ಬ್ರೇಕಿಂಗ್ ನ್ಯೂಸ್
24-11-20 03:16 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್, 24 : ಮಂಗಳೂರು ಮತ್ತು ಉಡುಪಿ ಉಭಯ ಜಿಲ್ಲೆಗಳಲ್ಲಿ ನದಿಗಳಲ್ಲಿ ಕುಡಿಯುವ ನೀರಿನ ಶೇಖರಣೆಗಾಗಿ ವೆಂಟೆಡ್ ಡ್ಯಾಂ ನಿರ್ಮಾಣದ ಯೋಜನೆಗಳನ್ನು ಹಾಕಲಾಗಿದ್ದು ಇದಕ್ಕಾಗಿ ಸುಮಾರು ಒಂದು ಸಾವಿರ ಪ್ರದೇಶಗಳನ್ನು ಗುರುತಿಸಲಾಗಿದ್ದು ಕೇಂದ್ರ ಸರಕಾರದ ಅನುದಾನ ಸಿಕ್ಕರೆ ಕೂಡಲೇ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುವದು ಎಂದು ಕಾನೂನು, ಸಂಸದೀಯ ವ್ಯವಹಾರ ಹಾಗೂ ಸಣ್ಣ ನೀರಾವರಿ ಸಚಿವರಾದ ಜೆ.ಸಿ ಮಾಧುಸ್ವಾಮಿ ಹೇಳಿದರು.
ದ.ಕ ಜಿಲ್ಲೆಯ ಮಂಗಳೂರು ತಾಲೂಕಿನ ಹರೇಕಳ ನೇತ್ರಾವತಿ ನದಿಗೆ ಸೇತುವೆ ಸಹಿತ ಉಪ್ಪುನೀರು ತಡೆ ಅಣೆಕಟ್ಟು ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಮಂಗಳವಾರ ಕಾಮಗಾರಿ ಪರಿಶೀಲನೆ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರು ತಾಲೂಕಿನ ಅಡ್ಯಾರಿನಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಹರೇಕಳ ಸಂಪರ್ಕದ 520 ಮೀಟರ್ ಉದ್ದದ ಸೇತುವೆ ಹಾಗೂ ಉಪ್ಪು ನೀರಿನಿಂದ ಸಿಹಿ ನೀರು ಬೇರ್ಪಡಿಸುವ 661.54 MCFT ಶೇಖರಣಾ ಸಾಮರ್ಥ್ಯದ ಕಿಂಡಿ ಅಣೆಕಟ್ಟನ್ನು ಸುಮಾರು 174 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. 2017-18ನೇ ಸಾಲಿನ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ಪಶ್ಚಿಮವಾಹಿನಿ ಯೋಜನೆಯಡಿಯಲ್ಲಿ ಕಾಮಗಾರಿ ನಡೆಯುತ್ತಿದೆ.
ಕಿಂಡಿ ಅಣೆಕಟ್ಟು ನಿರ್ಮಾಣದಿಂದ ಮಂಗಳೂರು ನಗರಕ್ಕೆ ಹೆಚ್ಚುವರಿ ಕುಡಿಯುವ ನೀರು ಪೂರೈಕೆ ಆಗುವುದರ ಜೊತೆಗೆ ಸ್ಥಳೀಯ ನಗರಸಭೆ, ಪಟ್ಟಣ ಪಂಚಾಯತ್, ಗ್ರಾಮ ಪಂಚಾಯತ್ ವ್ಯಾಪ್ತಿಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು. ಕಿಂಡಿ ಅಣೆಕಟ್ಟಿನಿಂದ ಬೇರ್ಪಟ್ಟ ಸಿಹಿ ನೀರನ್ನು ಸ್ಥಳೀಯ 261.20 ಹೆಕ್ಟೇರ್ ಕೃಷಿ ಪ್ರದೇಶಗಳಿಗೆ ಪಂಪ್ ಮೂಲಕ ಹರಿಸಲಾಗುವುದು.
ಡ್ಯಾಂನಲ್ಲಿ ಫುಟ್ ಪಾತ್ ಸೇರಿ 10 ಮೀಟರ್ ಅಗಲದ ಅಡ್ಯಾರ್- ಹರೇಕಳ ಸಂಪರ್ಕ ಸೇತುವೆಯೂ ನಿರ್ಮಾಣಗೊಳ್ಳಲಿದ್ದು, ಅವಶ್ಯಕತೆ ಬಿದ್ದಲ್ಲಿ ಮತ್ತೂ ಎರಡು ಮೀಟರ್ ಅಗಲಿಸಲಿದ್ದು ಇದರಿಂದ ಮಂಗಳೂರು- ಹರೇಕಳ ಪ್ರಯಾಣ ಸುಗಮವಾಗಲಿದೆ ಎಂದರು.
ವೆಂಟೆಡ್ ಡ್ಯಾಂನಲ್ಲಿ 52 ಕಿಂಡಿಗಳಿದ್ದು ಮುಂದಿನ 2021 ನೇ ನವೆಂಬರ್ ನಲ್ಲಿ ಅಣೆಕಟ್ಟು ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. ಅಣೆಕಟ್ಟು ಗುತ್ತಿಗೆದಾರರಾದ ಜಿ.ಶಂಕರ್ ಉಡುಪಿ ಮತ್ತು ಇಲಾಖಾಧಿಕಾರಿಗಳು ಜೊತೆಯಲ್ಲಿದ್ದರು.
174 Crores Project Vented Dams to come up in Dakshina Kannada stated J. C. Madhu Swamy Minister of Law, Parliamentary Affairs and Legislation of Karnataka.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm