ಬ್ರೇಕಿಂಗ್ ನ್ಯೂಸ್
28-01-24 08:41 pm Mangalore Correspondent ಕರಾವಳಿ
ಮಂಗಳೂರು, ಜ.28: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭ ಜನವರಿ 30ರಂದು ಸಂಜೆ 4.30 ಗಂಟೆಗೆ ನಗರ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗವಹಿಸಲಿದ್ದಾರೆ.
ದ.ಕ. ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರು ಹಿಂದಿನ ಅವಧಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಸುದರ್ಶನ ಮೂಡುಬಿದಿರೆ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ. ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಮುಖ ಭಾಷಣ ಮಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿಸುನಿಲ್ ಕುಮಾರ್, ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಭಾಗೀರಥಿ ಮುರುಳ್ಯ, ಯುವಮೋರ್ಚಾ ರಾಜ್ಯ ಕಾರ್ಯದರ್ಶಿ ಹರೀಶ್ ಪೂಂಜಾ, ಎಂಎಲ್ಸಿ ಪ್ರತಾಪಸಿಂಹ ನಾಯಕ್ ಸಹಿತ ಬಿಜೆಪಿ ಪಕ್ಷದ ಪ್ರಮುಖರು ಸಾಕ್ಷಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ನೂತನ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Jan 30th Satish Kumpla to take over as a president of State BJP in the presence of B. Y. Vijayendra.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm