ಬ್ರೇಕಿಂಗ್ ನ್ಯೂಸ್
27-01-24 07:32 pm Udupi Correspondent ಕರಾವಳಿ
ಉಡುಪಿ, ಜ.27: ಕುಂದಾಪುರದಲ್ಲಿ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಮ್ಮುಖದಲ್ಲೇ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ. ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರ ವಿರುದ್ಧ ಕಾರ್ಯಕರ್ತರು ಸಚಿವರ ಎದುರೇ ಏರುದನಿಯಲ್ಲಿ ಮಾತನಾಡಿದ್ದು ಇದನ್ನು ಚಿತ್ರೀಕರಣ ಮಾಡುತ್ತಿದ್ದ ಮಾಧ್ಯಮದವರನ್ನು ಅರ್ಧದಿಂದಲೇ ಹೊರಕ್ಕಟ್ಟಿದ ಪ್ರಸಂಗ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಅವರು, ಪ್ಲೀಸ್ ನೀವು ಹೊರಹೋಗಿ ಎಂದು ಪತ್ರಕರ್ತರನ್ನು ತಳ್ಳಿ ಚಿತ್ರೀಕರಣಕ್ಕೆ ಅಡ್ಡಿಪಡಿಸಿದ್ದಾರೆ. ಇದು ಕಾರ್ಯಕರ್ತರ ಸಭೆ, ನೀವು ವಿಡಿಯೋ ಮಾಡಿದ್ರೆ ಒಳ್ಳೆದಾಗಲ್ಲ. ಆಮೇಲೆ ಕರೀತೀವಿ ಎಂದು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ನಡೆಯನ್ನು ಪತ್ರಕರ್ತರು ವಿರೋಧಿಸಿದ್ದು ಮತ್ತೆ ತಮ್ಮನ್ನು ಯಾಕೆ ಕರೆದಿದ್ದು ಅಂತ ಪ್ರಶ್ನೆ ಮಾಡಿದ್ದಾರೆ.





ಕಾರ್ಯಕರ್ತರ ಸಭೆಯಲ್ಲಿ ಕಾರ್ಯಕರ್ತರೊಬ್ಬರು ಪಕ್ಷದ ಮುಖಂಡರ ವಿಚಾರದಲ್ಲಿ ಮಾತನಾಡುತ್ತಿದ್ದಾಗ ಮಾಧ್ಯಮದವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದರು. ವೇದಿಕೆಯಲ್ಲಿ ಕುಳಿತಿದ್ದ ಕಾಂಗ್ರೆಸ್ ಜಿಲ್ಲಾ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ವೇದಿಕೆಯಿಂದ ಇಳಿದುಬಂದು ಮಾಧ್ಯಮದವರ ಕ್ಯಾಮೆರಾ ಚಿತ್ರೀಕರಣಕ್ಕೆ ಅಡ್ಡಗಟ್ಟಿದ್ದು ಹೊರಗೆ ಹೋಗುವಂತೆ ಸೂಚನೆ ನೀಡಿದ್ದಾರೆ.
ಇದರಿಂದ ಕೆಲ ಹೊತ್ತು ಪತ್ರಕರ್ತರ ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ಇದೆಲ್ಲಾ ಘಟನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ಮತ್ತಿತರರು ಸಾಕ್ಷಿಯಾದರು. ಒಟ್ಟಾರೆ ಜಿಲ್ಲಾ ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ ಎಂಬುದು ಈ ಘಟನೆಯಿಂದ ಸಾಬೀತಾಗಿದೆ.
Kundapura congress leaders flight in meeting in front of minister Lakshmi Hebbalkar.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm