ಬ್ರೇಕಿಂಗ್ ನ್ಯೂಸ್
18-01-24 06:10 pm Mangalore Correspondent ಕರಾವಳಿ
ಮಂಗಳೂರು, ಜ.18: 500 ವರ್ಷಗಳ ಹೋರಾಟದ ನಂತರ ಅಯೋಧ್ಯೆಯಲ್ಲಿ ಶ್ರೀರಾಮನ ಭವ್ಯಮಂದಿರ ನಿರ್ಮಾಣವಾಗುತ್ತಿದ್ದು, ಜನವರಿ 22ರಂದು ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆ ನಡೆಯಲಿದೆ. ಭಾರತೀಯರೆಲ್ಲ ಆ ದಿನವನ್ನು ಬಹಳ ಸಂಭ್ರಮ ಸಡಗರದಿಂದ ಆಚರಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕರಾವಳಿಯ ವಿವಿಧ ಮಂದಿರಗಳಲ್ಲಿ ಹೋಮ, ಯಜ್ಞ, ಪೂಜೆ, ಜಪ, ಭಜನೆ, ಪ್ರವಚನ, ಆರತಿ ಸೇರಿದಂತೆ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರ ಪ್ರಸಾರದ ವ್ಯವಸ್ಥೆಯೂ ಸಿದ್ಧಗೊಳ್ಳುತ್ತಿದೆ. ರಾಜ್ಯದ ಮುಜರಾಯಿ ಇಲಾಖೆ ಎಲ್ಲ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನಡೆಸುವಂತೆ ಆದೇಶ ನೀಡಿದೆ. ಈ ದಿನದಂದು ಎಲ್ಲ ಜನರಿಗೆ ಭಾಗವಹಿಸಲು ಅನುವಾಗುವಂತೆ ಅವಕಾಶ ನೀಡಬೇಕೆಂದು ಉದ್ಯಮಪತಿಗಳು, ಸಂಘ- ಸಂಸ್ಥೆಗಳು, ವ್ಯಾಪಾರ ಮಳಿಗೆಗಳು, ಹೋಟೆಲ್ ಉದ್ಯಮಿಗಳು, ಶಾಲಾ ಕಾಲೇಜು ಆಡಳಿತ ಮಂಡಳಿಗಳು, ಸರ್ಕಾರಿ ಕಚೇರಿಗಳ ಮುಖ್ಯಸ್ಥರ ಬಳಿ ವಿಶ್ವ ಹಿಂದೂ ಪರಿಷತ್ ವಿನಂತಿಸಿದೆ.
ಮಂದಿರಗಳಲ್ಲಿ ನಡೆಯುವ ಕಾರ್ಯಕ್ರಮವು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ತನಕ ನಡೆಯಲಿದೆ, ಈ ಸಮಯದಲ್ಲಿ ತಮ್ಮಲ್ಲಿ ಕೆಲಸ ಮಾಡುವವರಿಗೆ, ವಿದ್ಯಾರ್ಥಿಗಳಿಗೆ, ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವಂತೆ ವಿಹಿಂಪ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿನಂತಿಸಿದ್ದಾರೆ.
7 ಲಕ್ಷ ಮನೆಗಳಿಗೆ ಮಂತ್ರಾಕ್ಷತೆ ವಿತರಣೆ, ಸಾವಿರಕ್ಕೂ ಹೆಚ್ಚು ನೇರಪ್ರಸಾರ ವ್ಯವಸ್ಥೆ
ಜನವರಿ 1ರಿಂದ 15ರ ತನಕ ನಡೆದ ಪವಿತ್ರ ಮಂತ್ರಾಕ್ಷತೆ ವಿತರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಕರಾವಳಿಯಲ್ಲಿ 7 ಲಕ್ಷ ಮನೆಗಳಿಗೆ ಪವಿತ್ರ ಮಂತ್ರಾಕ್ಷತೆ ವಿತರಿಸಲಾಗಿದೆ. 1200 ಕೇಂದ್ರಗಳಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ನೇರಪ್ರಸಾರದ ವ್ಯವಸ್ಥೆಯ ಸಿದ್ಧತೆ ಮಾಡಲಾಗಿದೆ. ಜ.22ರಂದು ಅಯೋಧ್ಯೆಯ ಪುನರ್ ಪ್ರತಿಷ್ಠೆಯ ಸಂದರ್ಭದಲ್ಲಿ ಕರಾವಳಿಯ 1000ಕ್ಕೂ ಹೆಚ್ಚು ಧಾರ್ಮಿಕ ಕೇಂದ್ರಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ, ಶ್ರೀ ಮಂಗಳಾದೇವಿ ದೇವಸ್ಥಾನ, ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರೋಳಿ ಶ್ರೀ ಸೂರ್ಯನಾರಾಯಣ ದೇವಸ್ಥಾನ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉಜಿರೆ ಶ್ರೀ ಜನಾರ್ಧನ ದೇವಸ್ಥಾನ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ, ಉಡುಪಿ ಶ್ರೀಕೃಷ್ಣ ಮಠ, ಕುಂದಾಪುರ ಕುಂದೇಶ್ವರ ದೇವಸ್ಥಾನ, ಮಡಿಕೇರಿ ಶ್ರೀ ಓಂಕಾರೇಶ್ವರ ದೇವಸ್ಥಾನ ಮತ್ತು ಭಾಗಮಂಡಲ ದೇವಸ್ಥಾನ ಸೇರಿದಂತೆ 1200 ಕ್ಕೂ ಅಧಿಕ ಧಾರ್ಮಿಕ ಕೇಂದ್ರಗಳಲ್ಲಿ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಅಯೋಧ್ಯೆಯಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಿದ್ಧತೆ ಮಾಡಲಾಗಿದೆ.
ಪ್ರಾಣ ಪ್ರತಿಷ್ಠಾಪನೆಯ ದಿನದ ಸಂಜೆ ಸೂರ್ಯಾಸ್ತದ ಬಳಿಕ ಪ್ರತಿಯೊಬ್ಬ ರಾಮಭಕ್ತರು ತಮ್ಮ ತಮ್ಮ ಮನೆಯ ಮುಂದೆ ಎಲ್ಲ ದೇವಾದಿ ದೇವತೆಗಳನ್ನು ಪ್ರಸನ್ನಗೊಳಿಸಲು ಕನಿಷ್ಠ 5 ದೀಪಗಳನ್ನು ಬೆಳಗುವುದರೊಂದಿಗೆ ಮತ್ತೊಂದು ದೀಪಾವಳಿಯನ್ನು ಆಚರಿಸಲಾಗುತ್ತದೆ. ಇದೇ ಸಂದರ್ಭದಲ್ಲಿ ಪ್ರತೀ ಮನೆಯಲ್ಲಿ ಮನೆಯವರೆಲ್ಲ ಸೇರಿ ಅಯೋಧ್ಯೆ ಶ್ರೀರಾಮ ಮಂದಿರವಿರುವ ಉತ್ತರ ದಿಕ್ಕಿಗೆ ಮುಖ ಮಾಡಿ ಮಹಾ ಮಂಗಳಾರತಿಯನ್ನು ಮಾಡುವುದರ ಮೂಲಕ ಶ್ರೀರಾಮಚಂದ್ರ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸುತ್ತೇವೆ ಎಂದು ಶರಣ್ ಪಂಪ್ವೆಲ್ ಪತ್ರಿಕಾ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.
Ayodhya Ram Mandir opening, all must be given permission to go and offer prayer and poojas says VHP in Mangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm