ಉಚ್ಚಿಲ ; ಲಾರಿಯಡಿಗೆ ಬಿದ್ದು ದ್ವಿಚಕ್ರ ವಾಹನ ಸವಾರ ಸಾವು !

23-11-20 12:44 pm       Udupi Correspondent   ಕರಾವಳಿ

ಲಾರಿ ಡಿಕ್ಕಿಯಾಗಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ ಅದೇ ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಉಚ್ಚಿಲ ಪೇಟೆಯಲ್ಲಿ ನಡೆದಿದೆ.

ಉಡುಪಿ, ನ.23: ಲಾರಿ ಡಿಕ್ಕಿಯಾಗಿ ರಸ್ತೆಗೆ ಬಿದ್ದ ದ್ವಿಚಕ್ರ ವಾಹನ ಸವಾರ ಅದೇ ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ 8:30ರ ಸುಮಾರಿಗೆ ಉಚ್ಚಿಲ ಪೇಟೆಯಲ್ಲಿ ಸಂಭವಿಸಿದೆ. 

ಮೃತರನ್ನು ಹೆಜಮಾಡಿ ಅಡ್ಕ ಹೌಸ್ ನಿವಾಸಿ ವಾಸು ಡಿ. ಕೋಟ್ಯಾನ್ (65) ಎಂದು ಗುರುತಿಸಲಾಗಿದೆ. ಇವರು ಉಚ್ಚಿಲ ಪೇಟೆಯಿಂದ ಪಡುಬಿದ್ರೆ ಕಡೆಗೆ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವೇಳೆ ಮಂಗಳೂರಿನತ್ತ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಡಿಕ್ಕಿಯಾಗಿದೆ.

ಇದರಿಂದ ರಸ್ತೆಗೆ ಬಿದ್ದ ವಾಸು ಅವರು ಲಾರಿಯ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ.

A 65-year-old man died on the spot after a Cylinder Truck rammed to his bike in Uchila, Udupi. The deceased has been identified as Vasu Kotian.