ಬ್ರೇಕಿಂಗ್ ನ್ಯೂಸ್
15-02-24 10:44 am Mangalore Correspondent ಕರಾವಳಿ
ಮಂಗಳೂರು, ಫೆ.15: ಜೆರೋಸಾ ಶಾಲೆಯ ಎದುರಲ್ಲಿ ಪ್ರತಿಭಟನೆ, ಶಿಕ್ಷಕರಿಗೆ ನಿಂದನೆ ಮತ್ತು ಕ್ರಿಸ್ತಿಯನ್ ಶಾಲೆಗಳ ಬಹಿಷ್ಕಾರದ ಕರೆ ಇತ್ಯಾದಿ ಬೆಳವಣಿಗೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಪೊಲೀಸರಿಗೆ ದೂರು ನೀಡಿದ್ದು, ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ವಿಹಿಂಪ ಮುಖಂಡ ಶರಣ್ ಪಂಪ್ವೆಲ್ ಸೇರಿದಂತೆ ಆರು ಮಂದಿಯ ವಿರುದ್ಧ ಪಾಂಡೇಶ್ವರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅನಿಲ್ ಜೆರಾಲ್ಡ್ ಲೋಬೊ ಎಂಬವರು ನೀಡಿದ ದೂರಿನಲ್ಲಿ, ಸ್ಥಳೀಯ ಶಾಸಕರಾದ ವೇದವ್ಯಾಸ ಕಾಮತ್ ಶಾಲಾಡಳಿತ ಮಂಡಳಿಯ ಜೊತೆ ವಿಚಾರ ವಿಮರ್ಶೆ ಮಾಡದೇ ಶಾಲೆಯ ಮುಂಭಾಗ ಸೇರಿ ಪ್ರತಿಭಟನೆ ನಡೆಸಿದ್ದಾರೆ, ಇವರೊಂದಿಗೆ ಶಾಸಕ ಭರತ್ ಶೆಟ್ಟಿ, ಬಜರಂಗದಳ ಮುಖಂಡ ಶರಣ್ ಪಂಪ್ವೆಲ್, ಸ್ಥಳೀಯ ಬಿಜೆಪಿ ಕಾರ್ಪೊರೇಟರುಗಳಾದ ಸಂದೀಪ್ ಗರೋಡಿ, ಭರತ್ ಕುಮಾರ್ ಮತ್ತು ಇತರರು ಪ್ರತಿಭಟನೆಗೆ ಕೈಜೋಡಿಸಿದ್ದಾರೆ. ಶಾಲೆಯ ಮುಂಭಾಗದಲ್ಲಿ ಅಕ್ರಮವಾಗಿ ಸೇರಿಕೊಂಡು ಜೈಶ್ರೀರಾಮ್ ಘೋಷಣೆ ಕೂಗಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಕ್ರಿಸ್ತಿಯನ್ ಧರ್ಮದ ಬಗ್ಗೆ ಅವಹೇಳನ ಮಾತನಾಡಿ, ಶಾಲೆಯ ನಿಮಯಗಳನ್ನು ಉಲ್ಲಂಘಿಸುವಂತೆ ವಿದ್ಯಾರ್ಥಿಗಳಿಗೆ ಪ್ರಚೋದಿಸಿದ್ದಾರೆ. ಹಿಂದು- ಕ್ರಿಸ್ತಿಯನ್ ಧರ್ಮದ ಜನರ ನಡುವೆ ಗಲಭೆ ಉಂಟಾಗುವಂತೆ ಪ್ರಚೋದಿಸಿದ್ದಾರೆ. ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಭಂಗಕ್ಕೆ ಪ್ರಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.








ಬುಧವಾರ ರಾತ್ರಿ ಮಾಜಿ ಎಂಎಲ್ಸಿ ಐವಾನ್ ಡಿಸೋಜ ಮತ್ತು ಮಾಜಿ ಶಾಸಕ ಜೆಆರ್ ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಮುಖಂಡರು ಪಾಂಡೇಶ್ವರ ಠಾಣೆಗೆ ತೆರಳಿ, ಎಸಿಪಿ ಮತ್ತು ಇನ್ಸ್ ಪೆಕ್ಟರ್ ಅವರನ್ನು ಭೇಟಿಯಾಗಿ ಘಟನೆಯ ಬಗ್ಗೆ ಹೇಳಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ಪೊಲೀಸರು ಐದು ಮಂದಿ ಪ್ರಮುಖರು ಮತ್ತು ಇತರರ ವಿರುದ್ಧ ಸೆಕ್ಷನ್ 153ಎ, 295ಎ, 505(2), 506, 149 ಅಡಿ ಎಫ್ಐಆರ್ ದಾಖಲಿಸಿದ್ದಾರೆ. ಈಗಾಗಲೇ ಶಾಸಕ ವೇದವ್ಯಾಸ ಕಾಮತ್ ವಿರುದ್ಧ ಹಕ್ಕುಚ್ಯುತಿ ಬಗ್ಗೆ ವಿಧಾನಸಭೆ ಸ್ಪೀಕರ್ ಗೆ ದೂರು ನೀಡುವುದಾಗಿ ಐವಾನ್ ಡಿಸೋಜ ತಿಳಿಸಿದ್ದು ಇದರ ಬೆನ್ನಲೇ ಎಫ್ಐಆರ್ ದಾಖಲಿಸಿದ್ದಾರೆ. ಶಾಸಕರನ್ನು ವಿಧಾನಸಭೆಯಿಂದ ಅನರ್ಹಗೊಳಿಸಲು ಸಿಎಂ ಸಿದ್ದರಾಮಯ್ಯ ಅವರಿಗೆ ಆಗ್ರಹಿಸುವುದಾಗಿಯೂ ಹೇಳಿದ್ದಾರೆ.
Mangalore Gerosa school controversy, FIR booked against MLA Vedavyas Kamath, bharath shetty and sharan pumpwell. The diocese of Mangalore has requested the departments of minority welfare, child welfare and the women’s commission to hold a fair inquiry into the recent incidents at a school in the city where a teacher was removed from her post for her alleged anti-Hindu remarks.
23-07-26 08:05 pm
HK News Desk
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
24-07-26 03:25 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
ಮೋದಿ ಮೌನ ಹೊಸದೇನಲ್ಲ, 'ನಾವು ತಪ್ಪು ಮಾಡಿದ್ದೇವೆ' ಎ...
23-07-26 05:57 pm
ರಾಜಧಾನಿ ದೆಹಲಿಯಲ್ಲಿ ಹೆಚ್ಚಿದ ಪ್ರತಿಭಟನೆ ಕಿಚ್ಚು ;...
23-07-26 05:48 pm
23-07-26 10:27 pm
Mangaluru Staffer
ವಿದ್ಯಾರ್ಥಿಗಳಿಗೆ ಲಾಠಿಚಾರ್ಜ್ ದೇಶದ ಭವಿಷ್ಯದ ಮೇಲಿನ...
22-07-26 09:18 pm
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
24-07-26 03:03 pm
HK News Staffer
14 ವರ್ಷಗಳ ಹಿಂದೆ ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್...
24-07-26 02:18 pm
ಸುಳ್ಯದಲ್ಲಿ ವಿವಾಹಿತ ಮಹಿಳೆ ಶಂಕಾಸ್ಪದ ಸಾವು ಪ್ರಕರಣ...
22-07-26 10:24 pm
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm