ಬ್ರೇಕಿಂಗ್ ನ್ಯೂಸ್
05-03-24 12:02 pm Mangalore Correspondent ಕರಾವಳಿ
ಮಂಗಳೂರು, ಮಾ.5: ಕಡಬದ ಸರ್ಕಾರಿ ಕಾಲೇಜಿನಲ್ಲಿ ಏಸಿಡ್ ದಾಳಿಗೀಡಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿರುವ ಮೂವರು ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿಯಾಗಿದ್ದಾರೆ. ವಿದ್ಯಾರ್ಥಿನಿಯರ ಕುಟುಂಬಕ್ಕೆ ತಕ್ಷಣದ ಪರಿಹಾರವಾಗಿ ತಲಾ ನಾಲ್ಕು ಲಕ್ಷ ರೂಪಾಯಿ ನೀಡಲಾಗುವುದು. ಜೊತೆಗೆ, ವಿದ್ಯಾರ್ಥಿನಿಯರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಲಾಗುವುದು ಎಂದು ನಾಗಲಕ್ಷ್ಮೀ ಚೌಧರಿ ತಿಳಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿನಿಯರು ಮತ್ತು ಅವರ ಕುಟುಂಬಸ್ಥರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಸಾಂತ್ವನ ಹೇಳಿದ ನಾಗಲಕ್ಷ್ಮೀ ಅವರು, ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ವಿದ್ಯಾರ್ಥಿನಿಯರು ಚೆನ್ನಾಗಿದ್ದಾರೆ. ಪಿಯುಸಿ ಪರೀಕ್ಷೆ ಬಗ್ಗೆ ಮಾತ್ರ ಚಿಂತೆಯಿದೆ. ಕನ್ನಡ ಪರೀಕ್ಷೆ ಮತ್ತೆ ಬರೆಯಬೇಕಾ ಎಂದು ಒಬ್ಬಳು ಕೇಳುತ್ತಿದ್ದಾಳೆ. ಮಕ್ಕಳ ಚಿಂತೆ, ಮನಸ್ಥಿತಿ ನನಗೆ ಅರ್ಥವಾಗುತ್ತದೆ. ನನಗೂ ಒಬ್ಬ ಪಿಯುಸಿ ಓದುವ ಮಗನಿದ್ದಾನೆ. ಶಿಕ್ಷಣ ಸಚಿವರನ್ನು ಭೇಟಿಯಾಗುತ್ತೇನೆ, ಶಿಕ್ಷಣದಲ್ಲಿ ಯಾವ ರೀತಿಯ ಸಹಕಾರ ಕೊಡಬೇಕು, ಸಿಇಟಿ ಪರೀಕ್ಷೆ ಬರೆಯಲು ಯಾವ ವ್ಯವಸ್ಥೆ ಮಾಡಬೇಕು ಎಂಬ ಬಗ್ಗೆ ಚರ್ಚಿಸುತ್ತೇನೆ ಎಂದರು.
ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ. ಡಾ. ದಿನೇಶ್ ಚಿಕಿತ್ಸೆ ನೀಡುತ್ತಿದ್ದಾರೆ. ಎರಡು ವಾರಗಳ ಬಗ್ಗೆ ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧಾರ ಮಾಡಲಿದ್ದಾರೆ. ಇಬ್ಬರು ಮಕ್ಕಳಿಗೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಬಹುದು ಎಂದು ತಿಳಿಸಿದ್ದಾರೆ. ಮಕ್ಕಳು, ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸೇತುವೆಯಾಗಿ ಕೆಲಸ ಮಾಡಲು ಬಂದಿದ್ದೇನೆ. ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇನೆ.
ಆರೋಪಿ ಪ್ಲಾಸ್ಟಿಕ್ ಬಾಟಲಿನಲ್ಲಿ ಏಸಿಡ್ ಎರಚಿದ್ದರಿಂದ ಯುವತಿಯರು ಬಚಾವ್ ಆಗಿದ್ದಾರೆ. ಗ್ಲಾಸ್ ಬಾಟಲಿನಲ್ಲಾಗುತ್ತಿದ್ದರೆ ಅದರಿಂದಾಗುವ ಗಾಯ ತುಂಬ ಆಳ ಇರುತ್ತಿತ್ತು. ಆದರೆ ಮಕ್ಕಳಲ್ಲಿ ಮನಸ್ಥೈರ್ಯ ಚೆನ್ನಾಗಿದೆ. ಪರೀಕ್ಷೆ ಬಗ್ಗೆ ಚಿಂತೆ ಮಾಡಬೇಡಿ ಎಂದಿದ್ದೇನೆ. ಮಧ್ಯಾಹ್ನ ಪೊಲೀಸ್ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀಟಿಂಗ್ ನಡೆಸುತ್ತೇನೆ. ಯಾವ ರೀತಿಯ ಏಸಿಡ್ ಬಳಸಿದ್ದಾನೆ ಅನ್ನೋದರ ಬಗ್ಗೆ ತಿಳಿದುಕೊಳ್ಳುತ್ತೇನೆ ಎಂದವರು ಹೇಳಿದ್ದಾರೆ.
ಸದ್ಯಕ್ಕೆ ಮೂವರು ವಿದ್ಯಾರ್ಥಿನಿಯರಿಗೂ ತಲಾ ನಾಲ್ಕು ಲಕ್ಷದಂತೆ ತಕ್ಷಣದ ಪರಿಹಾರವಾಗಿ ಸರ್ಕಾರದಿಂದ ನೀಡಲಾಗುವುದು. ಆನಂತರ, 20 ಲಕ್ಷದಷ್ಟು ಚಿಕಿತ್ಸಾ ವೆಚ್ಚವನ್ನು ಸರಕಾರದಿಂದ ಒದಗಿಸಲಾಗುವುದು. ಅದನ್ನು ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಕೊಡಿಸುವ ವ್ಯವಸ್ಥೆಯನ್ನು ಮಾಡುತ್ತೇನೆ ಎಂದು ಮಹಿಳಾ ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ.
#Acidattack kadaba, Karnataka State Commisson For Women president #NagalakshmiChaudhary visits hospital in #Mangalore. Speaking to the media person she said 4 lacs compensation will be issued to three girls and also treatment cost will be taken by the government. #BREAKING pic.twitter.com/wWuKTcOY56
— Headline Karnataka (@hknewsonline) March 5, 2024
Acid attack kadaba, Karnataka State Commisson For Women president Nagalakshmi Chaudhary visits hospital in Mangalore. Speaking to the media person she said 4 lacs compensation will be issued to three girls and also treatment cost will be taken by the government. She also said two of the girls require plastic surgery which also will be at the cost of the government.
26-11-24 06:56 pm
Bangalore Correspondent
MLA Gaviyappa, Congress: ಗ್ಯಾರಂಟಿ ಸ್ಕೀಂನಿಂದಾಗ...
26-11-24 06:11 pm
Davanagere News, Heart Attack: ಗಂಡ ಹೃದಯಾಘಾತಕ್...
26-11-24 11:52 am
ಜೆಡಿಎಸ್ ನಲ್ಲಿ ಭವಿಷ್ಯ ಇಲ್ಲ, ದೇವೇಗೌಡರಿಗೆ ಜನ ಗೌರ...
25-11-24 05:51 pm
ಮನೆಯೊಂದು ಮೂರು ಬಾಗಿಲು, ಗೆಲುವು ಕಸಿದ ಬಿಜೆಪಿ ಒಳಜಗ...
25-11-24 03:28 pm
23-11-24 11:07 pm
HK News Desk
ಬಿಜೆಪಿ ‘ಗ್ಯಾರಂಟಿ’ಗೆ ಕೈಹಿಡಿಯದ ಜಾರ್ಖಂಡ್ ಮತದಾರ,...
23-11-24 05:34 pm
ಮಹಾರಾಷ್ಟ್ರದಲ್ಲಿ ಕೇಸರಿ ಕಮಾಲ್ ; ನಿರೀಕ್ಷೆಗೂ ಮೀರಿ...
23-11-24 04:33 pm
ಭಾರೀ ವಿವಾದ ಸೃಷ್ಟಿಸಿದ್ದ 'ಎಮರ್ಜೆನ್ಸಿ' ಚಿತ್ರ ಬಿಡ...
18-11-24 03:54 pm
ಶ್ರದ್ಧಾ ವಾಳ್ಕರ್ ಹತ್ಯೆಗೆ ಸೇಡು ತೀರಿಸಲು ಬಿಷ್ಣೋಯಿ...
18-11-24 01:09 pm
26-11-24 05:37 pm
Mangaluru Correspondent
Mangalore Astra Group, lucky draw: ಕಾರು, ಫ್ಲಾ...
25-11-24 11:14 pm
Vithoba Rukumai temple case, Mangalore: ವಿಠೋಬ...
25-11-24 10:39 pm
Ullal Dargah, Mangalore: ಎಪ್ರಿಲ್ 24 ರಿಂದ ಮೇ...
25-11-24 02:44 pm
Kukke Subrahmanya Temple, Mangalore: ನ.27ರಿಂದ...
24-11-24 09:13 pm
26-11-24 03:10 pm
Mangalore Correspondent
ಹುಬ್ಬಳ್ಳಿ ದರೋಡೆ ಪ್ರಕರಣದಲ್ಲಿ ಮಂಗಳೂರು ನಂಟು ; ಉಳ...
25-11-24 06:17 pm
Honeytrap Bangalore, Crime, Udupi: ಪ್ರೊಫೆಸರ್...
24-11-24 04:33 pm
Rowdy sheeter Dawood, Mangalore Crime, Police...
23-11-24 10:49 am
ಟ್ರಾಯ್ ಕಂಪನಿ ಸೋಗಿನಲ್ಲಿ ಕರೆ ; ಅಮೆರಿಕಾದ ಸಾಫ್ಟ್...
22-11-24 10:47 pm