ಬ್ರೇಕಿಂಗ್ ನ್ಯೂಸ್
22-11-20 11:24 am Mangalore Correspondent ಕರಾವಳಿ
ಮಂಗಳೂರು, ನ.21: ಅಕ್ರಮವಾಗಿ ಕೆಂಪು ಕಲ್ಲು ಗಣಿಗಾರಿಕೆ ನಡೆಸದಂತೆ ಗ್ರಾಮ ಪಂಚಾಯತ್ ಮಟ್ಟಗಳಲ್ಲಿ ಗ್ರಾಮ ಕರಣಿಕರು (ವಿಎ) ಹಾಗೂ ಪಿಡಿಒಗಳು ಕ್ರಮ ವಹಿಸಬೇಕಾಗಿದೆ. ಈ ಬಗ್ಗೆ ಜಿಲ್ಲಾಡಳಿತದಿಂದ ಸ್ಪಷ್ಟ ಸೂಚನೆ ನೀಡಲಾಗಿದೆ. ಗ್ರಾಮ ಮಟ್ಟದ ಅಧಿಕಾರಿಗಳು ಕ್ರಮ ವಹಿಸದಿದ್ದರೆ ಅವರ ವಿರುದ್ಧವೇ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಎಚ್ಚರಿಸಿದ್ದಾರೆ.
ಮಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ದ.ಕ ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಅಕ್ರಮವಾಗಿ ನಡೆಯುವ ಕೆಂಪು ಕಲ್ಲು ಗಣಿಗಾರಿಕೆಯನ್ನು ನಿಗದಿತ ಸಮಯದೊಳಗೆ ಸಕ್ರಮಗೊಳಿಸಲು ಅವಕಾಶ ನೀಡಲಾಗುವುದು. ಖಾಸಗಿ ಪಟ್ಟಾ ಭೂಮಿಯಲ್ಲಿ ಕೆಂಪುಕಲ್ಲು ಗಣಿಗಾರಿಕೆ ನಡೆಸಲು ಗಣಿ ಇಲಾಖೆಯಿಂದ ನೇರವಾಗಿ ಅನುಮತಿ ನೀಡಲಾಗುತ್ತದೆ. ಇದನ್ನು ಬದಲಾಯಿಸಲು ವಾಣಿಜ್ಯ ಇಲಾಖೆ ಕಾರ್ಯದರ್ಶಿಗೆ ತಿಳಿಸಲಾಗಿದೆ. ಸರಕಾರಿ ಭೂಮಿಯಲ್ಲಿ ಎಲ್ಲೂ ಕೆಂಪು ಕಲ್ಲು ತೆಗೆಯುವ ಹಾಗಿಲ್ಲ. ಪಟ್ಟಾ ಜಾಗದಲ್ಲಿ ಅನುಮತಿ ಪಡೆದು ಬೇರೆ ಜಾಗದಲ್ಲಿ ಅಕ್ರಮವಾಗಿ ಗಣಿಗಾರಿಕೆ ಮಾಡುತ್ತಿರುವ ಮಾಹಿತಿ ಇದೆ. ಕೋಣಾಜೆ ಬಳಿಯ ಬಾಳೆಪುಣಿ, ಪಜೀರಿನಿಂದ ಮಣ್ಣು ಸಾಗಿಸುತ್ತಿರುವ ಬಗ್ಗೆ ವರದಿ ಪಡೆದಿರುವುದಾಗಿ ಹೇಳಿದರು.
ಅಕ್ರಮ ಮರಳುಗಾರಿಕೆ ತಡೆಗೆ ಸಿಸಿಟಿವಿ
ದ.ಕ. ಜಿಲ್ಲೆಯಲ್ಲಿ ಈಗಾಗಲೇ 88 ಮಂದಿಗೆ ಸಿಆರ್‌ಝೆಡ್ ವ್ಯಾಪ್ತಿಯಲ್ಲಿ ಮರಳು ತೆಗೆಯುವುದಕ್ಕೆ ಅನುಮತಿ ನೀಡಲಾಗಿದೆ. ಅಕ್ರಮ ಮರಳುಗಾರಿಕೆ, ಸಾಗಾಟ ತಡೆಗಟ್ಟುವುದಕ್ಕೆ ದಕ್ಕೆಯಲ್ಲಿ ಲಾಂಗ್ ರೇಂಜ್ ಇರುವ ಹೈಪವರ್ ಕ್ಯಾಮರಾ ಅಳವಡಿಸಲಾಗುವುದು. ಪೊಲೀಸ್ ಜೊತೆ ಜಂಟಿ ಚೆಕ್‌ಪೋಸ್ಟ್ ರಚಿಸಲಾಗುವುದು. ಪೊಲೀಸರು, ಗಣಿ ಇಲಾಖೆ ಮತ್ತು ಕಂದಾಯ ಇಲಾಖೆ ಮಧ್ಯೆ ಹೊಂದಾಣಿಕೆಯಿಲ್ಲದಿರುವುದು ಗಮನಕ್ಕೆ ಬಂದಿದೆ. ಸದ್ಯದಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
ಕೋವಿಡ್ ಪಾಸಿಟಿವ್ ಭಾರೀ ಇಳಿಕೆ
ದ.ಕ ಜಿಲ್ಲೆಯಲ್ಲಿ ಸದ್ಯ ಪ್ರತಿದಿನ ಸರಾಸರಿ 3,500 ಕೋವಿಡ್ ಟೆಸ್ಟ್ ನಡೆಯುತ್ತಿದ್ದು, ಪಾಸಿಟಿವ್ ಪ್ರಮಾಣ ಶೇ.1.08ಕ್ಕೆ ಇಳಿದಿದೆ. ಹಿಂದೆ ಸರಾಸರಿ 1,000 ಟೆಸ್ಟ್ ಆಗುತ್ತಿದ್ದರೆ ಶೇ.25ರಷ್ಟು ಪಾಸಿಟಿವ್ ಬರುತ್ತಿತ್ತು. ಇದೀಗ ಅಧಿಕಾರಿಗಳ ಮೇಲೆಯೂ ಒತ್ತಡವೂ ಕಡಿಮೆಯಾಗುತ್ತಿದೆ. ಕಾಲೇಜುಗಳಲ್ಲಿ ಉಚಿತವಾಗಿ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ಸಿಬ್ಬಂದಿಗೆ ಕೋವಿಡ್ ಟೆಸ್ಟ್ ನಡೆಸಲಾಗುತ್ತಿದೆ. ಸದ್ಯ 14,050 ಮಂದಿಗೆ ಪರೀಕ್ಷೆ ಮಾಡಲಾಗಿದ್ದು, ಎಲ್ಲವೂ ನೆಗೆಟಿವ್ ಆಗಿದೆ ಎಂದರು.
ಕೋವಿಡ್‌ನಿಂದಾಗಿ ಬಾಕಿ ಉಳಿದಿದ್ದ ಕೆಲಸಗಳನ್ನು ಮುಂದುವರಿಸಲಾಗುತ್ತಿದೆ. ಹಂಪನಕಟ್ಟೆ ವೃತ್ತ, ರಸ್ತೆ ಅಭಿವೃದ್ಧಿ ಕಾರ್ಯ ಶುರುವಾಗಿದೆ. ಆದಷ್ಟು ಶೀಘ್ರ ಕಾಮಗಾರಿ ಮುಗಿಸಲಾಗುವುದು. ಅಲ್ಲದೆ ನಾಗರಿಕರಿಗೆ ಸ್ಮಾರ್ಟ್ ಸಿಟಿಯ ಅನೇಕ ಕೆಲಸಗಳ ಬಗ್ಗೆ ಆಕ್ಷೇಪ, ಸಲಹೆಗಳು ಇದ್ದು, ಮುಂದಿನ ಬಾರಿ ಎಲ್ಲರ ಅಭಿಪ್ರಾಯ ಪಡೆದು ಮುಂದುವರಿಯುವುದಾಗಿ ಜಿಲ್ಲಾಧಿಕಾರಿ ತಿಳಿಸಿದರು.
ಖಾಸಗಿ ಸಹಯೋಗದಲ್ಲಿ ಬೀಚ್ ಅಭಿವೃದ್ಧಿ
ಬೀಚ್ ಪ್ರವಾಸೋದ್ಯಮಕ್ಕೆ ಒತ್ತು ನೀಡುವ ದೃಷ್ಟಿಯಿಂದ ತಣ್ಣೀರುಬಾವಿ, ಪಣಂಬೂರು, ಸುರತ್ಕಲ್ ಸಹಿತ ಬೀಚ್‌ಗಳನ್ನು ಖಾಸಗಿ ಸಹಯೋಗದಲ್ಲಿ ಅಭಿವೃದ್ಧಿ ಪಡಿಸಲು ಗುತ್ತಿಗೆ ನೀಡಲಾಗುವುದು. ಪಣಂಬೂರು ಬಂದರಿಗೆ ಆಗಮಿಸುವ ವಿಲಾಸಿ ಹಡಗುಗಳ ಪ್ರಯಾಣಿಕರನ್ನು ತ್ವರಿತವಾಗಿ ವಿವಿಧ ಜಾಗಗಳಿಗೆ ಕರೆದೊಯ್ಯಲು ಹೆಲಿ ಟೂರಿಸಂ ಈಗಾಗಲೇ ಶುರುವಾಗಿದೆ, ಅದನ್ನು ಇನ್ನಷ್ಟು ವ್ಯವಸ್ಥಿತ ಮಾಡಲಾಗುವುದು ಎಂದರು.
ಮಂಗಳೂರು ಎಸಿ ಮದನ್ ಮೋಹನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ, ಮಂಗಳೂರು ತಹಶೀಲ್ದಾರ್ ಗುರುಪ್ರಸಾದ್ ಹಾಜರಿದ್ದರು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿದರು.
Mangalore DC Dr K V Rajendra on Saturday, November 21 asked village accountants (VAs) and public development officers (PDOs) to initiate action against illegal stone quarrying in the district.
23-11-24 07:43 pm
Bangalore Correspondent
B Y Vijayendra, DK Shivkumar: ವಿಜಯೇಂದ್ರಗೆ ತೀವ...
23-11-24 02:15 pm
Karnataka Bypolls Live Updates Congress: ಉಪ ಚ...
23-11-24 11:35 am
ಲಾರಿ ಡ್ರೈವರ್ ಎಡವಟ್ಟಿಗೆ ಫಾರ್ಚುನರ್ ಕಾರು ಡಿಕ್ಕ...
22-11-24 05:16 pm
Kodava News, children : ಕೊಡವ ಜನಸಂಖ್ಯೆ ಹೆಚ್ಚಿಸ...
22-11-24 03:53 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
24-11-24 05:16 pm
Mangalore Correspondent
Naxal Vikram Gowda, Murdeshwar, Mangalore: ಪೊ...
24-11-24 03:21 pm
Mangalore, Someshwara Suicide; ಸೋಮೇಶ್ವರ ರುದ್ರ...
24-11-24 01:18 pm
MP Captian Brijesh Chowta, Mangalore: ಐಬಿಆರ್...
23-11-24 10:37 pm
Mangalore, Shiradi Ghat Accident: ಬೆಂಗಳೂರಿನ ಕ...
23-11-24 12:20 pm
24-11-24 04:33 pm
Bangalore Correspondent
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm
Mangalore crime, Sexual Harrasment, Police: ಮ...
22-11-24 09:37 pm
Bangalore crime, Stabbing: ಬೈಕ್ ಪಾರ್ಕಿಂಗ್ ವಿಚ...
22-11-24 04:14 pm