ಬ್ರೇಕಿಂಗ್ ನ್ಯೂಸ್

AVBP protest, Mangalore University: ಏಕಾಏಕಿ ಶುಲ್ಕ ಏರಿಕೆ ; ಮಂಗಳೂರು ವಿವಿ ಆಡಳಿತ ಸೌಧಕ್ಕೆ ಮುತ್ತಿಗೆ- ಗಾಜಿನ ಬಾಗಿಲು ಪುಡಿ, ಸರ್ಕಾರದ ಹಣ ಬರ್ತಾ ಇಲ್ಲ, ಏನ್ಮಾಡ್ಲಿ ಎಂದ ಕುಲಪತಿಗೆ ವಿದ್ಯಾರ್ಥಿಗಳ ತರಾಟೆ, ನಿಮ್ಮ ಹೊರೆಯನ್ನು ವಿದ್ಯಾರ್ಥಿಗಳಿಗೆ ಹಾಕ್ತೀರಾ ಎಂದು ಆಕ್ರೋಶ    |    ಭಾರತೀಯ ರೈಲ್ವೇ ಹೊಸ ಇತಿಹಾಸದತ್ತ ಹೆಜ್ಜೆ ; ವಿದ್ಯುತ್, ಡೀಸೆಲ್ ಬಿಡಿ, ಇಂಧನವೇ ಇಲ್ಲದೆ ಓಡಲಿದೆ ರೈಲು ! ಬರೀ ನೀರು ಬಳಸ್ಕೊಂಡೇ ಹೈಡ್ರೋಜನ್ ರೈಲು, ಅತಿ ಕಡಿಮೆ ವೆಚ್ಚ, ಪರಿಸರ ಸ್ನೇಹಿ !    |    Waqf row, Mangalore, CM Siddaramaiah; ವಕ್ಫ್ ಆಸ್ತಿ ಹೆಸರಲ್ಲಿ ಭೂ ಕಬಳಿಕೆಗೆ ಮುಖ್ಯ ಕಾರ್ಯದರ್ಶಿಯಿಂದ್ಲೇ ಆದೇಶ ; ಖಬರಸ್ತಾನಕ್ಕೂ ಸಾವಿರಾರು ಎಕ್ರೆ ಸರ್ಕಾರಿ ಭೂಮಿ ಅತಿಕ್ರಮಣಕ್ಕೆ ಗ್ರೀನ್ ಸಿಗ್ನಲ್, ‘ಗೊತ್ತಿಲ್ಲ, ನೋಟೀಸ್ ನೀಡಿಲ್ಲ’ ಎನ್ನುತ್ತಿದ್ದವರಿಗಿಲ್ಲಿದೆ ಸಾಕ್ಷ್ಯ!!    |   

ಪುತ್ತೂರು ; ಅಕ್ಕನಿಗೆ ತಂಗಿ ಲಿವರ್ ದಾನ ಮಾಡಿದರೂ ಪ್ರಾಣ ಉಳಿಸಲಿಲ್ಲ, ಜೀವ ಕಸಿದ ವಿಧಿಯಾಟ ! 

25-01-24 05:46 pm       Mangalore Correspondent   ಕರಾವಳಿ

ಜಾಂಡಿಸ್ ರೋಗದಿಂದಾಗಿ ಲಿವರ್‌ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್‌ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ. 

ಪುತ್ತೂರು, ಜ.25: ಜಾಂಡಿಸ್ ರೋಗದಿಂದಾಗಿ ಲಿವರ್‌ ವೈಫಲ್ಯಕ್ಕೊಳಗಾಗಿದ್ದ ಅಕ್ಕನಿಗೆ ಸ್ವಂತ ತಂಗಿಯೇ ಲಿವರ್‌ ದಾನ ಮಾಡಿದರೂ ಅಕ್ಕನ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗದ ಘಟನೆ ಪುತ್ತೂರಿನಲ್ಲಿ ನಡೆದಿದೆ. 

ಪುತ್ತೂರು ನೆಹರು ನಗರದ ದಿ. ಆನಂದ ನಾಯ್ಕ ಅವರ ಪುತ್ರಿ ಐಶ್ವರ್ಯ(29) ಜ.24 ರಂದು ಲಿವರ್‌ ವೈಫಲ್ಯದಿಂದ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ಐಶ್ವರ್ಯ ಅವರಿಗೆ ಜಾಂಡೀಸ್‌ ಜ್ವರ ಬಾಧಿಸಿದ್ದು, ಮೊದಲು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ಅವರ ಲಿವರ್‌ ಹಾನಿಯಾಗಿದ್ದು, ಲಿವರ್‌ ಟ್ರಾನ್ಸ್‌ಪ್ಲಾಂಟ್‌ ಮಾಡಬೇಕೆಂದು ತಿಳಿಸಿದ್ದರು.

ಐಶ್ವರ್ಯ ಅವರ ತಾಯಿ ಮೊದಲು ಮಗಳಿಗಾಗಿ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಆದರೆ ಅಕ್ಕನ ಮೇಲೆ ಅಪಾರ ಪ್ರೀತಿ ಹೊಂದಿದ್ದ ಬ್ಯಾಂಕ್‌ ಉದ್ಯೋಗಿಯಾಗಿರುವ ಅನುಷಾ ತಾನೇ ಲಿವರ್‌ ದಾನ ಮಾಡಲು ಮುಂದಾಗಿದ್ದರು. ಅಲ್ಲದೆ ಚಿಕಿತ್ಸೆಯ ಮುಂದುವರಿದ ಭಾಗವಾಗಿ ಐಶ್ವರ್ಯ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಅಕ್ಕನಿಗೋಸ್ಕರ ಅನುಷಾ ಕೂಡ ಅದೇ ಆಸ್ಪತ್ರೆಯಲ್ಲಿ ಲಿವರ್‌ ದಾನ ಮಾಡಿದ್ದರೂ ವಿಧಿಯಾಟಕ್ಕೆ ತುತ್ತಾದ ಐಶ್ವರ್ಯಾ ಚಿಕಿತ್ಸೆ ಪಡೆಯುತ್ತಿದ್ದ ವೇಳೆಯೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಲಿವರ್‌ ದಾನ ಮಾಡಿದ ತಂಗಿ ಅನುಷಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಎಂಜಿನಿಯರಿಂಗ್‌ ಪದವೀಧರೆಯಾಗಿದ್ದ ಐಶ್ವರ್ಯ ಚಿಕಿತ್ಸೆಗಾಗಿ 40 ಲಕ್ಷ ರೂ. ಖರ್ಚಾಗಿದ್ದು, ಜಾಲತಾಣಗಳಲ್ಲಿ ನೆರವು ಯಾಚಿಸಲಾಗಿತ್ತು. ಮೃತರು ತಾಯಿ, ಸಹೋದರಿಯನ್ನು ಅಗಲಿದ್ದಾರೆ.

In a tragic incident reported from Nehru Nagar, a young girl named Aishwarya (29) lost her life despite her younger sister, Anusha, selflessly donating her liver in an attempt to save Aishwarya from liver failure.