ಬ್ರೇಕಿಂಗ್ ನ್ಯೂಸ್
25-01-24 11:02 pm Mangalore Correspondent ಕರಾವಳಿ
ಮಂಗಳೂರು, ಜ.25: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾದ ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವ ಮೂಲಕ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಹಲವಾರು ವರ್ಷಗಳಿಂದ ವಿವಿಧ ರೀತಿಯ ಹೋರಾಟಗಳು ನಡೆಯುತ್ತ ಬಂದಿದೆ. ಆದರೆ ತುಳುನಾಡು ಹಾಗೂ ತುಳು ಭಾಷೆಯ ಕುರಿತಂತೆ ನಿರಂತರ ಅನ್ಯಾಯ ನಡೆಯುತ್ತಿದ್ದು ಧ್ವನಿ ಎತ್ತಿದಾಗ ಕಾನೂನಿನ ತೊಡಕು ಎಂಬ ಕಾರಣ ನೀಡಿ ಸರ್ಕಾರಗಳು ದೂರವುಳಿದಿವೆ. ಈ ಕುರಿತು ತುಳುನಾಡಿನ ಜವಾಬ್ದಾರಿಯುತ ಪ್ರಜೆಗಳಾದ ನಾವು ಪಕ್ಷ ಭೇದ, ಜಾತಿ ಧರ್ಮ ಮರೆತು ಒಂದಾಗಿ ಸರಕಾರದ ಗಮನ ಸೆಳೆಯುವ ಅಗತ್ಯವಿದೆ" ಎಂದು ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಹೇಳಿದ್ದಾರೆ.
ಈಗಾಗಲೇ ಹಲವು ರಾಜ್ಯಗಳಲ್ಲಿ ಒಂದಕ್ಕಿಂತ ಹೆಚ್ಚು ಭಾಷೆಗಳನ್ನು ಅಧಿಕೃತ ಭಾಷೆಯನ್ನಾಗಿ ಮಾಡಿರುವುದು ನಮ್ಮ ಕಣ್ಣ ಮುಂದಿದೆ, ಆಂಧ್ರಪ್ರದೇಶ, ತೆಲಂಗಾಣ, ಜಾರ್ಖಂಡ್, ಉತ್ತರಾಖಂಡ್ ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚಿನ ಭಾಷೆಗಳು ಅಧಿಕೃತ ಸ್ಥಾನ ಪಡೆದಿವೆ. ಹೀಗಾಗಿ ಜನವರಿ 29 ರಿಂದ ಫೆಬ್ರವರಿ 2ರ ವರೆಗೆ ತುಳುವರು ಪತ್ರ ಅಭಿಯಾನದ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಿಜಿಸ್ಟರ್ಡ್ ಪೋಸ್ಟ್ ಮುಖಾಂತರ ಮನವಿ ಪತ್ರಗಳನ್ನು ಬರೆದು ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿಸಿ ಸರ್ಕಾರದ ಆದೇಶ ಹೊರಡಿಸಲು ಆಗ್ರಹಿಸಬೇಕು ಎಂದರು.
ಬಳಿಕ ಮಾತನಾಡಿದ ರಂಗಭೂಮಿ ನಟ ವಿಜಯ್ ಕುಮಾರ್ ಕೊಡಿಯಾಲ್ ಬೈಲ್, ಈ ಅಭಿಯಾನಕ್ಕೆ ತುಳುನಾಡಿನ ಎಲ್ಲಾ ಸಂಘಗಳು, ರಾಜಕೀಯ ಪಕ್ಷಗಳ ನಾಯಕರು ಮತ್ತು ಕಾರ್ಯಕರ್ತರುಗಳು, ತುಳು ರಂಗಭೂಮಿ ಮತ್ತು ತುಳು ಚಿತ್ರರಂಗದ ಎಲ್ಲಾ ಕಲಾವಿದರು ಹಾಗೂ ಪ್ರಮುಖರು, ತುಳುನಾಡಿನ ಎಲ್ಲಾ ವ್ಯಾಪಾರಿಗಳು, ಉದ್ಯಮಿಗಳು ಬೆಂಬಲ ನೀಡಬೇಕಿದೆ. ಕನ್ನಡ ಭಾಷೆಯ ಸೋದರ ಭಾಷೆಯಾದ ತುಳು ಭಾಷೆ ಕುರಿತು ಧ್ವನಿ ಎತ್ತುವ ಮೂಲಕ ಈ ಅಭಿಯಾನಕ್ಕೆ ಬೆಂಬಲಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ಸೇರಿದಂತೆ ಎಲ್ಲಾ ಸಂಘಟನೆಯವರಿಗೂ ಸಹ ಈ ಕುರಿತಂತೆ ಮನವಿ ಮಾಡಿಕೊಳ್ಳುತ್ತೇನೆ" ಎಂದರು.
"ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆ ಹಾಗೂ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಶಿವಮೊಗ್ಗದ ತೀರ್ಥಹಳ್ಳಿ, ಹೊಸನಗರ, ಸಾಗರ ತಾಲೂಕುಗಳಲ್ಲಿ
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಕೊಪ್ಪ ನರಸಿಂಹರಾಜಪುರ, ಮೂಡಿಗೆರೆ, ಹಾಸನ ಜಿಲ್ಲೆಯ ಸಕಲೇಶಪುರ ಸೇರಿದಂತೆ ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಾರ ಉದ್ಯೋಗ ನಡೆಸುತ್ತಿರುವ ಹಾಗೂ ಬೆಂಗಳೂರು, ಮುಂಬೈ, ಪುಣೆ ಹಾಗೂ ದೇಶ ವಿದೇಶಗಳಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ತುಳು ಭಾಷೆ ಮಾತನಾಡುವ ಜನರು ವಾಸಿಸುತ್ತಿದ್ದಾರೆ. ಇವರೆಲ್ಲರೂ ಈ ಅಭಿಯಾನದಲ್ಲಿ ಪಾಲ್ಗೊಂಡು ಕನಿಷ್ಠ 10 ಸಾವಿರ ಮನವಿ ಪತ್ರವನ್ನು ಪ್ರಧಾನಿ ಹಾಗೂ ಮುಖ್ಯಮಂತ್ರಿಯವರಿಗೆ ಕಳುಹಿಸಿ ಸರ್ಕಾರಕ್ಕೆ ಒತ್ತಡ
ಹೇರಬೇಕು. ಫೆಬ್ರವರಿ ತಿಂಗಳಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದವರು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಕತ್ತಲ್ ಸಾರ್, ಹೆಚ್.ಕೆ. ಷರೀಫ್, ಶೈಲೇಶ್ ಉಪಸ್ಥಿತರಿದ್ದರು.
Mangalore Non stop campaign from Jan 29 Feb 2 for recognition of Tulu language says Mohiuddin Bawa. Various protests have taken place in the past several years urging to add Tulu language to the Eighth Schedule and give it the status of an official language.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm