Lokayukta raid, Mescom engineer Shanthakumar house: ಮಂಗಳೂರಿನಲ್ಲಿ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ ; ಅಪಾರ ಪ್ರಮಾಣದ ಚಿನ್ನಾಭರಣ, ಆಸ್ತಿ ಪತ್ತೆ 

31-01-24 12:51 pm       Mangalore Correspondent   ಕರಾವಳಿ

ಮಂಗಳೂರಿನಲ್ಲೂ‌ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.‌ 

ಮಂಗಳೂರು, ಜ.31: ಮಂಗಳೂರಿನಲ್ಲೂ‌ ಮೆಸ್ಕಾಂ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.‌ 

ಮಂಗಳೂರಿನಲ್ಲಿ ಅತ್ತಾವರ ವಿಭಾಗದ ಮೆಸ್ಕಾಂ ಎಕ್ಸಿಕ್ಯುಟಿವ್ ಇಂಜಿನಿಯರ್ ಆಗಿರುವ ಶಾಂತಕುಮಾರ್ ಅವರ ಮಂಗಳೂರಿನ ಮನೆ, ಕಚೇರಿಯಲ್ಲಿ ಲೋಕಾ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ನಿವಾಸದ ಮೇಲೂ ದಾಳಿಯಾಗಿದೆ. 

ತುಮಕೂರು ಮೂಲದ ಶಾಂತಕುಮಾರ್ ಕಳೆದ ಐದು ವರ್ಷಗಳಿಂದ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸ್ತಿದ್ದಾರೆ. 1995ರಲ್ಲಿ ಇಲಾಖೆ ಸೇರಿದ್ದ ಅವರು ಈ ಹಿಂದೆ ಬೆಂಗಳೂರು, ತುಮಕೂರು ಸೇರಿ ಹಲವು ಕಡೆಗಳಲ್ಲಿ ಕೆಲಸ ಮಾಡಿದ್ದರು. ಆದಾಯ ಮೀರಿದ ಅಸ್ತಿ ಗಳಿಕೆ ಆರೋಪದಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಮಂಗಳೂರಿನಲ್ಲಿ 35 ಲಕ್ಷ ಮೌಲ್ಯದ ಚಿನ್ನಾಭರಣ, ಹಲವಾರು ಆಸ್ತಿ ಪತ್ರಗಳು ಸಿಕ್ಕಿವೆ. ಹಲವು ಕಡೆಗಳಲ್ಲಿ ಬೇನಾಮಿ ಹೆಸರಲ್ಲಿ ಆಸ್ತಿ ಮಾಡಿಟ್ಟಿರುವ ಶಂಕೆಯಿದ್ದು ದಾಖಲೆ ಪತ್ರಗಳನ್ನು ಶೋಧ ನಡೆಸುತ್ತಿದ್ದಾರೆ. ‌

Lokayukta raids on Mescom engineer Shanthakumar house in Mangalore, huge gold cash seized.