ಬ್ರೇಕಿಂಗ್ ನ್ಯೂಸ್
26-11-20 02:52 pm Mangalore Correspondent ಕರಾವಳಿ
ಮಂಗಳೂರು, ನ.26 : ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
ಶಾಸಕನಾಗಿ ಆಯ್ಕೆಯಾದ ಪ್ರಾರಂಭದ ದಿನಗಳಲ್ಲಿ ನಾಲ್ಯಪದವಿನಲ್ಲಿ ಪದವಿಪೂರ್ವ ಕಾಲೇಜು ಸ್ಥಾಪನೆಯ ಕುರಿತು ಸಾರ್ವಜನಿಕರ ಜೊತೆ ಚರ್ಚಿಸಿ ಸರಕಾರಕ್ಕೆ ಮನವಿ ಸಲ್ಲಿಸಿದ್ದೆ. ಆ ಬಳಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಲ್ಲಿ ಈ ವಿಚಾರವಾಗಿ ಚರ್ಚಿಸಿ ಕಾಲೇಜು ಸ್ಥಾಪನೆಗೆ ಕೋರಿದ್ದೆ. ಇಂದು ಸರಕಾರವು ಆದೇಶ ಸಂಖ್ಯೆ ಇಪಿ 216 ಎಸ್ಎಚ್ಎಚ್ 2020 ಪ್ರಕಾರ ಕಾಲೇಜು ಸ್ಥಾಪನೆಗೆ ಅಧಿಕೃತ ಆದೇಶ ಹೊರಡಿಸಿದ್ದು, ಇದಕ್ಕಾಗಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್, ಶಿಕ್ಷಣ ಇಲಾಖೆಯ ಪ್ರಮುಖ ಅಧಿಕಾರಿಗಳಿಗೂ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಶಕ್ತಿನಗರ ಪರಿಸರದ ವಿಧ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣಕ್ಕಾಗಿ ನಗರಕ್ಕೆ ಬರಬೇಕಿತ್ತು. ಈ ಪರಿಸರದ ಜನರ ಬೇಡಿಕೆಯನ್ನು ಈಡೇರಿಸುವ ಪ್ರಯತ್ನಕ್ಕೆ ಇಂದು ಫಲ ದೊರೆತಿದೆ. ಒಬ್ಬ ಶಾಸಕನಾಗಿ ಜನರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ ನೆಮ್ಮದಿ ಇದೆ. ಇನ್ನು ಮುಂದಿನ ದಿನಗಳಲ್ಲಿ ಈ ಭಾಗದ ವಿಧ್ಯಾರ್ಥಿಗಳು ಶಕ್ತಿನಗರದಲ್ಲೇ ತಮ್ಮ ಪದವಿ ವಿಧ್ಯಾಭ್ಯಾಸ ಮುಂದುವರಿಸಬಹುದು. ಸದ್ಯ ಈಗ ನಾಲ್ಯಪದವಿನಲ್ಲಿರುವ ಶಾಲಾ ಕಟ್ಟಡದಲ್ಲೇ ಕಾಲೇಜು ತರಗತಿ ಪ್ರಾರಂಭಿಸಲಾಗುವುದು. ಇನ್ನು ಮುಂದಿನ ದಿನಗಳಲ್ಲಿ ಕಾಲೇಜಿಗೆ ಹೊಸತಾದ ಕಟ್ಟಡ ನಿರ್ಮಾಣಕ್ಕಾಗಿ ಯೋಜನೆ ರೂಪಿಸಲಾಗುವುದು ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದ್ದಾರೆ.
Govt has ordered for Construction of Degree college in Shaktinagar, Mangalore stated MLA Vedavyas Kamath.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 11:02 pm
HK News Desk
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm