ಬ್ರೇಕಿಂಗ್ ನ್ಯೂಸ್
29-01-24 08:10 pm Mangalore Correspondent ಕರಾವಳಿ
ಪುತ್ತೂರು, ಜ.29: ಟಿಪ್ಪರ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿಯಾಗಿ ಶಾಲಾ ಶಿಕ್ಷಕಿಯೊಬ್ಬರು ಸಾವನಪ್ಪಿದ ಘಟನೆ ಪುತ್ತೂರಿನ ಕಬಕ ಬಳಿಯ ಪೋಳ್ಯದಲ್ಲಿ ನಡೆದಿದೆ.
ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಮಿತ್ತೂರು ಮದಕ ಸುರೇಶ್ ಕುಲಾಲ್ ಎಂಬವರ ಪತ್ನಿ ಅನಿತಾ(35) ಮೃತರು. ಇವರು ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದು ಕೆಲವು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದರು. ಸೋಮವಾರ ಬೆಳಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದಿದ್ದರು. ಚಿಕಿತ್ಸೆ ಪಡೆದು ಬೈಕ್‌ನಲ್ಲಿ ಹಿಂತಿರುಗುತ್ತಿದ್ದಾಗ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಏಕಾಏಕಿ ಬಂದ ಟಿಪ್ಪರ್ ಲಾರಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಹಿಂಬದಿ ಸವಾರೆಯಾಗಿದ್ದ ಅನಿತಾ ಹಾಗೂ ಅವರು ಮಗು ರಸ್ತೆಗೆ ಎಸೆಯಲ್ಪಟ್ಟು ತೀವ್ರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಬೊಳುವಾರು ಮಹಾವೀರ ಆಸ್ಪತ್ರೆಗೆ ಕರೆ ತರಲಾಗಿದ್ದರೂ ಆಸ್ಪತ್ರೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು. ಮಗುವಿನ ಭುಜದ ಭಾಗಕ್ಕೆ ಮತ್ತು ಪತಿ ಸುರೇಶ್ ಕುಲಾಲ್ ಸಣ್ಣ ಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರು ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bike tipper truck accident at Kadaba, 35 year old lady teacher dies on spot.
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm