ಬ್ರೇಕಿಂಗ್ ನ್ಯೂಸ್
21-02-24 03:55 pm Mangalore Correspondent ಕರಾವಳಿ
ಮಂಗಳೂರು, ಫೆ.21: ಧರ್ಮಸ್ಥಳದ ಸೌಜನ್ಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನೈಜ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ರಚಿಸಬೇಕೆಂದು ಸೌಜನ್ಯಾ ತಂದೆ ಚಂದಪ್ಪ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಆಲಿಸಿದ ನ್ಯಾಯಪೀಠ ರಾಜ್ಯ ಸರಕಾರ ಮತ್ತು ಸಿಬಿಐ ತನಿಖಾ ತಂಡಕ್ಕೆ ನೋಟೀಸ್ ಜಾರಿಗೊಳಿಸಿದೆ.
ರಾಜ್ಯ ಪೊಲೀಸ್ ಇಲಾಖೆಯ ಮುಖ್ಯಸ್ಥ ಡಿಜಿಪಿ, ಅಪರಾಧ ವಿಭಾಗದ ಎಡಿಜಿಪಿ ಮತ್ತು ಐಜಿಪಿ, ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ, ಬೆಳ್ತಂಗಡಿ ಠಾಣೆ ಇನ್ಸ್ ಪೆಕ್ಟರ್ ಅವರಿಗೂ ಕೋರ್ಟ್ ನೋಟೀಸ್ ಮಾಡಿದೆ. ನೈಜ ಆರೋಪಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡ ನೇಮಕ ಮಾಡಬೇಕು, ಅಲ್ಲದೆ, ನೈಜ ಆರೋಪಿಗಳ ಪತ್ತೆಯಾಗದಂತೆ ಸಾಕ್ಷ್ಯ ನಾಶ ಮಾಡಿರುವ ತನಿಖಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕೆಂದು ಅರ್ಜಿದಾರರು ಕೇಳಿಕೊಂಡಿದ್ದಾರೆ. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾ.ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಪ್ರತಿವಾದಿಗಳಿಗೆ ನೋಟೀಸ್ ಮಾಡಿದೆ.

ಈಗಾಗಲೇ ಪ್ರಕರಣದ ಆರೋಪಿಯೆಂದು ಗುರುತಿಸಿರುವ ಸಂತೋಷ್ ರಾವ್ ನನ್ನು ಖುಲಾಸೆಗೊಳಿಸಿದ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಕ್ರಿಮಿನಲ್ ಮೇಲ್ಮನವಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆಗೆ ಬಾಕಿಯಿದೆ. ಇದೇ ವೇಳೆ, ಮರು ತನಿಖೆಯ ಅರ್ಜಿಯನ್ನೂ ವಿಭಾಗೀಯ ಪೀಠದ ಮುಂದೆ ಇರಿಸಬೇಕು ಎಂದು ವಕೀಲರು ಮನವಿ ಮಾಡಿದ್ದಾರೆ. ಅದನ್ನು ಪರಿಗಣಿಸಿದ ನ್ಯಾಯಪೀಠವು, ಸೂಕ್ತ ವಿಭಾಗೀಯ ಪೀಠದ ಮುಂದೆ ಈ ಅರ್ಜಿಯನ್ನು ವಿಚಾರಣೆಗೆ ನಿಗದಿಪಡಿಸಲು ಮುಖ್ಯ ನ್ಯಾಯಮೂರ್ತಿ ಅವರಿಂದ ಅನುಮತಿ ಪಡೆಯುವಂತೆ ಕೋರ್ಟ್ ರಿಜಿಸ್ಟ್ರಾರ್ ಗೆ ಸೂಚಿಸಿದೆ.
2012ರ ಅಕ್ಟೋಬರ್ 9ರಂದು ಪಿಯುಸಿ ವಿದ್ಯಾರ್ಥಿನಿ ಸೌಜನ್ಯಾಳನ್ನು ಧರ್ಮಸ್ಥಳ ಬಳಿಯ ಪಾಂಗಾಳದಲ್ಲಿ ಅಪಹರಿಸಿದ್ದ ತಂಡವು ಸಾಮೂಹಿಕ ಅತ್ಯಾಚಾರಗೈದು ಬರ್ಬರವಾಗಿ ಹತ್ಯೆಗೈದು ರಾತ್ರಿ ವೇಳೆ ಅದೇ ಸ್ಥಳದಲ್ಲಿ ಶವವನ್ನು ಎಸೆದಿತ್ತು. ಘಟನೆ ಹಿನ್ನೆಲೆಯಲ್ಲಿ ಬೆಳ್ತಂಗಡಿಯಲ್ಲಿ ಆಕ್ರೋಶ ಭುಗಿಲೆದ್ದಿತ್ತು. ಬೆಳ್ತಂಗಡಿ ಪೊಲೀಸರು ಸಂತೋಷ್ ರಾವ್ ನನ್ನು ಆರೋಪಿಯೆಂದು ಬಂಧಿಸಿದ್ದರು. ಆನಂತರ, ಜನಾಕ್ರೋಶಕ್ಕೆ ಹೆದರಿ ತನಿಖೆಯನ್ನು ರಾಜ್ಯ ಸರಕಾರ ಸಿಬಿಐಗೆ ವಹಿಸಿತ್ತು. ತನಿಖೆ ಪೂರ್ತಿಗೊಳಿಸಿದ ಸಿಬಿಐ ಅಧಿಕಾರಿಗಳು ಸಂತೋಷ್ ರಾವ್ ನನ್ನೇ ಆರೋಪಿಯೆಂದು ದೋಷಾರೋಪ ಸಲ್ಲಿಸಿದ್ದರು. ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಸಾಕ್ಷ್ಯಗಳ ಕೊರತೆಯಿಂದ ಆರೋಪಿಯನ್ನು ಖುಲಾಸೆಗೊಳಿಸಿ 2023ರ ಜೂನ್ 16ರಂದು ಬಿಡುಗಡೆ ಮಾಡಿತ್ತು.
The Karnataka High Court issued notice to the state police chief and the CBI on a petition filed by Chandappa Gowda from Dharmasthala of Dakshina Kannada district, seeking directions to the CBI to conduct fresh investigation by constituting a Special Investigation Team (SIT) into the brutal rape and murder of his minor daughter, Sowjanya, in 2012, to ensure that the actual perpetrators are booked and prosecuted, to render justice to the victim.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm