ಬ್ರೇಕಿಂಗ್ ನ್ಯೂಸ್
03-03-24 04:24 pm Udupi Correspondent ಕರಾವಳಿ
ಉಡುಪಿ, ಮಾ.3: ಉಡುಪಿ - ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರೇ ಬೈಕ್ ರ್ಯಾಲಿ ನಡೆಸಿದ್ದಾರೆ. ದೊಡ್ಡ ಸಂಖ್ಯೆಯಲ್ಲಿ ಮೀನುಗಾರ ಸಮುದಾಯದ ಕಾರ್ಯಕರ್ತರು ಶೋಭಾ ವಿರುದ್ಧ ಬಹಿರಂಗವಾಗಿಯೇ ಬೈಕ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ಮಲ್ಪೆಯಿಂದ ಉಡುಪಿಯ ಬಿಜೆಪಿ ಕಚೇರಿ ತನಕ ಬೈಕ್ ರ‍್ಯಾಲಿ ಮೂಲಕ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಬಿಜೆಪಿ ಕಚೇರಿ ಮುಂದೆ ಜಮಾಯಿಸಿದರು. ಬಳಿಕ ಜಿಲ್ಲಾಧ್ಯಕ್ಷ ಕಿಶೋರ್ ಕುಂದಾಪುರ ಅವರಿಗೆ ಮನವಿ ಸಲ್ಲಿಸಿದ್ದು, ಶೋಭಾ ಕರಂದ್ಲಾಜೆ ಅವರಿಗೆ ಇನ್ನೊಂದು ಬಾರಿ ಅವಕಾಶ ನೀಡಬಾರದು. ಈಗಾಗಲೇ ಎರಡು ಅವಧಿಗೆ ಈ ಕ್ಷೇತ್ರವನ್ನು ಅವರು ಪ್ರತಿನಿಧಿಸಿದ್ದಾರೆ. ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ಎಂದು ದೂರಿದ್ದಾರೆ. ಈ ಬಾರಿ ಮತ್ತೊಮ್ಮೆ ತಮಗೇ ಟಿಕೆಟ್ ಎಂದು ಓಡಾಡಿಕೊಂಡಿದ್ದಾರೆ. ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ. ಅವರ ಬದಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.
ಕೆಲವು ದಿನಗಳ ಹಿಂದೆ ಮೀನುಗಾರ ಮುಖಂಡರು ಪತ್ರಿಕಾಗೋಷ್ಠಿ ನಡೆಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೆ, ಮೀನುಗಾರ ಮುಖಂಡ ಪ್ರಮೋದ್ ಮಧ್ವರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿದ್ದರು. ಚಿಕ್ಕಮಗಳೂರಿನಲ್ಲಿಯೂ ಗೋ ಬ್ಯಾಕ್ ಶೋಭಾ ಎಂಬ ಅಭಿಯಾನವನ್ನು ಬಿಜೆಪಿ ಕಾರ್ಯಕರ್ತರೇ ನಡೆಸಿದ್ದರು.
Bjp workers took out a bike rally demanding that Union Minister Shobha Karandlaje should not be given a ticket from Udupi-Chikkamagaluru Lok Sabha constituency. A large number of fishermen community activists have openly staged a bike show against Shobha.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm