ಬ್ರೇಕಿಂಗ್ ನ್ಯೂಸ್
29-02-24 09:08 pm Mangalore Correspondent ಕರಾವಳಿ
ಉಳ್ಳಾಲ, ಫೆ.29: ಪತ್ನಿ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ತಿಳಿದ ಪತಿಯು ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.
ಕೊಣಾಜೆ ಗ್ರಾಮಚಾವಡಿ ನಿವಾಸಿಗಳಾದ ಸೇಸಪ್ಪ ಪೂಜಾರಿ(60) ಮತ್ತು ಅವರ ಪತ್ನಿ ಮೀನಾಕ್ಷಿ(55) ಮೃತರು.
ಮೀನಾಕ್ಷಿಯವರಿಗೆ ಕಳೆದ ಕೆಲವು ತಿಂಗಳ ಹಿಂದೆಯಷ್ಟೇ ಹೃದಯಾಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಅದರ ಬಳಿಕ ಕಳೆದ ಎರಡು ದಿವಸಗಳ ಹಿಂದೆ ಮೀನಾಕ್ಷಿಯವರಿಗೆ ಎದೆ ನೋವು ಕಾಣಿಸಿಕೊಂಡು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಸಂಜೆ ಮೀನಾಕ್ಷಿ ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದು, ಇದನ್ನು ತಿಳಿದ ಪತಿ ಸೇಸಪ್ಪ ಅವರು ಮನನೊಂದು ಮನೆಯಲ್ಲಿ ವಿಷ ಪ್ರಾಷಣಗೈದಿದ್ದಾರೆ. ನೆರೆಹೊರೆಯ ಮನೆಯವರು ಸೇಸಪ್ಪ ಅವರ ಪ್ರಾಣಸಂಕಟದ ಹೊರಳಾಟ, ಚೀರಾಟದ ಸದ್ದು ಕೇಳಿ ಧಾವಿಸಿದ್ದು ತಕ್ಷಣವೇ ಅವರನ್ನ ಆಸ್ಪತ್ರೆಗೆ ದಾಖಲಿಸಿದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.
ಶಾಲಾ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಸೇಸಪ್ಪ ಪೂಜಾರಿ ದಂಪತಿಗೆ ಮಕ್ಕಳಿಲ್ಲದ ಕೊರಗು ಅನೇಕ ವರ್ಷಗಳಿಂದ ಕಾಡುತ್ತಿತ್ತು. ಗುರುವಾರ ಪತಿ-ಪತ್ನಿಯ ಮೃತದೇಹಗಳನ್ನ ಒಟ್ಟಿಗೆ ಮನೆಗೆ ತಂದು ಬಳಿಕ ಎಲಿಯಾರ್ ಹಿಂದೂ ರುದ್ರಭೂಮಿಯಲ್ಲಿ ದಹನ ಮಾಡಲಾಗಿದೆ.
Mangalore Husband commits suicide after wife dies of heart attack in konaje. The deceased have been identified as senappa and Meenakshi.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
12-09-26 01:10 pm
HK News Staffer
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
12-09-26 03:09 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm