ಬ್ರೇಕಿಂಗ್ ನ್ಯೂಸ್
22-02-24 10:46 pm Mangalore Correspondent ಕರಾವಳಿ
ಉಳ್ಳಾಲ, ಫೆ.22: ಫೆ.19ರಂದು ಮನೆಯಿಂದ ನಾಪತ್ತೆಯಾಗಿದ್ದ ಸೋಮೇಶ್ವರದ ಯುವಕನ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಉಳ್ಳಾಲ ತಾಲೂಕಿನ ಸೋಮೇಶ್ವರ ಮೂಡಾ ಬಡಾವಣೆ ನಿವಾಸಿ ಗೌತಮ್ ಎಂ.(30) ಮೃತ ಯುವಕ. ಫೈನಾನ್ಸ್ ಸೀಸರ್ ಆಗಿದ್ದ ಗೌತಮ್ ಕಳೆದ ಸೋಮವಾರ ಸಂಜೆ ತೊಕ್ಕೊಟ್ಟಿನಲ್ಲಿ ನಡೆದಿದ್ದ ಬಬ್ಬುಸ್ವಾಮಿ ದೈವದ ಪುನರ್ ಪ್ರತಿಷ್ಟೆ, ಕಲಶಾಭಿಶೇಕದ ಹೊರೆ ಕಾಣಿಕೆಯಲ್ಲಿ ಭಾಗವಹಿಸಿ ಮನೆಗೆ ತೆರಳಿದ್ದ. ರಾತ್ರಿ ವೇಳೆ ಮನೆ ಮಂದಿಯಲ್ಲಿ ಕಿರಿಕ್ ಮಾಡಿದ್ದ ಗೌತಮ್ ಮನೆ ಬಿಟ್ಟು ತೆರಳಿದ್ದನಂತೆ. ಗೌತಮ್ ಮತ್ತೆ ಮರಳದ ಹಿನ್ನಲೆಯಲ್ಲಿ ಮಾರನೇ ದಿವಸ ಮನೆ ಮಂದಿ ಉಳ್ಳಾಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.
ಮಂಗಳವಾರ ಸಂಜೆ ವೇಳೆ ನೇತ್ರಾವತಿ ನದಿಯಲ್ಲಿ ಶವ ಪತ್ತೆಯಾಗಿದ್ದು ಪಾಂಡೇಶ್ವರ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಇಂದು ಮನೆ ಮಂದಿ ಮೃತದೇಹ ಗುರುತಿಸಿದ್ದು ಅವರ ಸಮಕ್ಷಮದಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗೌತಮ್ ವಿವಾಹಿತನಾಗಿದ್ದು ವರ್ಷಗಳ ಹಿಂದೆಯೇ ಪತ್ನಿಯಿಂದ ವಿಚ್ಛೇದಿತನಾಗಿದ್ದ. ಕುಡಿತದ ಚಟ ಮೈಗೂಡಿಸಿದ್ದ ಗೌತಮ್ ಕ್ಷುಲ್ಲಕ ಕಾರಣಗಳಿಗೆ ಮನೆ ಮಂದಿಯಲ್ಲಿ ಕಿರಿಕ್ ಮಾಡುತ್ತಲೇ ಇದ್ದನಂತೆ. ಮೃತ ಗೌತಮ್ ತಂದೆ, ತಾಯಿ, ಇಬ್ಬರು ಸಹೋದರರನ್ನ ಅಗಲಿದ್ದಾನೆ.
Mangalore Body of Someshwara youth in Netravati, suicide suspected.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm