ಮಂಗಳೂರು ರಥಬೀದಿಯಲ್ಲಿ ವೈಭವದ 'ಕೊಡಿಯಾಲ ತೇರು' ರಥೋತ್ಸವ 

16-02-24 10:54 pm       Mangalore Correspondent   ಕರಾವಳಿ

ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ " ಮಂಗಳೂರು ರಥೋತ್ಸವ " ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. 

Photo credits : ಮಂಜು ನೀರೇಶ್ವಾಲ್ಯ

ಮಂಗಳೂರು, ಫೆ.16: ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದ ಇತಿಹಾಸ ಪ್ರಸಿದ್ಧ " ಮಂಗಳೂರು ರಥೋತ್ಸವ " ಸಹಸ್ರಾರು ಭಜಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. 

ಬ್ರಹ್ಮರಥೋತ್ಸವ ಪ್ರಯುಕ್ತ ಬೆಳಗ್ಗೆ ಮಹಾಪ್ರಾರ್ಥನೆಯೊಂದಿಗೆ ಪ್ರಾರಂಭಗೊಂಡು ಶ್ರೀ ದೇವರಿಗೆ ಶತಕಲಶಾಭಿಷೇಕ , ಗಂಗಾಭಿಷೇಕ , ಪುಳಕಾಭಿಷೇಕ ಕಾಶಿ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ದಿವ್ಯ ಹಸ್ತಗಳಿಂದ ನೆರವೇರಿತು.  ಯಜ್ಞ ಮಂಟಪದಲ್ಲಿ ಮಹಾಯಜ್ಞ ಮಹಾ ಪೂರ್ಣಾಹುತಿ ಬಳಿಕ ಶ್ರೀ ದೇವರು ಸ್ವರ್ಣ ಪಲ್ಲಕಿಯಲ್ಲಿ ವಿರಾಜಮಾನರಾಗಿ ಭವ್ಯ ಬ್ರಹ್ಮರಥದಲ್ಲಿ ರಥಾರೂಢರಾಗಿ ಮಂಗಳೂರು ರಥೋತ್ಸವ ನೆರವೇರಿತು. ದೇಶ ವಿದೇಶಗಳಿಂದ ಗೌಡ ಸಾರಸ್ವತ ಸಮಾಜದ ಸಹಸ್ರಾರು ಮಂದಿ ಪಾಲ್ಗೊಂಡು ಪುನೀತರಾದರು. 

ಚಿತ್ರ : ಮಂಜು ನೀರೇಶ್ವಾಲ್ಯ

The historic 'Mangalore Rathotsava' of Sri Venkataramana Temple, Rathabeedi, was held in the presence of thousands of devotees.