ಬ್ರೇಕಿಂಗ್ ನ್ಯೂಸ್
09-02-24 05:15 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ (ಕೊಚಿಮುಲ್) ನೇಮಕಾತಿ ಪ್ರಕ್ರಿಯೆಯಲ್ಲಿ ಒಂದು ಹುದ್ದೆಗೆ 20 ರಿಂದ 30 ಲಕ್ಷದ ವರೆಗೂ ಅವ್ಯವಹಾರ ನಡೆದಿದ್ದು ನೂರಾರು ಕೋಟಿ ರೂಪಾಯಿಗಳ ಹಗರಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವೂ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ದಾಳಿ ನಡೆಸಿದೆ. ಇದರಿಂದ ಮಂಗಳೂರು ವಿವಿಯು ತನ್ನ ಶ್ರೇಷ್ಠ ಘನತೆಯನ್ನು ಕಳೆದುಕೊಂಡಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ಟೀಕಿಸಿದ್ದಾರೆ.
ಕೊಚಿಮುಲ್ ಅಕ್ರಮ ನೇಮಕಾತಿಗೆ ಸಂಬಂಧಿಸಿ ಪರೀಕ್ಷೆ ಹಾಗೂ ಮೌಲ್ಯಮಾಪನವನ್ನು ನಡೆಸಿದ್ದ ಮಂಗಳೂರು ವಿಶ್ವವಿದ್ಯಾಲಯ ಈ ಅಕ್ರಮದಲ್ಲಿ ಭಾಗಿಯಾದ ಖಚಿತ ಮಾಹಿತಿ ಮೇರೆಗೆ ವಿವಿಯ ಕುಲಪತಿ, ಪರೀಕ್ಷಾಂಗ ಹಾಗೂ ಆಡಳಿತ ಕುಲಸಚಿವರ ಕಚೇರಿಗೆ ಇ.ಡಿ ದಾಳಿ ನಡೆಸಿ, ನೇಮಕಾತಿಗೆ ಸಂಬಂಧಿಸಿದ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ. ಕೆಲವು ವರ್ಷಗಳ ಹಿಂದೆ ಮಂಗಳೂರು ವಿಶ್ವವಿದ್ಯಾನಿಲಯದ ಬಗ್ಗೆ ರಾಜ್ಯ ದೇಶ ಮಾತ್ರವಲ್ಲದೇ ವಿದೇಶಗಳಲ್ಲೂ ಅತ್ಯುತ್ತಮ ಅಭಿಪ್ರಾಯವಿತ್ತು. ವಿದೇಶಗಳಿಂದಲೂ ಉನ್ನತ ವ್ಯಾಸಂಗಕ್ಕಾಗಿ ವಿದ್ಯಾರ್ಥಿಗಳು ಇಲ್ಲಿಗೆ ಬರುತ್ತಿದ್ದರು. ಆನಂತರದ ದಿನಗಳಲ್ಲಿ ಇಲ್ಲಿನ ಆಯಕಟ್ಟಿನ ಹುದ್ದೆಗೇರಿದ ಕೆಲವರು ತಮ್ಮ ಸ್ವಾರ್ಥ ಸಾಧನೆಗಾಗಿ ವಿಶ್ವವಿದ್ಯಾಲಯದ ಘನತೆಗೆ ಮಸಿ ಬಳಿದಿದ್ದಾರೆ. ಹೀಗಾಗಿ ವಿವಿ ತನ್ನ "ಎ ಗ್ರೇಡ್" ಮಾನ್ಯತೆಯಿಂದ "ಬಿ ಗ್ರೇಡ್" ಗೆ ಇಳಿದಿದ್ದು ಇಂತಹ ಅಕ್ರಮಗಳಿಂದ ವಿವಿಯ ಘನತೆಗೆ ಇನ್ನಷ್ಟು ಕುತ್ತುಂಟಾಗುತ್ತಿದೆ.
ಆಡಳಿತ ಪಕ್ಷದ ಕಾಂಗ್ರೆಸ್ ಶಾಸಕರೂ ಈ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆಯಾಗಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕೆಂದು ಶಾಸಕರು ಒತ್ತಾಯಿಸಿದರು.
ಹಲವು ಸಮಯಗಳಿಂದ ಸರಿಯಾದ ಸಮಯಕ್ಕೆ ವಿದ್ಯಾರ್ಥಿಗಳ ಫಲಿತಾಂಶವನ್ನು ನೀಡದೇ ಇದ್ದು, ಫಲಿತಾಂಶ ಅದಲು ಬದಲಾಗಿದ್ದು, ವರ್ಷಗಟ್ಟಲೆ ಅಂಕಪಟ್ಟಿಯನ್ನು ವಿತರಿಸದೇ ಪ್ರತಿನಿತ್ಯ ವಿದ್ಯಾರ್ಥಿಗಳು ವಿ.ವಿ.ಗೆ ಅಲೆಯುತ್ತಿರುವುದು, ವಿವಿಯ ತಾತ್ಕಾಲಿಕ ಸಿಬ್ಬಂದಿಗಳಿಗೆ ಸರಿಯಾಗಿ ವೇತನ ನೀಡದೇ ಇರುವುದು ಸೇರಿದಂತೆ ಹಲವಾರು ಪ್ರಕರಣಗಳು ನಡೆಯುತ್ತಿದ್ದರೂ ಎಚ್ಚೆತ್ತುಕೊಳ್ಳದ ವಿವಿ ವಿರುದ್ಧ ಸಹಜವಾಗಿಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಂತಹ ವಿದ್ಯಾರ್ಥಿ ಸಂಘಟನೆಗಳು ನ್ಯಾಯಕ್ಕಾಗಿ ಬೀದಿಗಿಳಿದಿವೆ ಎಂದು ಹೇಳಿದರು.
Kochimul scam, Mangalore university, MLA Vedavyas Kamath demands clear probe. A former syndicate member of Mangalore University S.R. Harish Acharya has questioned the university conducting written tests to recruit staff for Kolar-Chickballapur Milk Producers Union Limited (KOCHIMUL) and other cooperative institutions without framing any regulations for conducting the tests. The recruitment to KOCHIML is now being inquired by the Enforcement Directorate.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm