ಬ್ರೇಕಿಂಗ್ ನ್ಯೂಸ್
17-01-24 09:16 pm Mangalore Correspondent ಕರಾವಳಿ
ಮಂಗಳೂರು, ಜ.17: ಮಂಗಳೂರು ಮಹಾನಗರ ಪಾಲಿಕೆಯ ವಿವಿಧ ಪ್ರದೇಶದ ರಸ್ತೆ ಬದಿಗಳಲ್ಲಿ ಕೆಲವೊಂದು ಜಾಹೀರಾತು ಸಂಸ್ಥೆಯವರು ಹಾಗೂ ಖಾಸಗಿ ವ್ಯಕ್ತಿಗಳು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಹಾಗೂ ರಾಜಕೀಯ, ಧಾರ್ಮಿಕ ಮತ್ತು ಕೆಲವೊಂದು ಖಾಸಗಿ ಸಮಾರಂಭಗಳ ನಿಮಿತ್ತ ಅನಧಿಕೃತ ಬ್ಯಾನರ್‍ಗಳು, ಕಟೌಟ್, ಬಂಟಿಂಗ್ಸ್, ಮತ್ತು ಪ್ಲೆಕ್ಸ್ ಇತ್ಯಾದಿಗಳನ್ನು ವ್ಯಾಪಕವಾಗಿ ಅಳವಡಿಸುತ್ತಿರುವುದು ಕಂಡುಬಂದಿದೆ.
ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಇದರಿಂದ ತೀವ್ರ ತೊಂದರೆಯಾಗುತ್ತಿದ್ದು, ಅಪಘಾತ ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿರುವುದಲ್ಲದೆ ಸಾರ್ವಜನಿಕ ಸ್ಥಳಗಳನ್ನು ವಿರೂಪಗೊಳಿಸಿದಂತಾಗುತ್ತಿದೆ. ಅಲ್ಲದೇ, ವಿದ್ಯುತ್ ಅವಘಡಗಳು ಉಂಟಾಗಿ ಪ್ರಾಣಹಾನಿ ಸಂಭವಿಸುವ ಸಾಧ್ಯತೆ ಇದೆ. ಕೆಲವೊಂದು ವಿವಾದಾತ್ಮಕ ಮತ್ತು ದ್ವೇಷ ಸಂದೇಶ ಸಾರುವ ಫ್ಲೆಕ್ಸ್ ಗಳನ್ನು ಅಳವಡಿಸುತ್ತಿರುವುದರಿಂದ ಶಾಂತಿ ಸುವ್ಯವಸ್ಥೆಗೆ ದಕ್ಕೆಯಾಗಿ ಅಹಿತಕರ ಘಟನೆಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಆಕ್ಷೇಪ ವ್ಯಕ್ತವಾಗುತ್ತಿದೆ.
ಆದ್ದರಿಂದ ಎಲ್ಲಾ ರೀತಿಯ ಅನಧಿಕೃತ ಬ್ಯಾನರ್, ಕಟೌಟ್, ಬಂಟಿಂಗ್ ಮತ್ತು ಫ್ಲೆಕ್ಸ್ ಇತ್ಯಾದಿ ಅಳವಡಿಸುತ್ತಿರುವುದನ್ನು ಈ ಕೂಡಲೇ ಸ್ಥಗಿತಗೊಳಿಸಬೇಕು. ಮಹಾನಗರಪಾಲಿಕೆ ಅಧೀನದಲ್ಲಿ ಸರ್ಕಾರಿ ಮತ್ತು ಖಾಸಗಿ ಸ್ಥಳಗಳಲ್ಲಿ ಒಟ್ಟು 1084 ಅಧಿಕೃತ ಜಾಹೀರಾತು ಫಲಕಗಳಿದ್ದು, ಈ ಜಾಹೀರಾತು ಫಲಕಗಳನ್ನು ಬಳಕೆ ಮಾಡಿ ಜಾಹೀರಾತುಗಳನ್ನು ಪ್ರಕಟಿಸುವಂತೆ ಸಾರ್ವಜನಿಕರಿಗೆ ಕೋರಲಾಗಿದೆ.
ಅನಧಿಕೃತ ಪ್ಲೆಕ್ಸ್, ಬ್ಯಾನರ್ ಇತ್ಯಾದಿಗಳನ್ನು ಅಳವಡಿಸಿರುವುದು ಕಂಡುಬಂದಲ್ಲಿ ಸಾರ್ವಜನಿಕ ತೆರೆದ ಸ್ಥಳಗಳ ವಿರೂಪಗೊಳಿಸುವಿಕೆ ಕಾಯ್ದೆ, 1981ರ ಪ್ರಕಾರ ಹಾಗೂ ಅನಧಿಕೃತ ಫಲಕಗಳ ಮೂಲಕ ಯಾವುದಾದರೂ ಶಾರ್ಟ್ ಸರ್ಕಿಟ್ ಅಥವಾ ವಿದ್ಯುತ್ ಅವಘಡಗಳಾಗಿ ಪ್ರಾಣಹಾನಿ ಸಂಭವಿಸಿದಲ್ಲಿ ಸಂಬಂಧಪಟ್ಟ ಸಂಸ್ಥೆ ಅಥವಾ ವ್ಯಕ್ತಿ ಅಥವಾ ಪ್ರಕಟಣೆಗೆ ಕಾರಣರಾದವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಎಚ್ಚರಿಸಿದ್ದಾರೆ.
Mangalore illegal banner and cutouts, criminal case to be implemented says MCC.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm