ಬ್ರೇಕಿಂಗ್ ನ್ಯೂಸ್
19-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.19: ಬಿಜೆಪಿಯಲ್ಲಿ ಮುನಿಸಿನಲ್ಲಿರುವ ಮಾಜಿ ಸಚಿವ ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಜೊತೆ ಜೊತೆಯಾಗೇ ಕಾಣಿಸಿಕೊಂಡಿದ್ದಾರೆ. ಭಾನುವಾರ ಜೊತೆಯಾಗಿ ವಿಮಾನದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಸೋಮಶೇಖರ್, ಕರ್ಣಾಟಕ ಬ್ಯಾಂಕ್ ಶತಮಾನೋತ್ಸವ ಅಚರಣೆ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.
ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರ್ಣಾಟಕ ಬ್ಯಾಂಕ್ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದರು. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಬರುತ್ತಾರೆ ಎಂದಿದ್ದರೂ ಅವರು ಬರೋದು ಕ್ಯಾನ್ಸಲ್ ಆಗಿತ್ತು. ಆದರೆ ಸೋಮಶೇಖರ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ. ಆದರೆ ಡಿಕೆಶಿ ಜತೆಯಲ್ಲೇ ಬಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ.


ಎಸ್.ಟಿ.ಸೋಮಶೇಖರ್ ಬಿಜೆಪಿ ಶಾಸಕರಾಗಿದ್ದರೂ, ಕಾಂಗ್ರೆಸ್ ಜೊತೆಗೆ ಹಲವು ಬಾರಿ ಗುರುತಿಸಿಕೊಂಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ಬಿಜೆಪಿ ಜೊತೆಗೆ ವಿರಸ ಹೊಂದಿರುವ ಅವರು ಕಾಂಗ್ರೆಸ್ ಸೇರುತ್ತಾರೆ ಎಂದು ಹಲವು ಸಂದರ್ಭಗಳಲ್ಲಿ ಸುದ್ದಿಗಳು ಹರಿದಾಡಿದ್ದವು. ಇದೀಗ ಮಂಗಳೂರಿನ ಕಾರ್ಯಕ್ರಮಕ್ಕೆ ಬಂದಿದ್ದ ಡಿಕೆಶಿ ಜೊತೆಗೆ ವಿಶೇಷ ವಿಮಾನದಲ್ಲಿ ಕಾಣಿಸಿಕೊಂಡು ಚರ್ಚೆಗೆ ಕಾರಣವಾಗಿದ್ದಾರೆ. ಈ ಮೂಲಕ ಎಸ್.ಟಿ ಸೋಮಶೇಖರ್ ನಡೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆಯೇ ಎಂಬ ಶಂಕೆ ಮೂಡುವಂತೆ ಮಾಡಿದೆ.
BJP MLA Somashekar and Dcm Dk Shivakumar come together in special flight to Mangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm