ಬ್ರೇಕಿಂಗ್ ನ್ಯೂಸ್
29-02-24 08:00 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಸ್ವಂತ ಮನೆ ಪುನರ್ ನಿರ್ಮಾಣ ಹಂತದಲ್ಲಿದ್ದ ವೇಳೆಯಲ್ಲೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಸಮೀಪದ ಲಕ್ಷ್ಮಿ ಗುಡ್ಡೆ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಮೂಲತಃ ಕುಂಪಲ ಆಶ್ರಯ ಕಾಲನಿ ನಿವಾಸಿ ಧನರಾಜ್ ಪಿ. ಪೂಜಾರಿ(32) ಆತ್ಮಹತ್ಯೆಗೈದ ಯುವಕ. ಆಶ್ರಯ ಕಾಲನಿಯಲ್ಲಿ ನೆಲೆಸಿದ್ದ ಧನರಾಜ್ ಕುಟುಂಬವು ಮನೆ ಪುನರ್ ನಿರ್ಮಾಣದ ಹಿನ್ನೆಲೆಯಲ್ಲಿ ಸಮೀಪದ ಲಕ್ಷ್ಮೀಗುಡ್ಡೆಯ ಬಾಡಿಗೆ ಮನೆಯಲ್ಲಿ ನೆಲೆಸಿತ್ತು. ಅವಿವಾಹಿತನಾಗಿರುವ ಧನರಾಜ್ ದೇರಳಕಟ್ಟೆಯ ಯೆನಪೋಯ ಪಾರ್ಕಲ್ಲಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ. ಇಂದು ಸಂಜೆ ಧನರಾಜ್ ತಾಯಿ ಕೆಲಸ ಮುಗಿಸಿ ಮನೆಗೆ ಮರಳಿದಾಗ ಧನರಾಜ್ ಸೀಲಿಂಗ್ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಧನರಾಜ್ ತಂದೆ ರಿಕ್ಷಾ ಚಾಲಕರಾಗಿರುವ ಲಿಂಗಪ್ಪ ಪೂಜಾರಿಯವರು ಅನಾರೋಗ್ಯಕ್ಕೊಳಗಾಗಿದ್ದು ಇದರಿಂದಾಗಿ ಧನರಾಜ್ ಮನನೊಂದು ಆತ್ಮಹತ್ಯೆಗೈದಿರುವ ಶಂಕೆ ಇದೆ. ಹಿಂದೂ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಧನರಾಜ್ ತಂದೆ, ತಾಯಿ, ಸಹೋದರನನ್ನು ಅಗಲಿದ್ದಾನೆ.
ಸುಸೈಡ್ ಸ್ಪಾಟ್ ಕುಂಪಲ
ಎರಡು ವರ್ಷಗಳ ಹಿಂದೆ ನಡೆದ ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ನಂತರ ಕುಂಪಲ ಪ್ರದೇಶದಲ್ಲಿ ಸಾಲು, ಸಾಲಾಗಿ ಹದಿಹರೆಯದ ಯುವಕ, ಯುವತಿಯರು ಆತ್ಮಹತ್ಯೆಗೈದು ಅಕಾಲಿಕ ಮರಣವನ್ನಪ್ಪುತ್ತಿದ್ದಾರೆ. ಕುಂಪಲ ಪ್ರದೇಶವು ಸುಸೈಡ್ ಸ್ಪಾಟ್ ಆಗಿ ಮಾರ್ಪಟ್ಟಂತೆ ಆಗಿದೆ.
32 year old youth commits suicide at his residence in Kumpala Mangalore. The deceased has been identifying as Dhanraj Poojari.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm