ಬ್ರೇಕಿಂಗ್ ನ್ಯೂಸ್
20-01-24 08:47 pm Mangalore Correspondent ಕರಾವಳಿ
ಮಂಗಳೂರು, ಜ.20: ತೆಂಕು ಬಡಗು ಕಲಾ ಸವ್ಯಸಾಚಿ ನಾಟ್ಯ ಮಯೂರ ರಕ್ಷಿತ್ ಶೆಟ್ಟಿ ಪಡ್ರೆ ಅವರು ಪ್ರತಿಷ್ಠಿತ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಾರ್ಕಳದ ಹಿರ್ಗಾನ ಶ್ರೀ ಕುಂದೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ ಸಂದರ್ಭ ಜ.21ರಂದು ರಾತ್ರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ವಿ. ಸುನಿಲ್ ಕುಮಾರ್ ಹಾಗೂ ಚಲನಚಿತ್ರ ನಟ ವಿಘ್ನೇಶ್ ಎಂ. ಉಪಸ್ಥಿತರಿರಲಿದ್ದಾರೆ. ಈ ಸಂದರ್ಭ ರಕ್ಷಿತ್ ಪಡ್ರೆ ಅವರು ಅಭಿನಯಿಸುವ ಶ್ವೇತಕುಮಾರ ಚರಿತ್ರೆ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ ಎಂದು ಕಾರ್ಯಕ್ರಮ ಸಂಯೋಜಕ ಜಿತೇಂದ್ರ ಕುಂದೇಶ್ವರ ತಿಳಿಸಿದ್ದಾರೆ.
ಬಪ್ಪನಾಡು, ಸಸಿಹಿತ್ಲು, ಹೊಸನಗರ, ಎಡನೀರು ಮೇಳದಲ್ಲಿ ಕಲಾಸೇವೆ ಮಾಡಿ ಈಗ ಹನುಮಗಿರಿ ಮೇಳದಲ್ಲಿ ತಿರುಗಾಟ ಮಾಡುತ್ತಿರುವ ನಾಟ್ಯ ಮಯೂರ, ಯಕ್ಷ ಚೈತನ್ಯ ಬಿರುದಾಂಕಿತ ಪಡ್ರೆ ಅವರು, 20 ಕಡೆ ಮಕ್ಕಳಿಗಾಗಿ ಯಕ್ಷಗಾನ ತರಗತಿ ನಡೆಸುವ ಮೂಲಕ ಯಕ್ಷಗಾನ ಸೇವಾ ಕೈಂಕರ್ಯದಲ್ಲಿ ತೊಡಗಿಸಿದ್ದಾರೆ.
ಸುದರ್ಶನ, ಅಭಿಮನ್ಯು, ಮೇನಕೆ, ಭ್ರಮರ ಕುಂತಳೆ, ಸುಭದ್ರೆ, ಪ್ರಭಾವತಿ, ಕೃಷ್ಣ, ಶ್ರೀದೇವಿ, ಅಶ್ವತ್ಥಾಮ, ಸೀತೆ, ಮೋಹಿನಿ, ಮೀನಾಕ್ಷಿ ಇವರಿಗೆ ಪ್ರಸಿದ್ಧಿ ತಂದುಕೊಟ್ಟ ಪಾತ್ರಗಳು. ಎಂಎಸ್ಸಿ ಕಂಪ್ಯೂಟರ್ ಸೈನ್ಸ್ ಪದವೀಧರ ಪಡ್ರೆ ಅವರು ಭರತನಾಟ್ಯ ಪ್ರವೀಣ. ಗ್ಲಾಸ್ ಪೇಂಟಿಂಗ್, ರಂಗೋಲಿಯಲ್ಲೂ ನೈಪುಣ್ಯ ಸಾಧಿಸಿದ್ದಾರೆ.
ಜ.21 ರಂದು ರಾತ್ರಿ 7.30ರಿಂದ ಸಾಯಿಶಕ್ತಿ ಕಲಾ ಬಳಗ ಮಂಗಳೂರು ತಂಡದಿಂದ ಶ್ವೇತ ಕುಮಾರ ಚರಿತ್ರೆ ಎಂಬ ವಿಶಿಷ್ಟ ಯಕ್ಷನಾಟಕ ಪ್ರದರ್ಶನಗೊಳ್ಳಲಿದೆ. 22ರಂದು ಕುಂದೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ ನಡೆಯಲಿದೆ.
Tenku Badagu Kala Savyasachi Natya Mayura Rakshit Shetty Padre has been selected for the prestigious Kundeshwar Samman award.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm