ಬ್ರೇಕಿಂಗ್ ನ್ಯೂಸ್
28-02-24 07:27 pm Udupi Correspondent ಕರಾವಳಿ
ಉಡುಪಿ, ಫೆ.28: ಪಾಕಿಸ್ತಾನ ಜಿಂದಾಬಾದ್ ಎಂದು ಕೂಗುವ ಮಾನಸಿಕತೆ ಇದ್ದವರನ್ನು ಪೊಲೀಸರು ವಿಧಾನಸೌಧ ಒಳಗೆ ಹೇಗೆ ಬಿಟ್ಟರು? ರಾಜ್ಯಸಭಾ ಸದಸ್ಯ ಸಯ್ಯದ್ ನಾಸೀರ್ ಹುಸೇನ್ ಅವರನ್ನು ವಿಚಾರಣೆಗೆ ಒಳಪಡಿಸಬೇಕು. ಸಯ್ಯದ್ ನಾಸೀರ್ ಹುಸೇನ್ ಬೆಂಬಲಿಗರ ಸಂಪರ್ಕ ಯಾರ ಜೊತೆ ಇದೆ? ಅಲ್ಲಿ ಬಂದಿರುವ ಯುವಕರ ಸಂಪರ್ಕ ಯಾರ ಜೊತೆ ಇದೆ? ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯುತ್ತೇನೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಬಹಳ ದೊಡ್ಡ ಷಡ್ಯಂತ್ರದ ಗುಮಾನಿ ಇದೆ ಎಂದರು. ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ. ಇದರ ಹಿಂದಿರುವ ಶಕ್ತಿಯನ್ನು ಪೊಲೀಸರು ಪತ್ತೆ ಮಾಡಬೇಕು. ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಪಿಯನ್ನ ಬಂಧಿಸುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಅಡ್ಡ ಮತದಾನ ಮಾಡಿರುವ ಕುರಿತ ಪ್ರಶ್ನೆಗೆ, ಅಡ್ಡ ಮತದಾನ ಮಾಡಿದವರ ಮೇಲೆ ಜನ ಕ್ರಮ ಕೈಗೊಳ್ಳುತ್ತಾರೆ. ಚುನಾವಣಾ ಆಯೋಗ, ಪಕ್ಷ ಕ್ರಮ ಕೈಗೊಳ್ಳುತ್ತದೆ. ಬಿಜೆಪಿಗೆ ಬಂದು ಮಂತ್ರಿಯಾಗಿ ಒಳ್ಳೆಯ ಖಾತೆಯನ್ನು ಅವರಿಗೆ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದಿದೆ ಎಂದು ಮತ್ತೆ ಆ ಕಡೆ ತಿರುಗುವ ಮಾನಸಿಕತೆಗೆ ಧಿಕ್ಕಾರ ಇದೆ. ಅಧಿಕಾರ ಇಲ್ಲದಿದ್ದಾಗ ಬರುವುದು, ಅಧಿಕಾರ ಹೋದಾಗ ವಾಪಾಸ್ ಹೋಗುವುದು ಪಕ್ಷ ನಿಷ್ಠೆ, ಸಮಾಜದ ಮೇಲೆ ಭಕ್ತಿ ಇಲ್ಲ ಎಂಬುದಕ್ಕೆ ಸಾಕ್ಷಿ ಎಂದು ವಾಗ್ದಾಳಿ ಮಾಡಿದರು.
ಬಿಜೆಪಿ ಸೇರಿದಾಗ ಯಶವಂತಪುರದಲ್ಲಿ ನಾನೇ ನಿಂತು ಚುನಾವಣೆ ಮಾಡಿದ್ದೆ. ಸೋಮಶೇಖರ್ ಮೇಲೆ ಬಿಜೆಪಿ ಕಾರ್ಯಕರ್ತರ ವಿರೋಧವಿದ್ದರೂ ಅವರ ಮನವೊಲಿಸಿದ್ದೆವು. ಎಸ್ಟಿ ಸೋಮಶೇಖರ್ ಅವರು ನಡೆದುಕೊಂಡ ರೀತಿ ನಿಜಕ್ಕೂ ದುಃಖ ತಂದಿದೆ. ರಾಜಕೀಯದಲ್ಲಿ ಯಾವ ರೀತಿಯ ವ್ಯಭಿಚಾರ ಆಗಬಹುದು ಎಂಬುದಕ್ಕೆ ಇದು ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು
Union Minister for State for Agriculture and Farmers’ Welfare Shobha Karandlaje has demanded NIA probe into the allegations of raising pro-Pakistan slogans in Karnataka legislature premises.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm