ಬ್ರೇಕಿಂಗ್ ನ್ಯೂಸ್
03-03-24 12:49 pm Mangalore Correspondent ಕರಾವಳಿ
ಉಳ್ಳಾಲ, ಮಾ.3: ಪುರಾಣ ಪ್ರಸಿದ್ಧ ಕೋಟೆಕಾರು ಗ್ರಾಮದ ಕಾರಣಿಕ ಕೊಂಡಾಣ ಕ್ಷೇತ್ರದಲ್ಲಿ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳಿಗೆ ಕ್ಷೇತ್ರಕ್ಕೆ ತಾಗಿಕೊಂಡೇ ನೂತನ ಭಂಡಾರಮನೆ ನಿರ್ಮಾಣಗೊಳ್ಳುತ್ತಿದ್ದು ನಿರ್ಮಾಣ ಹಂತದ ಕಟ್ಟಡವನ್ನ ಕಿಡಿಗೇಡಿಗಳು ಭಾನುವಾರ ಬೆಳಗ್ಗೆ ಜೆಸಿಬಿಯಲ್ಲಿ ನೆಲಸಮಗೊಳಿಸಿ ವಿಕೃತಿ ಮೆರೆದಿದ್ದಾರೆ.
ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಭಂಡಾರಮನೆ ಖಾಸಗಿ ಗುತ್ತಿನ ಮನೆ ಒಡೆತನದಲ್ಲಿದ್ದು ಅದರಲ್ಲಿ ಕ್ಷೇತ್ರದ ದೈವಗಳ ಹದಿನೈದು ಕೋಟಿಗೂ ಮಿಕ್ಕಿ ಬೆಲೆಬಾಳುವ ಒಡವೆಗಳಿದ್ದು ಭಂಡಾರಮನೆಯನ್ನ ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಶತಾಯಗತಾಯ ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ.


ಆ ಹಿನ್ನಲೆ ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣವಾಗಬೇಕೆಂದು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಕಾರಣ, ಕ್ಷೇತ್ರಕ್ಕೆ ತಾಗಿಕೊಂಡ ಜಮೀನನ್ನು ವ್ಯವಸ್ಥಾಪನಾ ಸಮಿತಿಯವರು ಖರೀದಿಸಿದ್ದರು. ಆ ಜಾಗದಲ್ಲಿ ಕಳೆದ ಜನವರಿ 8 ರಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಮುಂದಾಳುತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಎಂಭತ್ತು ಶೇಕಡಾ ಕಾಮಗಾರಿ ಪೂರ್ಣಗೊಂಡಿತ್ತು. ಈಗಿನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಅವಧಿ ಮುಗಿದಿದ್ದು, ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಕಳೆದ ಎರಡು ದಿವಸಗಳ ಹಿಂದಷ್ಟೇ ಅಧಿಕಾರವನ್ನ ಇಲಾಖೆಗೆ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ವಿಮುಕ್ತರಾಗುತ್ತಿದ್ದಂತೆ ಭಾನುವಾರ ಬೆಳಗ್ಗೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆಯನ್ನ ನೆಲಸಮ ಮಾಡಿದ್ದಾರೆ.





ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್, ಎಸಿಪಿ ಧನ್ಯಾ ನಾಯಕ್ ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ಮತ್ತು ಸ್ಥಳೀಯರು ಘಟನೆ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.
ಕ್ಷೇತ್ರದ ಭಕ್ತರಾದ ಕೆ.ಪಿ ಸುರೇಶ್ ಮಾತನಾಡಿ ಭಂಡಾರ ಮನೆ ಒಡೆಯಲು ಗುರಿಕಾರರಾದ ಮುತ್ತಣ್ಣ ಶೆಟ್ಟಿಯೇ ಕಾರಣ ಎಂದು ಎಲ್ಲರಿಗೂ ತಿಳಿದಿದೆ. ಇಲ್ಲಿ ಕಾನೂನು ಪ್ರಕಾರವಾಗಿಯೇ ಭಂಡಾರ ಮನೆ ನಿರ್ಮಿಸಲಾಗಿತ್ತು. ಅದಕ್ಕೆ ಸದಾ ವಿರುದ್ಧವಾಗಿ ಕೋರ್ಟಿನಲ್ಲಿ ದಾವೆ ಹೂಡುತ್ತಿದ್ದದ್ದು ಮುತ್ತಣ್ಣ ಶೆಟ್ಟಿಯೇ ಆಗಿದ್ದು ಅವರ ಚೇಲಾಗಳೇ ಈ ದುಷ್ಕೃತ್ಯ ಎಸಗಿರುವುದಾಗಿ ಆರೋಪಿಸಿದ್ದಾರೆ. ಕ್ಷೇತ್ರವನ್ನ ದೋಚುವ ಗುರಿಕಾರರ ಅಗತ್ಯತೆ ಇಲ್ಲ. ಇಲ್ಲಿ ಮತ್ತೆ ಭಂಡಾರಮನೆ ಪುನರ್ ನಿರ್ಮಾಣ ಆಗಲೇ ಬೇಕು. ಆ ಮೂಲಕ ದೈವಗಳ ಕೋಟಿಗಟ್ಟಲೆ ಬೆಲೆ ಬಾಳುವ ಒಡವೆಗಳನ್ನ ಸೇಫ್ ಲಾಕರಲ್ಲಿ ಇಡುವಂತಾಗಬೇಕೆಂದರು.
Mangalore kotekar Kondana temple Bandaramane demolished by miscreants. Temple officlas suspect that this has been done by some insiders of the temple. Bandaramane was under construction and has been demolished overnight. Ullal police are now investigating the case.
06-01-26 08:23 pm
Bangalore Correspondent
ಸಿನಿಮಾ ಥಿಯೇಟರ್ನ ಮಹಿಳಾ ಶೌಚಾಲಯದಲ್ಲಿ ವಿಡಿಯೋ ರೆ...
06-01-26 12:57 pm
ಅರಣ್ಯ ಸಚಿವ ಈಶ್ವರ ಖಂಡ್ರೆ ಎದುರಲ್ಲೇ ಕೈ ಕೈ ಮಿಲಾಯಿ...
05-01-26 10:06 pm
Devaraj Aras, CM Siddaramaiah: ದೀರ್ಘ ಮುಖ್ಯಮಂತ...
05-01-26 10:00 pm
ಶಾರ್ಟ್ ಸರ್ಕಿಟ್ ; ಹೊಗೆಯಿಂದ ಉಸಿರುಗಟ್ಟಿ ಮಂಗಳೂರು...
05-01-26 08:39 pm
06-01-26 12:40 pm
HK News Desk
ಹರಿದ್ವಾರ - ಹೃಷಿಕೇಶ ಪರಿಸರದಲ್ಲಿ ಹಿಂದುಯೇತರ ವ್ಯಕ್...
05-01-26 02:13 pm
Venezuelan President Maduro: ವೆನಿಜುವೆಲಾ ಅಧ್ಯಕ...
04-01-26 06:38 pm
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
06-01-26 08:25 pm
Mangalore Correspondent
ನವೋದಯ ಟ್ರಸ್ಟ್ ನಿಂದ ಮಹಿಳಾ ಸಬಲೀಕರಣಕ್ಕೆ ಕೊಡುಗೆ ;...
06-01-26 07:51 pm
ಕೋಳಿ ಅಂಕದ ಮೇಲೆ ತೋರುವ ಕಾಳಜಿ, ಸೂರಿಲ್ಲದೆ ಬೀದಿಗೆ...
06-01-26 04:09 pm
ಜ.9ರಿಂದ ತಣ್ಣೀರುಬಾವಿಯಲ್ಲಿ ಬೀಚ್ ಉತ್ಸವ, ಟ್ರಯತ್ಲಾ...
06-01-26 04:01 pm
ಪ್ರೇಮ ವೈಫಲ್ಯ ; ಗುರುಪುರ ನದಿಗೆ ಹಾರಿ ಯುವತಿ ಆತ್ಮಹ...
05-01-26 05:11 pm
06-01-26 07:04 pm
Bangalore Correspondent
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm