Bjp gherao congress office Mangalore, Pakistan Zindabad: ಪಾಕ್ ಪರ ಘೋಷಣೆ ಖಂಡಿಸಿ ಮಂಗಳೂರಿನಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ; ಯುವಮೋರ್ಚಾ ಕಾರ್ಯಕರ್ತರು ಪೊಲೀಸರ ವಶಕ್ಕೆ 

28-02-24 11:12 am       Mangalore Correspondent   ಕರಾವಳಿ

ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ‌

ಮಂಗಳೂರು, ಫೆ.28: ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿರುವುದನ್ನು ಖಂಡಿಸಿ ಮಂಗಳೂರಿನಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ‌

ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ನೇತೃತ್ವದಲ್ಲಿ ಕಾರ್ಯಕರ್ತರು ನುಗ್ಗಿ ಬಂದಿದ್ದಾರೆ. ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯ ಸುತ್ತ ಬಿಗಿ ಪೊಲೀಸ್ ಕಾವಲು ಹಾಕಲಾಗಿತ್ತು.  50ರಷ್ಟಿದ್ದ ಕಾರ್ಯಕರ್ತರು ಪೊಲೀಸರನ್ನು ತಳ್ಳಿಕೊಂಡು ಬಂದಿದ್ದು ಪೊಲೀಸರು ಅಡ್ಡಗಟ್ಟಿ ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. 

ಕಾಂಗ್ರೆಸ್ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಸಿದ್ಧಾರ್ಥ್ ಗೋಯಲ್ ನೇತೃತ್ವದಲ್ಲಿ ಪೊಲೀಸರು ಠಿಕಾಣಿ ಹೂಡಿದ್ದಾರೆ. ನಿನ್ನೆ ಸಂಜೆಯ ವೇಳೆಗೆ ರಾಜ್ಯಸಭೆ ಚುನಾವಣೆ ಗೆದ್ದ ನಾಸಿರ್ ಹುಸೇನ್ ಪರವಾಗಿ ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಆರೋಪ ಕೇಳಿಬಂದಿದೆ.

Bjp yuva morcha tries to gherao congress office in Mangalore over Pakistan Zindabad after which police took Bjp members into custody. The BJP has alleged that "Pakistan Zindabad" slogans were raised by Congress workers inside the Assembly while celebrating party leader Naseer Hussain's win in the Rajya Sabha polls. The Congress rejected these claims, saying its workers were only raising slogans for Hussain and not what the BJP was claiming.