ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.
ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm