Mangalore Bantwal suicide: ಬಂಟ್ವಾಳ ; ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ತುಮಕೂರು ಮೂಲದ ಯುವತಿ ಆತ್ಮಹತ್ಯೆ

15-02-24 12:09 pm       Mangalore Correspondent   ಕರಾವಳಿ

ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ.

ಬಂಟ್ವಾಳ, ಫೆ 15: ಚಲಿಸುತ್ತಿದ್ದ ರೈಲಿನಿಂದ ನದಿಗೆ ಹಾರಿ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ನಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿಯ ಪಡಸಾಕೆಹಟ್ಟಿ ನಿವಾಸಿ ನಯನಾ ಎಂ.ಜಿ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಣ್ಣೂರು-ಬೆಂಗಳೂರು-ಮಂಗಳೂರು ರೈಲಿನಲ್ಲಿ ಚಲಿಸುತ್ತಿದ್ದ ಸಂದರ್ಭ ತಾನು ಕುಳಿತಿದ್ದ ಸೀಟ್‌ನಲ್ಲಿ ಬ್ಯಾಗ್ ಬಿಟ್ಟು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಯನ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದು, ಬಿಸಿರೋಡಿನ ನೇತ್ರಾವತಿ ನದಿಯ ರೈಲ್ವೆ ಓವರ್ ಬ್ರಿಡ್ಜ್ ನಲ್ಲಿ ರೈಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆಕೆ ಕುಳಿತುಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿಸಿರೋಡಿನ ಕಚೇರಿಗೆ ನೀಡಿ ಮಾಹಿತಿ ನೀಡಿದ್ದಾರೆ.

ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಸ್ಥಳೀಯ ಮುಳುಗುತಜ್ಞ ಮಹಮ್ಮದ್ ಅವರ ತಂಡ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಬಂಟ್ವಾಳ ನಗರ ಪೊಲೀಸ್ ಠಾಣೆಯ ಎ‌ಎಸ್.ಐ.ದೇವಪ್ಪ, ವಿಜಯ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Mangalore Bantwal 27 year old girl jumps from speeding train and commits suicide. The deceased has been identifed as Nayana M J.