ಬ್ರೇಕಿಂಗ್ ನ್ಯೂಸ್
21-01-24 11:45 am Mangalore Correspondent ಕರಾವಳಿ
ಮಂಗಳೂರು, ಜ.21: ಅಯೋಧ್ಯೆ ಶ್ರೀರಾಮ ಮಂದಿರದ ನೂತನ ಕಟ್ಟಡದಲ್ಲಿ ಶ್ರೀರಾಮನ ಮೂರ್ತಿ ಪ್ರತಿಷ್ಟಾಪನೆ ಪ್ರಯುಕ್ತ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಮಂಗಳೂರು ನಗರದಲ್ಲಿ ದೇವಸ್ಥಾನ ಮತ್ತು ಮಂದಿರಗಳಲ್ಲಿ ಒಟ್ಟು 196 ಕಡೆಗಳಲ್ಲಿ ಪೂಜೆ, ಧಾರ್ಮಿಕ ಕಾರ್ಯಕ್ರಮ ನಡೆಯುವ ಸ್ಥಳಗಳನ್ನು ಗುರುತಿಸಲಾಗಿದೆ.
131 ಸೂಕ್ಷ್ಮ ಪ್ರದೇಶಗಳಲ್ಲಿ ಹಗಲು ರಾತ್ರಿ ಪಿಕೆಟಿಂಗ್ ನೇಮಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ನಗರದಾದ್ಯಂತ 57 ಸೆಕ್ಟರ್ ಮೊಬೈಲ್ಗಳನ್ನು 24 ಗಂಟೆ ಹಗಲು ರಾತ್ರಿ ಗಸ್ತಿನಲ್ಲಿರುವ ವ್ಯವಸ್ಥೆಯನ್ನು ಮಾಡಲಾಗಿದೆ.
14 ಸ್ಥಳಗಳಲ್ಲಿ ಚೆಕ್ ಪಾಯಿಂಟ್ಗಳನ್ನು ನಿಯೋಜಿಸಲಾಗಿದೆ.
9 ಸಿ.ಎ.ಆರ್ ಮತ್ತು 3 ಕೆ.ಎಸ್.ಆರ್.ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.
ತಡರಾತ್ರಿ ಮತ್ತು ಮುಂಜಾನೆ ವಿಶೇಷ ಗಸ್ತುಗಳನ್ನು ಆಯೋಜಿಸಲಾಗಿದೆ.
ಮಂಗಳೂರು ನಗರದ ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ವಿಧ್ವಂಸಕ ತಪಾಸಣಾ ತಂಡದಿಂದ ತಪಾಸಣೆ ನಡೆಸಲಾಗುತ್ತಿದೆ.
ರಾಜ್ಯದಲ್ಲಿ ಅಳವಡಿಸಲಾದ ಕ್ರಮದಂತೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಮೆರವಣಿಗೆ, ರ್ಯಾಲಿಗಳಿಗೆ ಅನುಮತಿ ನೀಡಿರುವುದಿಲ್ಲ.
ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಆಯಾ ಭಾಗದ ಎ.ಸಿ.ಪಿ ಮಾರ್ಗದರ್ಶನದಲ್ಲಿ ಈಗಾಗಲೇ ಶಾಂತಿ ಸಭೆಗಳನ್ನು ಆಯೋಜಿಸಲಾಗಿದೆ.
ಪ್ರತೀ ಪೊಲೀಸ್ ಠಾಣಾ ಮಟ್ಟದಲ್ಲಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಲ್ಲಿ ಏರಿಯಾ ಡಾಮಿನೇಷನ್ ಮತ್ತು ರೂಟ್ ಮಾರ್ಚ್ ಕೈಗೊಳ್ಳಲಾಗಿದೆ.
ಮಹಾನಗರ ಪಾಲಿಕೆಯೊಂದಿಗೆ ಸಮನ್ವಯ ಸಾಧಿಸಿ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್ ಅಳವಡಿಕೆಗಳ ಮೇಲೆ ನಿಗಾ ಇರಿಸಲಾಗಿದೆ. ಆಯೋಜಕರಿಗೆ ಅವುಗಳ ಭದ್ರತೆಯನ್ನು ಖಚಿತಪಡಿಸಲು ಸೂಚಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜ. 21ರ ಮಧ್ಯರಾತ್ರಿಯಿಂದ 23ರ ಮುಂಜಾನೆಯ ವರೆಗೆ ಎಲ್ಲಾ ರೀತಿಯ ಬಾರ್ ಮತ್ತು ಮದ್ಯ ಮಾರಾಟ ಮಳಿಗೆಗಳನ್ನು ಮುಚ್ಚಿಸುವಂತೆ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಮಂಗಳೂರ ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಒಟ್ಟಾರೆಯಾಗಿ 3-ಡಿಸಿಪಿ, ೦6-ಎಸಿಪಿ, 11-ಪಿ.ಐ ಮತ್ತು 37-ಪಿ.ಎಸ್.ಐ ದರ್ಜೆಯ ಅಧಿಕಾರಿಗಳನ್ನು ಹಾಗೂ 781 ಪೊಲೀಸ್ ಸಿಬ್ಬಂದಿಗಳನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿರುತ್ತದೆ.
In observance of the historic day of the consecration ceremony at the Ayodhya Sri Ram Temple on January 22 police security all over has been set up to avoid communial disputes.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm