ಬ್ರೇಕಿಂಗ್ ನ್ಯೂಸ್
26-01-24 05:00 pm Mangalore Correspondent ಕರಾವಳಿ
ಉಳ್ಳಾಲ, ಜ.26: ಚಿಕ್ಕಮ್ಮನ ಮಗಳ ಮದುವೆಯ ಆಮಂತ್ರಣ ಪತ್ರಿಕೆಯನ್ನ ಸಂಬಂಧಿಕರು, ಊರವರಿಗೆ ಹಂಚಿದ್ದ ವ್ಯಕ್ತಿಯೋರ್ವ ದಿಢೀರ್ ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕಲ್ಲಾಪು ಬಳಿಯ ಪಾರ್ದೆ ಕಟ್ಟೆ ಎಂಬಲ್ಲಿ ನಡೆದಿದೆ.
ಮೂಲತಃ ನರಿಂಗಾನ ಗ್ರಾಮದ ಮೊಂಟೆಪದವಿನ ಮಠ ನಿವಾಸಿ ಸದ್ರಿ ಕಲ್ಲಾಪು ಪಾರ್ದೆ ಕಟ್ಟೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ನಂದಕುಮಾರ್ (38) ಆತ್ಮಹತ್ಯೆಗೈದ ದುರ್ದೈವಿ.

ತಂದೆ, ತಾಯಿಯನ್ನ ಅಗಲಿದ್ದ ನಂದಕುಮಾರ್ ಅನಾಥರಾಗಿದ್ದು ಸಮಾರಂಭಗಳಿಗೆ ಲೈಟಿಂಗ್, ಮೈಕ್ ಅಳವಡಿಸುವ ಇಲೆಕ್ಟ್ರೀಷಿಯನ್ ವೃತ್ತಿ ನಡೆಸುತ್ತಿದ್ದರು. ಕಲ್ಲಾಪು ಪಾರ್ದೆಕಟ್ಟೆಯ ಡೆನ್ನಿಸ್ ಡಿಸೋಜ ಎಂಬವರ ಮನೆಯ ಮಹಡಿಯ ಕೋಣೆಯೊಂದರಲ್ಲಿ ನಂದಕುಮಾರ್ ಕಳೆದ ಎಂಟು ವರ್ಷಗಳಿಂದ ಒಬ್ಬಂಟಿಯಾಗಿ ವಾಸಿಸುತ್ತಿದ್ದರು.
ಡೆನ್ನಿಸ್ ಡಿ ಸೋಜಾ ಅವರ ಕುಟುಂಬವು ಮಂಗಳೂರು ನಗರದಲ್ಲಿ ವಾಸಿಸುತ್ತಿದ್ದು ಇಂದು ಯಾರದೋ ಸಾವಿನ ಅಂತ್ಯ ಕ್ರಿಯೆಗೆ ಬಂದಿದ್ದ ಡೆನ್ನಿಸ್ ಅವರು ಮಧ್ಯಾಹ್ನ ಮನೆಯ ಮಹಡಿಯ ಬಾಗಿಲು ತೆರೆದು ನೋಡಿದಾಗ ನಂದ ಕುಮಾರ್ ಕೊಠಡಿಯ ಛಾವಣಿಯ ಕಬ್ಬಿಣದ ಸಲಾಕೆಗೆ ಕೇಸರಿ ಶಾಲಿನಿಂದ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಉಳ್ಳಾಲ ಪೊಲೀಸರು ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿದ್ದಾರೆ. ಉಳ್ಳಾಲದಾದ್ಯಂತ ಮಂದಿರ, ಮಸೀದಿಗಳಿಗೆ ವಿದ್ಯುತ್ ದೀಪಾಲಂಕಾರ, ಮೈಕ್ ಅಳವಡಿಸುವ ಕಾಯಕ ಮಾಡುತ್ತಿದ್ದ ನಂದಕುಮಾರ್ ಎಲ್ಲರಿಗೂ ಪರಿಚಿತರಾಗಿದ್ದು ಸದ್ಗುಣಶೀಲರಾಗಿದ್ದರು. ಚಿಕ್ಕಮ್ಮನ ಮಗಳಿಗೆ ಫೆಬ್ರವರಿ ತಿಂಗಳಲ್ಲಿ ಮದುವೆ ನಿಗದಿಯಾಗಿದ್ದು ಆಮಂತ್ರಣ ಪತ್ರಿಕೆಗಳನ್ನ ನಂದಕುಮಾರ್ ಅವರೇ ಸಂಬಂಧಿಕರು, ಸ್ನೇಹಿತರಿಗೆ ಹಂಚಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಲ್ಲ.
38 year old man commits suicide suddnely at Naringana Ullal in Mangalore. The deceased has been identified as Nandakumar. He was busy giving Marriage invitations of his sister to all the relatives and suddnely he has taken this extreme step.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm