ಬ್ರೇಕಿಂಗ್ ನ್ಯೂಸ್
20-02-24 03:19 pm Mangalore Correspondent ಕರಾವಳಿ
ಉಳ್ಳಾಲ, ಫೆ.20: ಕೋಟೆಕಾರು ಬಳಿಯ ಮಾಡೂರಿನ ಪಿಜಿಯೊಂದರಲ್ಲಿದ್ದು ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಅಧ್ಯಯನ ಮಾಡುತ್ತಿದ್ದ ಪುತ್ತೂರು ಮೂಲದ ಬ್ರಾಹ್ಮಣ ವಿದ್ಯಾರ್ಥಿನಿ ಮೂರು ದಿನಗಳಿಂದ ನಾಪತ್ತೆಯಾಗಿದ್ದು ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.
ಪುತ್ತೂರು ಮೂಲದ ಚೈತ್ರಾ ಹೆಬ್ಬಾರ್(27) ನಾಪತ್ತೆಯಾದ ವಿದ್ಯಾರ್ಥಿನಿ. ಚೈತ್ರಾ ದೇರಳಕಟ್ಟೆಯ ಖಾಸಗಿ ವಿದ್ಯಾಸಂಸ್ಥೆಯಲ್ಲಿ ಎಂಎಸ್ಸಿ ಮುಗಿಸಿ ಫುಡ್ ಸೆಕ್ಯುರಿಟಿ ವಿಷಯದಲ್ಲಿ ಪಿಎಚ್ ಡಿ ಅಧ್ಯಯನ ನಡೆಸುತ್ತಿದ್ದಳು. ಕೋಟೆಕಾರು ಮಾಡೂರಿನ ಅಹನಾ ಎಂಬ ಪಿಜಿಯಲ್ಲಿ ಸ್ನೇಹಿತೆಯರೊಂದಿಗೆ ಚೈತ್ರಾ ನೆಲೆಸಿದ್ದಳು.
ಚೈತ್ರಾಳ ತಂದೆ ಮೃತರಾಗಿದ್ದು ಮಂಗಳೂರಿನ ಕದ್ರಿಯಲ್ಲಿ ನೆಲೆಸಿರುವ ದೊಡ್ಡಪ್ಪನ ಆಶ್ರಯದಲ್ಲಿದ್ದು ಎಂಎಸ್ಸಿ ಪೂರೈಸಿದ್ದಳು. ಕಳೆದ ಫೆ.17 ರಂದು ಬೆಳಗ್ಗೆ 9 ಗಂಟೆಗೆ ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರಲ್ಲಿ ತೆರಳಿದ್ದ ಚೈತ್ರಾ ಕದ್ರಿಯ ಮನೆಗೂ ತೆರಳದೆ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾಳೆ.
ಚೈತ್ರಾ ನೆಲೆಸಿದ್ದ ಪಿಜಿಗೆ ಪುತ್ತೂರಿನ ಮುಸ್ಲಿಂ ಯುವಕನೋರ್ವ ಪದೇ ಪದೇ ಬರುತ್ತಿದ್ದು ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಬಗ್ಗೆ ಸ್ಥಳೀಯರು ಆರೋಪಿಸಿ ಹಿಂದು ಸಂಘಟನೆಗಳ ಗಮನಕ್ಕೆ ತಂದಿದ್ದರು.
ಈ ಬಗ್ಗೆ ವಿಷಯ ತಿಳಿದ ಬಜರಂಗದಳ ಮುಖಂಡ ಅರ್ಜುನ್ ಮಾಡೂರು ಅವರು ವಾರದ ಹಿಂದೆ ಚೈತ್ರಾಳ ದೊಡ್ಡಪ್ಪನಿಗೆ ಮಾಹಿತಿ ನೀಡಿದ್ದರು. ಫೆ.17 ರಂದು ಚೈತ್ರಾ ನಾಪತ್ತೆಯಾದ ವಿಚಾರ ತಿಳಿದ ದೊಡ್ಡಪ್ಪ ಮರುದಿನ ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಅದಾಗಿ ಮೂರು ದಿನ ಕಳೆದರೂ ಚೈತ್ರಾ ಮರಳಿ ಬಂದಿಲ್ಲ, ಎಲ್ಲಿ ಹೋಗಿದ್ದಾಳೆಂದು ಗೊತ್ತಾಗಿಲ್ಲ. ಬಜರಂಗದಳ ಪ್ರಮುಖರು ಪುತ್ತೂರಿನ ಮುಸ್ಲಿಂ ಯುವಕನೊಂದಿಗೆ ತೆರಳಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
Chaitra Hebbar, a 27-year-old Puttur native and PHD student, goes missing from Mangalore. She was pursuing a thesis in food security and living at a local PG in Derlakatte. It has been stated that she fled with her Muslim friend. Ullal police are currently investigating the case.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm