ಬ್ರೇಕಿಂಗ್ ನ್ಯೂಸ್

AVBP protest, Mangalore University: ಏಕಾಏಕಿ ಶುಲ್ಕ ಏರಿಕೆ ; ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ- ಗಾಜಿನ ಬಾಗಿಲು ಪುಡಿ, ಸರ್ಕಾರದ ಹಣ ಬರ್ತಾ ಇಲ್ಲ, ಏನ್ಮಾಡ್ಲಿ ಎಂದ ಕುಲಪತಿಗೆ ವಿದ್ಯಾರ್ಥಿಗಳ ತರಾಟೆ, ನಿಮ್ಮ ಹೊರೆಯನ್ನು ವಿದ್ಯಾರ್ಥಿಗಳಿಗೆ ಹಾಕ್ತೀರಾ ಎಂದು ಆಕ್ರೋಶ    |    ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ್, ಡೀಸೆಲ್ ಬಿಡಿ, ಇಂಧನವೇ ಇಲ್ಲದೆ ಓಡಲಿದೆ ರೈಲು ! ಬರೀ ನೀರು ಬಳಸ್ಕೊಂಡೇ ಹೈಡ್ರೋಜನ್ ರೈಲು, ಅತಿ ಕಡಿಮೆ ವೆಚ್ಚ, ಪರಿಸರ ಸ್ನೇಹಿ !    |    Waqf row, Mangalore, CM Siddaramaiah; ವಕ್ಫ್ ಆಸ್ತಿ ಹೆಸರಲ್ಲಿ ಭೂ ಕಬಳಿಕೆಗೆ ಮುಖ್ಯ ಕಾರ್ಯದರ್ಶಿಯಿಂದ್ಲೇ ಆದೇಶ ; ಖಬರಸ್ತಾನಕ್ಕೂ ಸಾವಿರಾರು ಎಕ್ರೆ ಸರ್ಕಾರಿ ಭೂಮಿ ಅತಿಕ್ರಮಣಕ್ಕೆ ಗ್ರೀನ್ ಸಿಗ್ನಲ್, ‘ಗೊತ್ತಿಲ್ಲ, ನೋಟೀಸ್ ನೀಡಿಲ್ಲ’ ಎನ್ನುತ್ತಿದ್ದವರಿಗಿಲ್ಲಿದೆ ಸಾಕ್ಷ್ಯ!!    |   

Moral Policing in Mangalore, Kadri Park: ಕದ್ರಿ ಪಾರ್ಕಿನಲ್ಲಿ ವಿದ್ಯಾರ್ಥಿ ಜೋಡಿಯನ್ನು ಹಿಂದು-ಮುಸ್ಲಿಂ ಅನ್ಕೊಂಡು ಯುವಕರಿಂದ ಹಲ್ಲೆ ; ನೈತಿಕ ಗೂಂಡಾಗಿರಿ ನಡೆಸಿದ ಮೂವರ ಅರೆಸ್ಟ್

19-01-24 08:50 pm       Mangalore Correspondent   ಕರಾವಳಿ

ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.

ಮಂಗಳೂರು, ಜ.19; ಕೇರಳ ಮೂಲದ ನರ್ಸಿಂಗ್ ವಿದ್ಯಾರ್ಥಿಗಳಾದ ಯುವಕ- ಯುವತಿ ಕದ್ರಿ ಪಾರ್ಕಿಗೆ ಬಂದಿದ್ದಾಗ, ಯುವಕರ ಗುಂಪು ಯುವ ಜೋಡಿಯನ್ನು ಹಿಂದು- ಮುಸ್ಲಿಂ ಅನ್ಕೊಂಡು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ನಡೆದಿದೆ.

ದೇರಳಕಟ್ಟೆಯ ಯೆನಪೋಯ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿನಿ ಮತ್ತು ನಂತೂರಿನ ಜಿಎನ್ಎಂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ಜೊತೆಗೆ ಶುಕ್ರವಾರ ಬೆಳಗ್ಗೆ ಕದ್ರಿ ಪಾರ್ಕಿಗೆ ಆಗಮಿಸಿದ್ದರು. ಅವರು ಬಸ್ಸಿನಲ್ಲಿ ಬರುತ್ತಿದ್ದಾಗಲೇ ಹಿಂಬಾಲಿಸಿದ್ದ ಇತರೇ ವಿದ್ಯಾರ್ಥಿಗಳ ತಂಡ ಕದ್ರಿ ಪಾರ್ಕ್ ಬರುತ್ತಲೇ ಅಡ್ಡಗಟ್ಟಿ ಪ್ರಶ್ನೆ ಮಾಡಿದ್ದಾರೆ. ಯುವಕ- ಯುವತಿ ಕೇರಳ ಮೂಲದವರಾಗಿದ್ದು ಮಲೆಯಾಳಂ ಮಾತನಾಡುತ್ತಿದ್ದರು. ಹಿಂದು ಯುವತಿ ಮತ್ತು ಮುಸ್ಲಿಂ ಯುವಕ ಅನ್ಕೊಂಡು ಪ್ರಶ್ನೆ ಮಾಡಿ, ಇಬ್ಬರ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ಅಲ್ಲದೆ, ಅವರ ವಿಡಿಯೋ, ಫೋಟೋ ರೆಕಾರ್ಡ್ ಮಾಡಿದ್ದಾರೆ.

ಅಷ್ಟರಲ್ಲಿ ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಯುವಕ- ಯುವತಿಯನ್ನು ರಕ್ಷಿಸಿದ್ದು, ಹಲ್ಲೆಗೆ ಮುಂದಾಗಿದ್ದ ಮೂವರು ಯುವಕರನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿತರನ್ನು ನಿತಿನ್(18) ಮತ್ತು ಹರ್ಷ (18) ಎಂದು ಗುರುತಿಸಿದ್ದು, ಇನ್ನೊಬ್ಬ 17 ವರ್ಷದವನು. ಈ ಮೂವರು ಕೂಡ ವಿದ್ಯಾರ್ಥಿಗಳಾಗಿದ್ದು, ಹಲ್ಲೆಗೆ ಯತ್ನಿಸಿ ಪೊಲೀಸ್ ಕೇಸು ಎದುರಿಸುತ್ತಿದ್ದಾರೆ. ಕದ್ರಿ ಠಾಣೆಯಲ್ಲಿ ಇವರ ವಿರುದ್ಧ 341, 504, 509, 354ಬಿ, 354ಡಿ ಸೆಕ್ಷನ್ ಅಡಿ ಕೇಸು ದಾಖಲಾಗಿದೆ. ಹಲ್ಲೆಗೀಡಾದ ವಿದ್ಯಾರ್ಥಿ ಅಖಿಲ್ ಎಂಬಾತನಾಗಿದ್ದು, ಆತ ಕ್ರಿಸ್ತಿಯನ್ ಧರ್ಮೀಯನಾಗಿದ್ದ.

Moral Policing in Mangalore, three arrested for assulting couple at Kadri Park. Those who attacked the students are also said to be students. Kadri police who came to the spot have arrested three.