೃತ್ಯ ಎಸಗುವುದಕ್ಕಾಗಿಯೇ ತರುತ್ತಿದ್ದೆ ಎಂದು ಒಪ್ಪಿಕೊಂಡಿದ್ದಲ್ಲದೆ, ಘಟನೆ ಬಗ್ಗೆ ಎನ್ಐಎ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ. ಹೀಗಿದ್ದರೂ, ಕುಕ್ಕರ್ ಬಾಂಬ್ ಎಂದು ಒಪ್ಪಿಕೊಳ್ಳದೆ ಅದು ಮಾಮೂಲಿ ಅನ್ನುವಂತೆ ಕುಕ್ಕರ್ ಸಿಡಿದ ಘಟನೆ ಎಂಬಂತೆ ರಾಜ್ಯ ಸರಕಾರ ಆದೇಶ ಪತ್ರದಲ್ಲಿ ಉಲ್ಲೇಖಿಸಿದೆ.
ಈ ಹಿಂದೆ ಬಿಜೆಪಿ ಸರಕಾರ ಇದ್ದಾಗ ಪರಿಹಾರ ಕೊಡಿಸುವುದಾಗಿ ನಾಯಕರು ಹಲವು ಬಾರಿ ಪುರುಷೋತ್ತಮ ಪೂಜಾರಿ ಮನೆಗೆ ಭೇಟಿ ನೀಡಿದ್ದರೂ ಸರಕಾರದಿಂದ ಪರಿಹಾರ ಮೊತ್ತ ಲಭಿಸಿರಲಿಲ್ಲ. ಶಾಸಕ ವೇದವ್ಯಾಸ ಕಾಮತ್ ತನ್ನದೇ ದುಡ್ಡಿನಲ್ಲಿ ಹೊಸತಾಗಿ ಆಟೋ ರಿಕ್ಷಾ ಒದಗಿಸಿದ್ದರೆ, ಬಿಜೆಪಿ ಪಕ್ಷದ ವತಿಯಿಂದ ಐದು ಲಕ್ಷ ರೂ. ನೆರವು ನೀಡಲಾಗಿತ್ತು. ಸರಕಾರದಿಂದ ಪರಿಹಾರ ಮೊತ್ತ ಸಿಕ್ಕಿರಲಿಲ್ಲ. ಅಲ್ಲದೆ, ಚಿಕಿತ್ಸಾ ವೆಚ್ಚವನ್ನೂ ನೀಡಿರಲಿಲ್ಲ. ಈ ಬಗ್ಗೆ ಪುರುಷೋತ್ತಮ ಪೂಜಾರಿ ಕುಟುಂಬ ನೋವು ಹೊಂದಿತ್ತು.
Cooker Bomb in Mangalore, 2 lakhs compensation to Auto driver Purushotham, normal cooker blast says order copy.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm