ಬ್ರೇಕಿಂಗ್ ನ್ಯೂಸ್
12-02-24 02:28 pm Mangalore Correspondent ಕರಾವಳಿ
ಮಂಗಳೂರು, ಫೆ.12 : ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ. ಈಗಾಗಲೇ ಪಕ್ಷದ ಆಂತರಿಕ ಸರ್ವೇ ವರದಿಯಲ್ಲಿ ಈ ಮಾಹಿತಿ ಪಡೆದಿದ್ದೇವೆ. ಅಭ್ಯರ್ಥಿಗಳನ್ನು ಅಂತಿಮಗೊಳಿಸುತ್ತಿದ್ದು ಫೆಬ್ರವರಿ ಅಂತ್ಯಕ್ಕೆ ಮೊದಲ ಪಟ್ಟಿ ಬಿಡುಗಡೆ ಆಗುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಕ್ಕೆ ಮಾತನಾಡಿದ ಅವರು, ಈಗಾಗಲೇ ಎಲ್ಲ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಅರ್ಹರ ಪಟ್ಟಿಯನ್ನು ಕೆಪಿಸಿಸಿಯಿಂದ ಎಐಸಿಸಿಗೆ ಕಳುಹಿಸಲಾಗಿದೆ. ಪ್ರತಿ ಕ್ಷೇತ್ರದಲ್ಲಿ ಪರಿಶೀಲನೆ, ಸರ್ವೆ ಕಾರ್ಯ ನಡೆಯುತ್ತಿದ್ದು, ಶೀಘ್ರ ಅಂತಿಮಗೊಳ್ಳಲಿದೆ. ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಐದು ಮಂದಿಯ ಹೆಸರನ್ನು ಕಳುಹಿಸಲಾಗಿದೆ. ಪಕ್ಷದ ಹೈಕಮಾಂಡ್ ಸಮರ್ಥ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದೆ ಎಂದರು.
ಐದು ಗ್ಯಾರಂಟಿ ಮತ್ತು ಕೇಂದ್ರದ ಬಿಜೆಪಿಯ 10 ವರ್ಷಗಳ ದುರಾಡಳಿತ ಕಾಂಗ್ರೆಸ್‌ಗೆ ಗೆಲುವು ತಂದಕೊಡಲಿದೆ. ರಾಜ್ಯದಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನಗಳು ಸಿಗುವುದಿಲ್ಲ ಎಂದು ಬಿಜೆಪಿಗೆ ಅರಿವಾಗಿದ್ದು, ಅದಕ್ಕಾಗಿಯೇ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಪಕ್ಷದ ಸಭೆ ಮಾಡುತ್ತಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದರು.
ಕಾಂಗ್ರೆಸ್ ಕಾರ್ಯಕರ್ತರ ರಾಜ್ಯ ಮಟ್ಟದ ಬೃಹತ್ ಸಮಾವೇಶ ಫೆ.17ರಂದು ಅಡ್ಯಾರ್‌ನ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಮೈದಾನದಲ್ಲಿ ನಡೆಯಲಿದೆ. ಸಮಾವೇಶದ ಉದ್ಘಾಟನೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆರವೇರಿಸಲಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಪಕ್ಷದ ಸಂಸದರು, ಶಾಸಕರು, ಭಾಗವಹಿಸಲಿದ್ದಾರೆ. ಇದೊಂದು ಐತಿಹಾಸಿಕ ಸಮಾವೇಶವಾಗಲಿದೆ ಎಂದು ಸಲೀಂ ಅಹ್ಮದ್ ಹೇಳಿದರು.
ಕೇಂದ್ರ ಸರ್ಕಾರ ಕಳೆದ ಐದು ವರ್ಷಗಳಿಂದ ರಾಜ್ಯಕ್ಕೆ ಅನ್ಯಾಯ ಮಾಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಅವರು ರಾಜ್ಯದ ಪರ ಧ್ವನಿ ಎತ್ತುತ್ತಿಲ್ಲ. 4 ಮಂದಿ ಕೇಂದ್ರ ಸಚಿವರು ಇದ್ದರೂ ಪ್ರಯೋಜನ ಇಲ್ಲ. ಕರ್ನಾಟಕಕ್ಕೆ ಅನ್ಯಾಯ ಮಾಡಿದ್ದಾರೆ. ಅವರಲ್ಲಿ ಕೇಳಿದರೆ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ನಿರ್ಮಲಾ ಸೀತಾರಾಮನ್‌ಗೆ ರಾಜ್ಯದ ಪರ ಧ್ವನಿ ಎತ್ತಲು ಸಾಧ್ಯವಾಗದಿದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಲೀಂ ಅಹ್ಮದ್ ಆಗ್ರಹಿಸಿದರು.
The Congress is likely to win more than 20 seats in the state in the Lok Sabha elections. We have already received this information in the party's internal survey report. KPCC working president Saleem Ahmed said the candidates are being finalised and the first list will be released by the end of February.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm