ಬ್ರೇಕಿಂಗ್ ನ್ಯೂಸ್
24-11-20 07:21 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 24: ಆರ್ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿದ್ದ ವಿಘ್ನೇಶ್ ನಾಯಕ್ ಎಂಬ ಯುವಕನ ಆತ್ಮಹತ್ಯೆ ಪ್ರಕರಣ ಈಗ ಸಾರ್ವಜನಿಕರಲ್ಲಿ ಸಂಶಯಕ್ಕೆ ಕಾರಣವಾಗಿದೆ. ಬಾಳಿಗಾ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನರೇಶ್ ಶೆಣೈಗೆ ಸೇರಿದ ಆಯುರ್ವೇದಿಕ್ ಶಾಪ್ ನಲ್ಲಿ ಕೆಲಸಕ್ಕಿದ್ದ ಯುವಕ ದಿಢೀರ್ ಆಗಿ ಸಾವಿಗೆ ಶರಣಾಗಿದ್ದು ಸಂಶಯಕ್ಕೆ ಕಾರಣವಾಗಿದೆ.
ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ನಡೆಸಬೇಕಾಗಿದೆ ಎಂದು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಒತ್ತಾಯಿಸಿದ್ದಾರೆ.
ಕಾಂಗ್ರೆಸ್ ಭವನದಲ್ಲಿ ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಮಿಥುನ್ ರೈ, ವಿನಾಯಕ್ ಬಾಳಿಗಾ ಹತ್ಯೆ ಬಳಿಕ ವಿಘ್ನೇಶ್ ನಾಪತ್ತೆಯಾಗಿದ್ದ. ಹತ್ಯೆಗೆ ಬಳಸಿದ್ದ ಕ್ವಾಲಿಸ್ ಕಾರು ವಿಘ್ನೇಶ್ ಹೆಸರಲ್ಲಿತ್ತು. ಇದೀಗ ನಿನ್ನೆ ಜಿಲ್ಲಾ ನ್ಯಾಯಾಲಯದಲ್ಲಿ ವಿನಾಯಕ್ ಬಾಳಿಗಾ ಕೊಲೆ ಪ್ರಕರಣದಲ್ಲಿ ಅಂತಿಮ ಹಂತದ ವಿಚಾರಣೆ ಇತ್ತು. ಅದರಲ್ಲಿ ವಿಘ್ನೇಶ್ ಪ್ರಮುಖ ಸಾಕ್ಷಿಯಾಗಿ ಹಾಜರಾಗಬೇಕಿತ್ತು.

ಅದೇ ದಿನ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಅಂದರೆ, ಇದರಲ್ಲಿ ಪ್ರಚೋದನೆ ಇರುವ ಸಂಶಯವಿದೆ. ನರೇಶ್ ಶೆಣೈ ಕೈವಾಡ ಇರುವ ಬಗ್ಗೆ ಸಂಶಯ ಜನರಲ್ಲಿದೆ. ಇದಕ್ಕಾಗಿ ನರೇಶ್ ಶೆಣೈಯನ್ನು ಪೊಲೀಸರು ತನಿಖೆಗೆ ಒಳಪಡಿಸಬೇಕು ಎಂದು ಹೇಳಿದ್ದಾರೆ.
ವಿನಾಯಕ ಬಾಳಿಗಾ ಸೋದರಿಗೂ ಬೆದರಿಕೆ ಕರೆಗಳು ಬರುತ್ತಿದ್ದು, ಪೊಲೀಸರು ರಕ್ಷಣೆ ನೀಡಬೇಕಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆಯೇ ಎಂಬ ನಿಟ್ಟಿನಲ್ಲಿ ನರೇಶ್ ಶೆಣೈಯನ್ನು ತನಿಖೆ ನಡೆಸಬೇಕು. ನರೇಶ್ ಮತ್ತು ವಿಘ್ನೇಷ್ ಕಾಲ್ ಡಿಟೈಲ್ಸ್ ತನಿಖೆ ಮಾಡಬೇಕು ಎಂದು ಹೇಳಿದ ಮಿಥುನ್ ರೈ, ವಿಘ್ನೇಶ್ ಆತ್ಮಹತ್ಯೆ ಪ್ರಕರಣದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಲು ಕಾಂಗ್ರೆಸ್ ಆಗ್ರಹಿಸುತ್ತದೆ ಎಂದಿದ್ದಾರೆ.

2016ರಲ್ಲಿ ನಡೆದಿದ್ದ ವಿನಾಯಕ್ ಬಾಳಿಗಾ ಪ್ರಕರಣ ಮಂಗಳೂರಿನ ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದ್ದು ಕೊನೆಯ ಹಂತಕ್ಕೆ ಬಂದಿದೆ. ಇದೇ ವೇಳೆ, ಪ್ರಕರಣದ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿದ್ದ ವಿಘ್ನೇಶ್ ಸಾವಿಗೆ ಶರಣಾಗಿದ್ದು ಸಂಶಯಕ್ಕೆ ಕಾರಣವಾಗಿದೆ.
Video:
Witness in Activist murder case and close aide of Naresh Shenoy Vignesh Nayak was found dead by suicide at his residence. Congress leader Mithun Rai has urged for comprehensive probe in this case.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm