ಬ್ರೇಕಿಂಗ್ ನ್ಯೂಸ್
08-02-24 10:18 pm Mangalore Correspondent ಕರಾವಳಿ
ಪುತ್ತೂರು, ಫೆ.8: ಬಂಡಾಯ ಸ್ಪರ್ಧೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಪುತ್ತೂರಿನ ‘ಪುತ್ತಿಲ ಪರಿವಾರ’ವನ್ನು ಭಾರತೀಯ ಜನತಾ ಪಕ್ಷದ ಜೊತೆ ವಿಲೀನಗೊಳಿಸಲು ರಾಜ್ಯ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವ ಬಗ್ಗೆ ಪುತ್ತಿಲ ಪರಿವಾರದ ಮುಖಂಡರು ಮಾಧ್ಯಮಕ್ಕೆ ಮಾಹಿತಿ ಹಂಚಿಕೊಂಡಿದ್ದಾರೆ.
ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರೇ ಪುತ್ತಿಲ ಪರಿವಾರದ ವಿಲೀನ ಮತ್ತು ಬಂಡಾಯ ಸ್ಪರ್ಧಿಸಿದ್ದ ಅರುಣ್ ಪುತ್ತಿಲ ಅವರಿಗೆ ಸೂಕ್ತ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಪುತ್ತೂರಿನಲ್ಲಿ ಸಭೆ ಸೇರಿದ್ದ ಪುತ್ತಿಲ ಪರಿವಾರ ಬಿಜೆಪಿ ಜೊತೆ ವಿಲೀನಗೊಳ್ಳಲು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಜೊತೆಗೆ ಸೇರ್ಪಡೆಗೆ ಮೂರು ದಿನಗಳ ಗಡುವನ್ನು ವಿಧಿಸಿತ್ತು. ಆ ಗಡುವು ಗುರುವಾರ ಮುಗಿಯುವುದರೊಳಗೆ ಶುಭ ಸುದ್ದಿಯನ್ನು ಬಿಜೆಪಿ ರಾಜ್ಯ ನಾಯಕರು ಪುತ್ತಿಲ ಪರಿವಾರಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಅರುಣ್ ಪುತ್ತಿಲ ಸ್ಥಾನಮಾನದ ಬಗ್ಗೆ ಅಂತಿಮ ಮಾತುಕತೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಇದೆ.
ಪುತ್ತೂರಿನಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಸಾರಿದ್ದ ಅರುಣ್ ಪುತ್ತಿಲ, ಕಾಂಗ್ರೆಸಿಗೆ ಪೈಪೋಟಿ ನೀಡಿದ್ದಲ್ಲದೆ ಬಿಜೆಪಿಯನ್ನು ಹೀನಾಯ ರೀತಿಯಲ್ಲಿ ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದರಿಂದ ರಾಜ್ಯ ಬಿಜೆಪಿಗೆ ತೀವ್ರ ಮುಖಭಂಗ ಆಗಿತ್ತು. ಈಗ ರಾಜ್ಯ ಬಿಜೆಪಿಯಲ್ಲಿ ತಂಡ ಬದಲಾಗಿದ್ದು ಮಾಜಿ ಸಿಎಂ ಯಡಿಯೂರಪ್ಪ ಅವರೇ ಪಕ್ಷದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರಿನ ಬಿಜೆಪಿ ನಾಯಕರ ವಿರೋಧ ಇದ್ದರೂ ರಾಜ್ಯ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದು ಲೋಕಸಭೆ ಚುನಾವಣೆಗೆ ಬಂಡಾಯ ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.
Independant candidate Puttur Arun Puthila to rejoin BJP. BJP party had set a three-day deadline for the party to make an official announcement in this regard. Should the BJP fail to comply, Puthila Parivar has resolved to contest the upcoming Lok Sabha elections independently.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm