ಬ್ರೇಕಿಂಗ್ ನ್ಯೂಸ್
27-01-24 10:50 pm Mangalore Correspondent ಕರಾವಳಿ
ಪುತ್ತೂರು, ಜ.27: ಕಾಂತಾರ ಚಿತ್ರದಲ್ಲಿ ಪಂಜುರ್ಲಿ ಪಾತ್ರಧಾರಿ ವ್ಯಕ್ತಿ ಕಾಲವಾದ ಬಳಿಕ ಆತನ ಮಗನೇ ದೈವದ ಸೇವೆಗೆ ನೇಮಕಗೊಳ್ಳುವ ಚಿತ್ರಣ ಇದೆ. ಅದೇ ರೀತಿಯಲ್ಲಿ ಕಡಬ ತಾಲೂಕಿನಲ್ಲಿ ಕಾರಣಿಕದ ದೈವ ಆಗಿರುವ ಶಿರಾಡಿ ದೈವದ ಸೇವೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಬಳಿಕ ಆ ವ್ಯಕ್ತಿಯ ಮಕ್ಕಳೇ ಮುಂದಿನ ಸೇವೆ ಮಾಡಬೇಕೆಂದು ನಿಶ್ಚಯಗೊಂಡ ಪ್ರಸಂಗ ನಡೆದಿದ್ದು ಕಾಂತಾರ ಚಿತ್ರವನ್ನು ನೆನಪಿಸಿದೆ.
ಕಳೆದ 2023ರ ಮಾರ್ಚ್ 30 ರಂದು ದೈವದ ನರ್ತನ ಮಾಡುತ್ತಿದ್ದ ಸಂದರ್ಭದಲ್ಲಿ ದೈವ ನರ್ತಕ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆಯ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಎಡಮಂಗಲದ ಶಿರಾಡಿ ದೈವದ ವಾರ್ಷಿಕ ಜಾತ್ರೆ ನಡೆಯುತ್ತಿದ್ದಾಗ ಘಟನೆ ನಡೆದಿತ್ತು. ಉಳ್ಳಾಕುಲು ದೈವ ಹಾಗೂ ನಾಗಬ್ರಹ್ಮ ದೈವದ ನರ್ತನ ಸೇವೆ ನಡೆಯುತ್ತಿದ್ದಾಗ ಉಳ್ಳಾಕುಲು ದೈವದ ನರ್ತಕರಾಗಿದ್ದ ಎಡಮಂಗಲ ನಿವಾಸಿ 60 ವರ್ಷದ ಕಾಂತು ಅಜಿಲ ದೈವದ ನರ್ತನ ಮಾಡುತ್ತಲೇ ಕುಸಿದು ಬಿದ್ದು ಸಾವನ್ನಪ್ಪಿದ್ದರು.
ದೈವ ನರ್ತಕ ಕಾಂತು ಅಜಿಲರ ಅಕಾಲಿಕ ಸಾವಿನ ಬಳಿಕ ಗ್ರಾಮದ ಜನ ದೈವದ ನರ್ತಕನ ಹುಡುಕಾಟದಲ್ಲಿ ತೊಡಗಿದ್ದರು. ದೈವಜ್ಞರ ಪ್ರಶ್ನಾ ಚಿಂತನೆ ನಡೆಸಿದಾಗ ಕಾಂತು ಅಜಿಲರ ಮಕ್ಕಳಾದ ಮೋನಪ್ಪ ಮತ್ತು ದಿನೇಶ್ ಅವರೇ ಮುಂದೆ ದೈವ ನರ್ತನದ ಜವಾಬ್ದಾರಿ ಹೊರಬೇಕು ಅಂತ ಕಂಡುಬಂದಿತ್ತು. ಬಳಿಕ, ಶಿರಾಡಿ ದೈವದ ಒಪ್ಪಿಗೆಯನ್ನೂ ಪಡೆಯಲಾಗಿತ್ತು. ಹೀಗಾಗಿ ಈ ವರ್ಷದ ಶಿರಾಡಿ ದೈವದ ನೇಮೋತ್ಸವಕ್ಕೂ ಮುನ್ನ ಇಬ್ಬರೂ ಯುವಕರನ್ನು ದೈವದ ಮುಂದೆ ನಿಲ್ಲಿಸಿ, ಇಬ್ಬರಿಗೂ ಯಾವ ರೀತಿಯಲ್ಲಿ ದೈವದ ಸೇವೆಯನ್ನು ಮಾಡಬೇಕು ಅನ್ನೋದನ್ನು ತಿಳಿಸುವ ಪ್ರಕ್ರಿಯ ನಡೆಸಲಾಗಿದೆ.
ದೈವ ನರ್ತಕರು ಶುದ್ಧವಾಗಿ ಮಡಿ ಬಟ್ಟೆಯನ್ನು ಸುತ್ತಿ ಮನೆ ಮಂದಿಯ ಹಾಗೂ ಗ್ರಾಮದ ಹಿರಿಯರ ಆಶೀರ್ವಾದ ಪಡೆದ ಬಳಿಕ ಒಂಬತ್ತು ದಿಕ್ಕಿಗೆ ಸೇರಿದ ಜನರ ಸಮ್ಮುಖದಲ್ಲಿ ದೀಕ್ಷೆ ಬೂಳ್ಯವನ್ನು ನೀಡಲಾಗುತ್ತದೆ. ದೈವ ನರ್ತಕನಿಗೆ ತನ್ನ ಸೇವೆ ಮಾಡುವಂತೆ ನೀಡುವ ಈ ದೀಕ್ಷೆ ದೈವಾರಾಧನೆಯಲ್ಲಿ ಅತ್ಯಂತ ಮಹತ್ವದ್ದಾಗಿದೆ. ದೈವ ತನ್ನ ಅವಾಹನೆಯನ್ನು ಹೊಸದಾಗಿ ನೇಮಕವಾದ ದೈವ ನರ್ತಕರ ಮೂಲಕ ತೋರ್ಪಡಿಸಲಿದೆ ಎನ್ನುವುದು ದೀಕ್ಷೆ ಬೂಳ್ಯದ ಹಿಂದಿರುವ ತತ್ವವಾಗಿದೆ.
ದೀಕ್ಷೆ ಪಡೆದ ಬಳಿಕ ದೈವ ನರ್ತಕ ನಾಲ್ಕು ಗ್ರಾಮಕ್ಕೆ ಸಂಬಂಧಪಟ್ಟ ದೈವಗಳ ಸೇವೆಯ ಜವಾಬ್ದಾರಿಯನ್ನು ತನ್ನ ಹೆಗಲ ಮೇಲೆ ಹೊತ್ತುಕೊಳ್ಳುತ್ತಾನೆ. ಈ ಅಪೂರ್ವ ಕ್ಷಣವನ್ನು ಕಣ್ತುಂಬಿಕೊಳ್ಳಲು ಊರ ಹಾಗೂ ಪರವೂರಿನ ದೈವಭಕ್ತರು ಭಾಗವಹಿಸಿದ್ದರು. ಒಟ್ಟಿನಲ್ಲಿ ಕಾಂತಾರ ಸಿನಿಮಾದ ಕಥೆಯಂತೆ ತುಳುನಾಡಿನ ದೈವಾರಾಧನೆಯಲ್ಲೂ ದೈವೀ ಸ್ಪರ್ಶದ ಘಟನೆ ನಡೆದಿದ್ದು ಭಕ್ತರು ಅಚ್ಚರಿಗೀಡಾಗಿದ್ದಾರೆ.
After the death of a man who plays the role of Panjurli in the film 'Kantara', his son is appointed to serve the deity. Similarly, after a man who was serving the deity Shiradi in Kadaba taluk collapsed and died, it was decided that the man's children would do the next service.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm