ಬ್ರೇಕಿಂಗ್ ನ್ಯೂಸ್
03-02-24 06:02 pm Mangalore Correspondent ಕರಾವಳಿ
ಉಳ್ಳಾಲ, ಫೆ.3: ಕೋಚಿಮುಲ್ ನೇಮಕಾತಿ ಪರೀಕ್ಷಾ ಹಗರಣದಲ್ಲಿ ಮಂಗಳೂರು ವಿವಿಗೆ ಇಡಿ ದಾಳಿ ಹಿನ್ನೆಲೆಯಲ್ಲಿ ಮಂಗಳೂರು ವಿವಿ ಆಡಳಿತದ ವಿರುದ್ದ ಸಿಡಿದೆದ್ದ ಎಬಿವಿಪಿ ವಿದ್ಯಾರ್ಥಿ ಸಂಘಟನೆ ಸದಸ್ಯರು ವಿವಿಯ ಕುಲಪತಿ ರಾಜೀನಾಮೆ ನೀಡಬೇಕು ಹಾಗೂ ಪರೀಕ್ಷಾಂಗ ಕುಲಸಚಿವರ ಅಮಾನತಿಗೆ ಆಗ್ರಹಿಸಿ ಶನಿವಾರ ಕೊಣಾಜೆಯ ಮಂಗಳೂರು ವಿವಿಯ ಆಡಳಿತ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಭಾರೀ ಪೊಲೀಸ್ ಭದ್ರತೆ ಮಧ್ಯೆಯೂ ಎಬಿವಿಪಿ ಕಾರ್ಯಕರ್ತರು ವಿವಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಪರೀಕ್ಷಾ ಪೂರ್ವದಲ್ಲೇ ಕೋಚಿಮುಲ್ ನೇಮಕಾತಿ ಪರೀಕ್ಷೆ ಪ್ರಶ್ನಾಪತ್ರಿಕೆ ಸೋರಿಕೆ ಆರೋಪ ಹೊರಿಸಿದ ಕಾರ್ಯಕರ್ತರು ಮಂಗಳೂರು ವಿವಿ ಅಧಿಕಾರಿಗಳಿಂದಲೇ ಪ್ರಶ್ನೆಪತ್ರಿಕೆ ಮಾರಾಟವಾಗಿದೆ ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ವಿವಿಗೆ ಇ.ಡಿ ಅಧಿಕಾರಿಗಳ ತಂಡ ದಾಳಿ ಮಾಡಿತ್ತು. ಪರೀಕ್ಷೆ ಹಾಗೂ ಫಲಿತಾಂಶ ಪ್ರಕಟಣೆಯ ಜವಾಬ್ದಾರಿ ಹೊತ್ತಿದ್ದ ಮಂಗಳೂರು ವಿವಿ ನಿರ್ಲಕ್ಷ್ಯ ಮಾಡಿದೆ. ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ನೇಮಕಾತಿ ಪ್ರಕ್ರಿಯೆ ಅವ್ಯವಹಾರ ತನಿಖೆ ನಡೆಸ್ತಿರೋ ಇ.ಡಿ ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಚಲನ್ನವರ್ ಅವರನ್ನೂ ವಿಚಾರಣೆ ನಡೆಸಿತ್ತು.

ಕೋಚಿಮುಲ್ ನೇಮಕಾತಿ ಪರೀಕ್ಷಾ ಜವಾಬ್ದಾರಿ ವಹಿಸಿಕೊಂಡಿದ್ದ ವಿವಿ ಪರೀಕ್ಷಾಂಗ ಕುಲಸಚಿವ ಪ್ರೊ. ರಾಜುಕೃಷ್ಣ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವದಲ್ಲೇ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದಾರೆ ಎಂಬ ಅನುಮಾನದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲಾಗಿತ್ತು. ಆ ಕಾರಣದಿಂದ ಕೋಚಿಮುಲ್ ನೇಮಕಾತಿ ಹಗರಣದಲ್ಲಿ ಮಂಗಳೂರು ವಿವಿ ನೇರ ಭಾಗಿಯಾದ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಎಬಿವಿಪಿ ವಿದ್ಯಾರ್ಥಿ ಸಂಘಟನೆ ವಿವಿಯ ಪರಿಕ್ಷಾಂಗ ಕುಲಸಚಿವರ ಅಮಾನತ್ತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದೆ.
Kochimul scam, Mangalore university, ABVP students protest demand suspension of Registrar. Amid huge security students of Abvp Tried to gherao Mangalore University.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 10:19 pm
HK News Staffer
ಕೊಲ್ಲೂರು ; ಬೀಡಾಡಿ ದನವನ್ನು ಕಾರಿನಲ್ಲಿ ತುಂಬಿಸಿಕೊ...
02-10-26 05:24 pm
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm