ಬ್ರೇಕಿಂಗ್ ನ್ಯೂಸ್
29-01-24 05:03 pm Mangalore Correspondent ಕರಾವಳಿ
ಮಂಗಳೂರು, ಜ.29 : ಮುಂದಿನ ಲೋಕಸಭಾ ಚುನಾವಣೆಗೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ರಾಷ್ಟ್ರೀಯ ಹಿಂದುಳಿದ ವರ್ಗದ ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಅವರಿಗೆ ಬಿಜೆಪಿ ಅವಕಾಶ ನೀಡಬೇಕೆಂದು ಅಖಿಲ ಭಾರತ ಮೀನುಗಾರರ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.
2019ರ ಚುನಾವಣೆಯಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿಲ್ಲ. ರಾಜ್ಯದ ಜನಸಂಖ್ಯೆಯು 50 ಶೇ.ದಷ್ಟಿದ್ದರೂ ಒಬಿಸಿ ಅಭ್ಯರ್ಥಿಗಳಿಗೆ ಒಂದೇ ಒಂದು ಸೀಟು ನೀಡಿಲ್ಲವಾದ್ದರಿಂದ ಬಿಜೆಪಿಗೆ ಒಬಿಸಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಅನಿವಾರ್ಯವಾಗಿರುತ್ತದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಹಂಚಿಕೊಂಡಿರುವ ಹಿಂದುಳಿದ ವರ್ಗಕ್ಕೆ ಸೇರಿದ ಮೀನುಗಾರರು ಮಹತ್ವದ ಸವಾಲುಗಳನ್ನು ಎದುರಿಸುತ್ತಿದ್ದು, ರಾಜಕೀಯ ವೇದಿಕೆಗಳಲ್ಲಿ ಮನ್ನಣೆ ಹಾಗೂ ಪ್ರಾತಿನಿಧ್ಯವನ್ನು ಪಡೆಯಲು ದೀರ್ಘ ಕಾಲ ಹೋರಾಡುತ್ತಿದ್ದಾರೆ.
ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂಗೀಣ ಅಭಿವೃದ್ಧಿಗೆ ಸಂಸತ್ತಿನಲ್ಲಿ ಮೀನುಗಾರರ ಪ್ರತಿನಿಧಿಯನ್ನು ಇರುವುದು ಬಹಳ ಮುಖ್ಯವಾಗಿದೆ. ಪ್ರಮೋದ್ ಮಧ್ವರಾಜ್ 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ, 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಗುರುತಿಸಿದ್ದಾರೆ. ನಾಡಿನ ಸಮಸ್ಯೆ ಬಗ್ಗೆ ತಿಳಿದಿರುವ ಇಂತಹ ವ್ಯಕ್ತಿಯೇ ನಮ್ಮ ಕರಾವಳಿಗೆ ಸಂಸದರಾಗಬೇಕು ಎಂದು ಮೀನುಗಾರ ಮುಖಂಡ ಮೋಹನ್ ಬೆಂಗ್ರೆ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ.
ಮೀನುಗಾರಿಕೆಯನ್ನು ಆಧುನೀಕರಣಗೊಳಿಸಿ ಅಭಿವೃದ್ಧಿ ಪಡಿಸುವುದು, ರಾಜ್ಯದ ಕಡಲ ಕಿನಾರೆ ಹಾಗೂ ಪ್ರಾಕೃತಿಕ ಸೌಂದರ್ಯವನ್ನು ಆಕರ್ಷಣೀಯ ಪ್ರವಾಸಿ ತಾಣಗಳನ್ನಾಗಿ
ಅಭಿವೃದ್ಧಿಪಡಿಸುವುದು, ಮಾಹಿತಿ ತಂತ್ರಜ್ಞಾನ ಕೇಂದ್ರ ನಿರ್ಮಾಣ ಮಾಡಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕಿದ್ದು ಪ್ರಮೋದ್ ಮಧ್ವರಾಜ್ ಸಂಸದರಾದಲ್ಲಿ ಮೀನುಗಾರ ಸಮಾಜ ಅವರನ್ನು ಬೆಂಬಲಿಸುವ ನಿರ್ಧಾರಕ್ಕೆ ಬಂದಿದ್ದೇವೆ ಎಂದವರು ಹೇಳಿದರು. ಕಿಶೋರ್ ಸುವರ್ಣ ಮತ್ತಿತರರು ಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
Bjp MP udupi chikmagaluru ticket to Pramod Madhwaraj must be given, high demand from fishing community.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm