ಬ್ರೇಕಿಂಗ್ ನ್ಯೂಸ್
03-03-24 07:08 pm Mangalore Correspondent ಕರಾವಳಿ
ಉಳ್ಳಾಲ, ಮಾ.3: ಕೋಟೆಕಾರು ಗ್ರಾಮದ ಕಾರಣಿಕ ಕೊಂಡಾಣ ಕ್ಷೇತ್ರದಲ್ಲಿ ಶ್ರೀ ಪಿಲಿಚಾಮುಂಡಿ, ಬಂಟ, ವೈದ್ಯನಾಥ ಪರಿವಾರ ದೈವಗಳಿಗೆ ನಿರ್ಮಾಣಗೊಳ್ಳುತ್ತಿದ್ದ ನೂತನ ಭಂಡಾರಮನೆಯ ಕಟ್ಟಡವನ್ನ ಜೆಸಿಬಿಯಲ್ಲಿ ನೆಲಸಮಗೊಳಿಸಿದ ಘಟನೆ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಕೊಂಡಾಣ ಕ್ಷೇತ್ರದ ಗುತ್ತಿನ ಗುರಿಕಾರ ಮುತ್ತಣ್ಣ ಶೆಟ್ಟಿ ಮತ್ತು ಪಟಾಲಮನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ತಾವೇ ನಡೆಸಿರೋದಾಗಿ ಒಪ್ಪಿಕೊಂಡಿದ್ದಾರೆ.
ಭಾನುವಾರ ಬೆಳಗ್ಗೆ ಮುಜರಾಯಿ ಇಲಾಖೆಗೆ ಒಳಪಟ್ಟ ಕೊಂಡಾಣ ಕ್ಷೇತ್ರದಲ್ಲಿ ನಿರ್ಮಾಣ ಹಂತದಲ್ಲಿದ್ದ ಭಂಡಾರ ಮನೆಯನ್ನ ಕಿಡಿಗೇಡಿಗಳು ಜೆಸಿಬಿ ಬಳಸಿ ಕೆಡವಿ ಹಾಕಿದ್ದರು. ಪ್ರಕರಣ ಸಂಬಂಧ ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ಆನಂದ್ ನೀಡಿದ ದೂರಿನ ಮೇಲೆ ಉಳ್ಳಾಲ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಆರೋಪಿಗಳಾದ ಮುತ್ತಣ್ಣ ಶೆಟ್ಟಿ, ಧೀರಜ್ ಮತ್ತು ಶಿವರಾಜ್ ಎಂಬವರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಪೊಲೀಸರ ವಿಚಾರಣೆಯಲ್ಲಿ ತಾವೇ ದುಷ್ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾರೆ.
ಕೊಂಡಾಣ ಕ್ಷೇತ್ರವು 16 ಗುರಿಕಾರರನ್ನು ಹೊಂದಿದೆ. ಅನಧಿಕೃತ ಮತ್ತು ಯಾವುದೇ ಅನುಮತಿಯಿಲ್ಲದೆ ನಿರ್ಮಿಸುತ್ತಿರುವ ಹೊಸ ಭಂಡಾರ ಮನೆಗೆ ಕ್ಷೇತ್ರಕ್ಕೆ ಸಂಬಂಧಿಸಿದ ಯಾವುದೇ ಗುರಿಕಾರರು ಒಪ್ಪಿಗೆ ನೀಡಲಿಲ್ಲ. ಈ ಬಗ್ಗೆ ಈಗಾಗಲೇ ಮಂಗಳೂರು ಸಹಾಯಕ ಆಯುಕ್ತ ಹಾಗೂ ತಹಶೀಲ್ದಾರ್‌ಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಕಟ್ಟಡವನ್ನು ತಾವೇ ಕೆಡವಲು ನಿರ್ಧರಿಸಿರುವುದಾಗಿ ಬಂಧಿತ ಆರೋಪಿಗಳು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆಂದು ತಿಳಿದುಬಂದಿದೆ.
ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಪುರಾಣದ ಭಂಡಾರಮನೆಯು ಖಾಸಗಿ ಗುತ್ತಿನ ಮನೆಯ ಒಡೆತನದಲ್ಲಿದ್ದು ಅದರಲ್ಲಿ ಕ್ಷೇತ್ರದ ದೈವಗಳ ಹದಿನೈದು ಕೋಟಿಗೂ ಮಿಕ್ಕಿ ಬೆಲೆಬಾಳುವ ಒಡವೆಗಳಿವೆ. ಭಂಡಾರ ಮನೆಯನ್ನ ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಭಂಡಾರ ಮನೆಯವರು ಸಮ್ಮತಿ ನೀಡಿರಲಿಲ್ಲ. ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣವಾಗಬೇಕೆಂದು ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದ ಕಾರಣ ಕ್ಷೇತ್ರಕ್ಕೆ ತಾಗಿಕೊಂಡ ಜಮೀನನ್ನು ವ್ಯವಸ್ಥಾಪನಾ ಸಮಿತಿಯವರು ಖರೀದಿಸಿದ್ದರು. ಆ ಜಾಗದಲ್ಲಿ ಕಳೆದ ಜನವರಿ 8 ರಂದು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಮುಂದಾಳುತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲಾನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ ಎಂಭತ್ತು ಶೇಕಡಾ ಕಾಮಗಾರಿ ಸಂಪೂರ್ಣಗೊಂಡಿತ್ತು. ವ್ಯವಸ್ಥಾಪನಾ ಸಮಿತಿಯ ಅಧಿಕಾರಾವಧಿ ಮುಗಿದಿದ್ದು, ಸಮಿತಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಕಳೆದ ಎರಡು ದಿವಸಗಳ ಹಿಂದಷ್ಟೇ ಅಧಿಕಾರವನ್ನ ಇಲಾಖೆಗೆ ಹಸ್ತಾಂತರಿಸಿದ್ದರು. ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಮುಕ್ತರಾಗುತ್ತಿದ್ದಂತೆ ಭಾನುವಾರ ಬೆಳಗ್ಗೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆಯನ್ನ ನೆಲಸಮ ಮಾಡಿದ್ದರು.
ಕ್ಷೇತ್ರದ ಭಕ್ತರಾದ ಕೆ.ಪಿ ಸುರೇಶ್ ಅವರು ನಾವು ಕಾನೂನು ಬಧ್ದವಾಗಿಯೇ ಭಂಡಾರ ಮನೆ ನಿರ್ಮಿಸುತ್ತಿದ್ದು , ಭಂಡಾರ ಮನೆ ಒಡೆಯಲು ಕ್ಷೇತ್ರದ ಗುರಿಕಾರರಾದ ಮುತ್ತಣ್ಣ ಶೆಟ್ಟಿಯೇ ಕಾರಣ ಎಂದು ಬೊಟ್ಟು ಮಾಡಿದ್ದರು. ಗುತ್ತು ಮತ್ತು ಗತ್ತಿನ ಒಣ ಪ್ರತಿಷ್ಠೆಯಲ್ಲಿ ಪುರಾಣ ಪ್ರಸಿದ್ಧ ಕಾರಣಿಕ ಕ್ಷೇತ್ರ ಕೊಂಡಾಣದ ಮಾನವನ್ನು ಊರ ಪ್ರಮುಖರೇ ಸೇರಿಕೊಂಡು ಹರಾಜು ಮಾಡುವಂತಾಗಿದೆ.
Mangalore kotekar Kondana temple Bandaramane demolished, three arrested by police. The arrested have been identified as Muttana Shetty, Dheeraj and Shivaraj after a case was registered by chief officer Anand.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
18-09-25 11:44 am
HK News Desk
Vijayapura Bank Robbery: SBI ಬ್ಯಾಂಕ್ ದರೋಡೆ ;...
17-09-25 09:44 pm
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm