Puttur Suicide, Mangalore: ಪುತ್ತೂರು ; ನವ ವಿವಾಹಿತ ಯುವತಿ ಗಂಡನ ಮನೆಯಲ್ಲಿ ನೇಣಿಗೆ ಶರಣು 

05-02-24 09:11 pm       Mangalore Correspondent   ಕರಾವಳಿ

ನವ ವಿವಾಹಿತ ಯುವತಿಯೊಬ್ಬರು ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.

ಪುತ್ತೂರು, ಫೆ.5: ನವ ವಿವಾಹಿತ ಯುವತಿಯೊಬ್ಬರು ನೇಣು ಬಿಗಿದು ಆತ್ಯಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಕುರಿಯ ಗಡಾಜೆ ಎಂಬಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಕುಕ್ಕಾಜೆ ರಾಮ್ಮಣ್ಣ ಗೌಡ ಮತ್ತು ಪುಪ್ಪ ದಂಪತಿ ಪುತ್ರಿ ಶೋಭಾ (26) ನೇಣಿಗೆ ಶರಣಾದವರು. ಶೋಭಾ ಅವರನ್ನು ಒಂದೂವರೆ ತಿಂಗಳ ಹಿಂದೆ ಪುತ್ತೂರು ಕುರಿಯ ಗಡಾಜೆ ರೋಹಿತ್ ಎಂಬವರಿಗೆ ಮದುವೆ ಮಾಡಲಾಗಿತ್ತು. 

ಗಂಡನ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

26 year old Puttur Married woman commits suicide at husband's house. Puttur Police are investigating the case behind suicide.