ಬ್ರೇಕಿಂಗ್ ನ್ಯೂಸ್
17-01-24 06:56 pm Mangalore Correspondent ಕರಾವಳಿ
ಪುತ್ತೂರು, ಜ.17: ಬಿಜೆಪಿ ಮುಖಂಡ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ ಅವರ ಪತ್ನಿ ಶುಭಲಕ್ಷ್ಮಿ(50) ಅಸಹಜ ರೀತಿಯಲ್ಲಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಒಳಮೊಗ್ರು ಗ್ರಾಮದ ಕೈಕಾರದಲ್ಲಿ ಇವರ ಮನೆಯಿದ್ದು ಬುಧವಾರ ಮಧ್ಯಾಹ್ನ ಮನೆ ಸಮೀಪದ ನೀರಿನ ತೊಟ್ಟಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಮನೆಯ ಗುಡ್ಡದ ಮೇಲೆ ಮಣ್ಣಿನ ಟ್ಯಾಂಕಿ ನಿರ್ಮಿಸಿದ್ದು ಅದಕ್ಕೆ ಟಾರ್ಪಾಲು ಹಾಕಿ ನೀರು ನಿಲ್ಲಿಸಲಾಗಿತ್ತು. ಬೆಳಗ್ಗೆ ಹನ್ನೊಂದು ಗಂಟೆ ವರೆಗೆ ಪ್ರಕಾಶ್ಚಂದ್ರ ರೈ ಮನೆಯಲ್ಲಿದ್ದು ಆನಂತರ ಹೊರಗೆ ತೆರಳಿದ್ದರು. ಮಧ್ಯಾಹ್ನ ಒಂದೂವರೆ ಗಂಟೆ ವೇಳೆಗೆ ಹೋಗಿ ನೋಡಿದಾಗ ಪತ್ನಿ ಇರಲಿಲ್ಲ. ಹುಡುಕಾಟದ ವೇಳೆ ತೊಟ್ಟಿಯಲ್ಲಿ ಶವ ಪತ್ತೆಯಾಗಿದೆ. ಮಗಳು ಕಾಲೇಜಿಗೆ ಹೋಗಿದ್ದು ಮನೆಯಲ್ಲಿ ಕೆಲಸದವರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಾಲುಜಾರಿ ನೀರಿನ ತೊಟ್ಟಿಗೆ ಬಿದ್ದಿದ್ದು, ಆ ಸಂದರ್ಭದಲ್ಲಿ ಯಾರೂ ಇಲ್ಲದ ಕಾರಣ ಅಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪತಿ ಪ್ರಕಾಶ್ಚಂದ್ರ ರೈ ಗ್ರಾಮಾಂತರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಆತ್ಮಹತ್ಯೆಯೋ, ಘಟನೆ ಹೇಗಾಗಿದೆ ಎನ್ನುವ ಬಗ್ಗೆ ತನಿಖೆ ನಡೆಸುತ್ತೇವೆ ಎಂದು ಸಂಪ್ಯ ಎಸ್ಐ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಮುಖಂಡರಾದ ಗೋಪಾಲಕೃಷ್ಣ ಹೇರಳೆ, ಸಾಜ ರಾಧಾಕೃಷ್ಣ ಆಳ್ವ, ಶಶಿಕುಮಾರ್ ರೈ ಬಾಲ್ಯೊಟ್ಟು ಮತ್ತಿತರರು ಭೇಟಿ ನೀಡಿದ್ದರು.
Mangalore Kumbra society president wife Shublakshmi (50) dies after falling to pond in Puttur.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm